ಕಲಬುರಗಿ | ಸಂಪುಟದಿಂದ ಅಮಿತ್ ಶಾ ವಜಾಕ್ಕೆ ಆಗ್ರಹ

Date:

ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೀಳಾಗಿ ಮಾತನಾಡಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿಯಿಂದ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ʼಬಿಜೆಪಿ, ಆರ್‌ಎಸ್‌ಎಸ್ ದೇಶದಲ್ಲಿ ಮನುವಾದ ಹೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಬಿಜೆಪಿಯವರು ಎಂದಿಗೂ ಸಂವಿಧಾನ ಒಪ್ಪುವುದಿಲ್ಲ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಾಗೂ ಸಂವಿಧಾನಕ್ಕೆ ನಿಜವಾಗಿಯೂ ಗೌರವ ಕೊಡುವುದಿಲ್ಲ ಎಂಬುದನ್ನು ಅಮಿತ್‌ ಶಾ ಹೇಳಿಕೆಯಿಂದ ಮತ್ತೊಮ್ಮೆ ದೃಢಪಟ್ಟಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಅಮಿತ್‌ ಶಾ ಹೇಳಿಕೆಯಿಂದ ಕೇವಲ ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಅಲ್ಲ. ಇದು ದೇಶದ ಸಾಮಾಜಿಕ ನ್ಯಾಯದ ಹೋರಾಟವನ್ನು ಆಚರಿಸುವ ಲಕ್ಷಾಂತರ ವಂಚಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಭಾರತ ಸಂವಿಧಾನದ ಮೇಲೆ ಬಿಜೆಪಿಯ ದಾಳಿಯ ವಿರುದ್ಧ ಭಾರತದ ಜನತೆಯ ನಿರಂತರ ಪ್ರತಿರೋಧ ನೀಡಬೇಕಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಿಂದುತ್ವವಾದಿ ಶಕ್ತಿಗಳಿಂದ ನಿರಂತರ ದಾಳಿಗೆ ಒಳಗಾಗಿರುವ ದಲಿತ ದಮನಿತ, ತಳ ಮಟ್ಟದ ಸಮುದಾಯಗಳನ್ನು ಹೋರಾಡುವುದಕ್ಕೆ ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸುವ ಸಂರಕ್ಷಣೆಗಾಗಿ ಅಂಬೇಡ್ಕರ್ ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದ್ದಾರೆ. ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಅಮಿತ್‌ ಶಾ ಅವರು ದೇಶದ ಜನತೆಗೆ ಕ್ಷಮೆ ಕೇಳಬೇಕು. ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗುತ್ತಿಗೆದಾರ ಆತ್ಮಹತ್ಯೆ : ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ವಿರುದ್ಧ ಪ್ರಕರಣ ದಾಖಲು

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ , ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಉಪಾಧ್ಯಕ್ಷ ಮೇಘರಾಜ್ ಕಠಾರೆ, ಕಾಶಿನಾಥ್ ಬಂಡಿ, ಜ್ಯೋತಿ ದೊಡ್ಡಮನಿ, ನಾಗರತ್ನ ಮದನಕರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...