ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ನ.8ರಂದು‌ ಅಫಜಲಪುರ ಬಂದ್: ರೈತ ಸಂಘಗಳ ಒಕ್ಕೂಟ ಕರೆ

Date:

ಕಬ್ಬಿನ FRP ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ, ಕಟಿಂಗ್ ಮತ್ತು ಸಾಗಾಣಿಕೆ ವೆಚ್ಚ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು. ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಕೊಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ಸೇರಿದಂತೆ ಇತರೆ ರೈತ ಸಂಘಟನೆಗಳು ಜಂಟಿಯಾಗಿ ನವೆಂಬರ್‌ 8ರಂದು ಅಫಜಲಪುರ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿವೆ.

ಕಲಬುರಗಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಂಚಾಲಕ ಶರಣಬಸಪ್ಪಾ ಮಮಶೇಟ್ಟಿ ಅವರ ನೇತೃತ್ವದಲ್ಲಿ ಬಂದ್‌ ನಡೆಸಲಾಗುತ್ತಿದ್ದು, 15ಕ್ಕೂ ಹೆಚ್ಚು ಬೇಡಿಕೆಗಳನ್ನು ಮುಂದಿಡಲಾಗುತ್ತಿದೆ. ಈ ಬಂದ್‌ಗೆ ಸ್ಥಳೀಯ ವ್ಯಾಪಾರ ಸಂಘಗಳು ಮತ್ತು ಇತರ ಸಂಘಟನೆಗಳ ಬೆಂಬಲ ಸಿಕ್ಕಿದ್ದು, ರೈತರ ಹೋರಾಟವು ಜಿಲ್ಲಾ ಮಟ್ಟದಲ್ಲಿ ಗಮನ ಸೆಳೆಯಲಿದೆ.

“ಸಕ್ಕರೆ ಕಾರ್ಖಾನೆಗಳು ತಿಂಗಳಾದರೂ ರೈತರಿಗೆ ಹಣ ನೀಡದೆ ವಿಳಂಬ ಮಾಡಿರುವ ಉದಾಹರಣೆಗಳುಂಟು. ಹಾಗಾಗಿ ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ರೀತಿ ವಿಳಂಬ ಮಾಡುತ್ತಿರುವ ಕಾರ್ಖಾನೆ ಆಡಳಿತ ಮಂಡಳಿ ಮೇಲೆ ಕಾನೂನು ಕ್ರಮ ಜರುಗಿಸಿ ಹಿಂದೆ ವಿಳಂಬವಾದ ಪಾವತಿಗೆ ನಿಯಮದ ಪ್ರಕಾರ ಶೇ.16 ರಷ್ಟು ಬಡ್ಡಿಯನ್ನು ರೈತರಿಗೆ ನೀಡಬೇಕು. ತೂಕದಲ್ಲಿ ಮತ್ತು ಸಕ್ಕರೆ ಇಳುವರಿಯಲ್ಲಿ ನ್ಯಾಯ ಸಮೃತ ರೀಡಿಂಗ್ ಕಂಡುಬರುತ್ತಿಲ್ಲವೆಂಬ ಗುಮಾನಿ ಇದೆ. ಹಾಗಾಗಿ ತಜ್ಞರ ತಂಡ ರಚಿಸಬೇಕು” ಎಂದು ಆಗ್ರಹಿಸಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ.ಸ್ವಾಮಿನಾಥ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿಪಡಿಸಬೇಕು. ರಾಜ್ಯ ಸರ್ಕಾರದ ಆದೇಶದಂತೆ 2022-23ರಲ್ಲಿ ಸರಬರಾಜು ಮಾಡಿದ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹100 ಬಾಕಿ ಸೇರಿದಂತೆ ಸುಮಾರು 11 ಕೋಟಿಯಷ್ಟು ಹಣವನ್ನು ತಕ್ಷಣ ರೈತರಿಗೆ ನೀಡಬೇಕು. 12 ತಿಂಗಳ ಒಳಗೆ ಕಬ್ಬು ಕಟಾವು ಮಾಡಬೇಕು. ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಸ್, ಕಾಕಂಬಿ, ಎಥೆನಾಲ್, ಡಿಸ್ಟಿಲರಿಸ್, ಸಹವಿದ್ಯುತ್, ಬಯೋ ಕಾಂಪೋಸ್ಟ್, ಪಶು ಆಹಾರ, ಬಗಾಸ್ ಇತರೆ ಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಪಾಲು ನೀಡಬೇಕು” ಎಂದು ಒತ್ತಾಯಿಸಲಾಗುವುದು.

