ಸಚಿವ ಸಂಪುಟ ಸಭೆಯಲ್ಲಿ ಬಯಲುಸೀಮೆ ನೀರಿನ ಸಮಸ್ಯೆ ಕುರಿತ ಚರ್ಚೆಗೆ ಆಗ್ರಹ

Date:

ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಘೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಳೆದ 30 ವರ್ಷಗಳಿಂದ ನೀರಾವರಿ ಹೋರಾಟ ನಡೆಯುತ್ತಿದೆ. ಈ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿದೆ. ಅದಕ್ಕಾಗಿ, ಗುರುವಾರ (ಜೂನ್ 19)ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸೇರಿಸಿಕೊಳ್ಳಬೇಕೆಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಆಗ್ರಹಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಹೋರಾಟ ಸಮಿತಿಯ ಅಧ್ಯಕ್ಷ ಆರ್ ಆಂಜನೇಯ ರೆಡ್ಡಿ, “ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ 15 ತಾಲೂಕುಗಳು, 3,870 ಗ್ರಾಮಗಳು ಹಾಗೂ ಸುಮಾರು 2,537 ವಸತಿ ಪ್ರದೇಶಗಳು ನಿರಂತರ ಬರಗಾಲಕ್ಕೆ ತುತ್ತಾಗಿವೆ. ಜಿಲ್ಲೆಗಳಲ್ಲಿ ಹರಿಯುತ್ತಿದ್ದ ಎಲ್ಲ ನದಿಗಳು ಬರಿದಾಗಿವೆ. ಕರೆ, ಕಟ್ಟೆ, ಕೊಳಗಳೂ ಒಣಗಿವೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ಪರಿಹರಿಸುವುದು ಸರ್ಕಾರದ ಮುಖ್ಯ ಆದ್ಯತೆಯಾಗಬೇಕು” ಎಂದು ಹೇಳಿದ್ದಾರೆ.

“ಜಿಲ್ಲೆಗಳಲ್ಲಿ ಸಾವಿರಾರು ಅಡಿಗಳಷ್ಟು ಆಳಕ್ಕೆ ಬಾವಿಗಳನ್ನು ತೋಡಿ, ನೀರು ಮೇಲೆತ್ತಲಾಗುತ್ತಿದೆ. ಆದರೆ, ಆ ನೀರಿನಲ್ಲಿ ಫ್ಲೋರೈಡ್, ನೈಟ್ರೇಟ್, ಯುರೇನಿಯಂ ಹಾಗೂ ಅರ್ಸೆನಿಕ್ ಮುಂತಾದ ವಿಷಕಾರಿ ಅಂಶಗಳಿವೆ. ಆ ನೀರು ಕುಡಿಯಲು ಯೋಗ್ಯವಾಗಿಲ್ಲ. ಅಸುರಕ್ಷಿತ ನೀರು ಸೇವಿಸುತ್ತಿರುವುದರಿಂದ ಮಾರಣಾಂತಿಕ ಖಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಈ ನೀರು ಕುಡಿಯುತ್ತಿರುವುದರಿಂದ ತಾಯಿಯ ಎದೆ ಹಾಲು ಕೂಡ ಫ್ಲೋರೈಡ್ ಪೂರಿತವಾಗಿರುವ ಪರಿಸ್ಥಿತಿ ಎದುರಾಗಿದೆ” ಎಂದು ಸಮಿತಿಯ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಕೆ.ಸಿ ವ್ಯಾಲಿ, ಎಚ್‌.ಎನ್ ವ್ಯಾಲಿ  ಯೋಜನೆಗಳ ಅನುಷ್ಠಾನ ಮಾಡುತ್ತಿರುವ ನಿಗಮ/ನೀರಾವರಿ ಇಲಾಖೆಗಳು ವೈಜ್ಞಾನಿಕ ಸಂಸ್ಥೆಗಳು ನೀಡಿರುವ ಅಧ್ಯಯನ ವರದಿಗಳನ್ನು ನಿರ್ಲಕ್ಷಿಸಿವೆ. ಆ ಅಧ್ಯಯನ ವರದಿಗಳನ್ನು ಇಲಾಖೆಗಳು ಗಂಭೀರವಾಗಿ ಪರಿಗಣಿಸಬೇಕು. ಎತ್ತಿನಹೊಳೆ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆಯ ಭರವಸೆ ಕೊಟ್ಟು 15 ವರ್ಷಗಳು ಕಳೆದುಹೋಗಿವೆ. ಆದರೆ, ಬೊಗಸೆಯಷ್ಟೂ ನೀರು ಜಿಲ್ಲೆಗಳಿಗೆ ಬಂದಿಲ್ಲ. ಎತ್ತಿನಹೊಳೆ ಯೋಜನೆ ನೀರು ಕೊಡುತ್ತೇವೆಂದು ಸುಳ್ಳು ಹೇಳುವುದನ್ನು ಬಿಟ್ಟು, ಪರ್ಯಾಯ ಯೋಜನೆ ಮತ್ತು ಮಾರ್ಗಗಳನ್ನು ಕಂಡುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬರಪೀಡಿತ ಜಿಲ್ಲೆಗಳ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು, ಅವುಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಯಾವೆಲ್ಲ ಕಾರ್ಯ ಯೋಜನೆಗಳನ್ನು ರೂಪಿಸಿದೆ ಎಂಬುದನ್ನು ಜಿಲ್ಲೆಗಳ ಜನರಿಗೆ ತಿಳಿಸಬೇಕು. ಕೃಷ್ಣ-ಪೆನ್ನಾರ್ ನದಿಗಳನ್ನು ಜೋಡಿಸುವ ಬಗ್ಗೆ ಸರ್ಕಾರದ ನಿಲುವೇನು ಎಂಬುದನ್ನು ತಿಳಿಸಬೇಕು. ಈ ಎಲ್ಲ ವಿಚಾರಗಳನ್ನು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆಯಾಗಿ ಚರ್ಚಿಸಬೇಕು. ನಿರ್ಣಯಗಳನ್ನು ಜನರ ಮುಂದಿಸಬೇಕು” ಎಂದು ಸಮಿತಿಯು ಒತ್ತಾಯಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...