ಕಲಬುರಗಿ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆಗ್ರಹ

Date:

ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್ ಬಿ. ಮಾತನಾಡಿ, ʼಕಲಬುರಗಿ ತಾಲೂಕಿನ ಕುಸನೂರು, ಕುಸನೂರು ತಾಂಡಾ, ನಂದೂರ ತಾಂಡಾ ಹಾಗೂ ಝಾಪುರ್ ಗ್ರಾಮಗಳಲ್ಲಿ ಸುಮಾರು ಕಳೆದ 40 ವರ್ಷಗಳಿಂದ ರೈತರು ತಮ್ಮ ಸಾಗುವಳಿ ಭೂಮಿ ಸಕ್ರಮವಾಗಿ ಪರಿವರ್ತಿಸಿಕೊಳ್ಳಲು ಅರ್ಜಿ ಸಲ್ಲಿಸಿ ದಶಕಗಳಿಂದ ಕಾಯುತ್ತಿದ್ದಾರೆ. ಫಾರಂ ನಂ.50, 53 ಮತ್ತು ಫಾರಂ 57 ಇವುಗಳ ವಿಲೇವಾರಿ ಮಾಡಲಾಗುತ್ತಿಲ್ಲ. ಇದರಿಂದ ನಿಜವಾದ ಭೂ ಸಾಗುವಳಿ ಮಾಡುವವರಿಗೆ ಭೂಮಿ ಸಿಗುತ್ತಿಲ್ಲʼ ಎಂದರು.

ʼಭೂಹೀನ ಮತ್ತು ಬಡ ರೈತರು ಕಂದಾಯ ಹಾಗೂ ಅರಣ್ಯದ ಕುರುಚಲು ಗಿಡ, ಕಲ್ಲು ಭೂಮಿ ಇರುವ ಪ್ರದೇಶಗಳಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದಾರೆ. ಇದು ಬಹುಪಾಲು ರೈತರ ಬದುಕಿಗೆ ಜೀವನಾಧಾರವಾಗಿದೆ. ಎಲ್ಲಾ ಸರ್ಕಾರಗಳು ಬಡ ರೈತರ ಜೀವನದ ವಸ್ತುಸ್ಥಿತಿ ಅರಿವಿದ್ದೇ ಸರ್ಕಾರಕ್ಕೆ ಸೇರಿದೆ ಜಮೀನಿನಲ್ಲಿ ಉಳುಮೆಗೆ ಅವಕಾಶ ಕೊಡುತ್ತಾ ಬಂದಿದೆ. ಆದರೆ ಶಾಸನಬದ್ದವಾಗಿ ಭೂಮಿಯ ಹಕ್ಕು ದೊರೆಯದೆ ಇರುವುದರಿಂದ ಬಗರ್ ಹುಕುಂ ಸಾಗುವಳಿದಾರರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಕೂಡಲೇ ರೈತರಿಗೆ ನ್ಯಾಯ ಒದಗಿಸಿಕೊಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಹಜವಾಗಿ ಇವರಿಗೆ ಕೃಷಿ ಬೆಳೆ ಸಾಲ, ಕೃಷಿ ಪರಿಕರ ಮೇಲಿನ ಸಾಲ ಹಾಗೂ ಇನ್ನಿತರ ಜೀವನೋಪಾಯಕ್ಕಾಗಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಅಲ್ಪಾವಧಿ ಸಾಲ ದೊರೆಯದ ಕಾರಣ ಬಹುತೇಕ ಬಡ ರೈತರು ಬೇರೆ ದಾರಿಯಿಲ್ಲದೆ ಕೈಸಾಲ ಪಡೆದು ಸಂಕಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿ ಅವರನ್ನು ಆತ್ಮಹತ್ಯೆಗೆ ದೂಡುವಂತೆ ಮಾಡುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಸರ್ಕಾರ ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವುದೆಂದರೆ ದೊಡ್ಡ ಕರುಣೆ ಅಥವಾ ಭಿಕ್ಷೆಯಲ್ಲ, ಅದು ನ್ಯಾಯಬದ್ದವಾಗಿ ಕೊಡಬೇಕಾಗಿರುವ ಹಕ್ಕುʼ ಎಂದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಸಂಬಂಧಿಸಿದಂತೆ ತಹಸೀಲ್ದಾರ್‌ ಅವರೊಂದಿಗೆ ಸಭೆ ಕರೆದು ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ವಿತರಿಸುವ ಕುರಿತುಗಿ ಚರ್ಚಿಸಬೇಕು. ಆ ಸಭೆಗೆ ಎಲ್ಲಾ ರೈತ ಸಂಘಟನೆಗಳು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಮಾಹಿತಿ ತಿಳಿಸಬೇಕು ಎಂದು ಕೋರಿದರು.

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಗಾಲ ಅಧಿವೇಶನದಲ್ಲಿ ಈಗ ಸರ್ಕಾರ ಮಾಡಿರುವ ಹಲವು ನಿಯಮಗಳನ್ನು ಸರಳೀಕರಣಗೊಳಿಸಲು ಒತ್ತಾಯಿಸಿ, ಬಡ ರೈತರು ಭೂಮಿಯನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಸ್ತೆ ಅಪಘಾತ : ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಸಾವು

ಈ ಸಂದರ್ಭದಲ್ಲಿ ಶಿವಶರಣಪ್ಪ ದೊಡ್ಮನಿ, ದಶರತ್‌ ತೆಗನೂರ, ಕಾಶಿಪತಿ, ಶರಣಪ್ಪ ತಳವಾರ್‌, ರವಿಚಂದ್ರ, ಪರಶುರಾಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...