“ಕಟಾವು ಮತ್ತು ಸಾಗಾಣಿಕ ವೆಚ್ಚಕ್ಕೆ ಸಂಬಂಧಪಟ್ಟಂತೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ನಡುವೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲು ಸಮಿತಿ ರಚಿಸಬೇಕು ಮತ್ತು ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು. ಕರ್ನಾಟಕ ಕಬ್ಬು ಖರೀದಿ ಮತ್ತು ಸರಬರಾಜು ನಿಯಂತ್ರಣ ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ 2014ರ ಕಲಂ 4(ಎ)ರಡಿ ಪ್ರದತ್ತವಾದ ಅಧಿಕಾರ ಬಳಸಿ ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಜತೆಗೆ ಹೆಚ್ಚುವರಿಯಾಗಿ ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿಪಡಿಸಲು ಅವಕಾಶವಿದೆ. ಹಾಗಾಗಿ ಟನ್‌ಗೆ 5 ರೂಗಳ ಬೆಲೆ ನಿಗಧಿಪಡಿಸಬೇಕು. ಇಲ್ಲವೇ ತಮಿಳುನಾಡು ಮಾದರಿಯಲ್ಲಿ ಟನ್‌ಗೆ 50 ರೂ. ಪ್ರೋತ್ಸಾಹ ಧನ ನೀಡಬೇಕು. ಸಕ್ಕರೆ ಇಳುವರಿ ಘೋಷಣೆಯಲ್ಲಿ ದೋಷ ಕಂಡುಬರುತ್ತಿದ್ದು, ಕೃಷಿ ವಿಶ್ವವಿದ್ಯಾನಿಲಯ ಹಾಗೂ ಎಸ್‌ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ತಜ್ಞರ ಸಮಿತಿ ರಚಿಸಿ ನೈಜ ಇಳುವರಿ ಘೋಷಣೆ ಮಾಡಿ ಅದರಂತೆ ಬೆಲೆ ನಿಗದಿಪಡಿಸಬೇಕು” ಎಂದು ಆಗ್ರಹಿಸುತ್ತಿದ್ದಾರೆ.

“ಎಥೆನಾಲ್ ಪ್ರಮಾಣವನ್ನು ಶೇ.25ಕ್ಕೆ ಹೆಚ್ಚಿಸಬೇಕು. ಪರ್ಮಿಟ್, ಕಟಾವು, ಸಾಗಾಣಿಕೆ ಸಂದರ್ಭದಲ್ಲಿ ಆಗುವ ತೊಂದರೆಯನ್ನು ನಿವಾರಿಸಬೇಕು. ದುಬಾರಿ ಕಟಾವು ಮತ್ತು ಸಾಗಾಣಿಕ ವೆಚ್ಚಕ್ಕೆ ಕಡಿವಾಣ ಹಾಕಬೇಕು. ರೈತರಿಗೆ ಮಡ್ಡಿ ಹಾಗೂ ಬೂದಿಯನ್ನು ಉಚಿತವಾಗಿ ನೀಡಬೇಕು. KPR ಸಕ್ಕರೆ ಕಾರ್ಖಾನೆ 2023 ಮತ್ತು 2024ರ ಸಾಲಿನ ರೈತರ ಕಬ್ಬು ಸಾಗಾಣಿಕೆ ಮತ್ತು ಕಟಾವು ಮಾಡಿದ ಕಬ್ಬು ಸರಬರಾಜು ಮಾಡಿದ ಟ್ರ್ಯಾಕ್ಟರ್ ಮಾಲೀಕರಿಗೆ ಪ್ರತಿ ಟನ್ ಕಬ್ಬಿನ ₹57 ಬಾಕಿ ಉಳಿಸಿಕೊಂಡ ತಕ್ಷಣವೇ ಮಾಲೀಕರ ಖಾತೆಗೆ ಬಾಕಿ ಹಣ ಜಮಾ ಮಾಡಬೇಕು” ಎಂದರು.

“ಸಕ್ಕರೆ ಇಳುವರಿಯಲ್ಲಿ ರೈತರಿಗೆ ಮೋಸ ಮಾಡಿ FRP ನಿಗದಿ ಮಾಡುತ್ತಾರೆ. ಹೀಗಾಗಿ ಇದು ರೈತ ವಿರೋಧಿಯಾಗಿದೆ. ಆದರೆ FRP ದರವನ್ನೂ ಮೀರಿ ಹೆಚ್ಚುವರಿ ಬೆಲೆ ನಿಗದಿ ಮಾಡಬೇಕು. ರೇಣುಕಾ ಶುಗರ್ಸ್ ಹಾವಳಗಾ ಸಕ್ಕರೆ ಕಾರ್ಖಾನೆ ಒಟ್ಟು 23,000 ಜನ ರೈತರ ಒಟ್ಟು 10 ಲಕ್ಷ ಟನ್ FRP ಪ್ರಕಾರ ಪ್ರತಿ ಟನ್ ಕಬ್ಬಿಗೆ 112 ರೂಪಾಯಿಯಂತೆ ಒಟ್ಟು ಹಣ 11,20,00,000 ಕಬ್ಬಿನ ಬಾಕಿ ಹಣ ಕೊಡಬೇಕು. KPR ಚಿಣಮಗೆರಾ ಸಕ್ಕರೆ ಕಾರ್ಖಾನೆಯಲ್ಲಿ FRP ಪ್ರಕಾರ ಪ್ರತಿ ಟನ್ ಕಬ್ಬಿಗೆ 162 ರೂಪಾಯಿಯಂತೆ ಒಟ್ಟು 25000 ಜನ ರೈತರಿಗೆ ಒಟ್ಟು 11 ಲಕ್ಷ ಟನ್ ಕಬ್ಬಿನ ಬಾಕಿ ಹಣ ಒಟ್ಟು ₹17,82,00,000 ಬಾಕಿ ಹಣ ಕೊಡಬೇಕು. ಕೇಂದ್ರ ಸರ್ಕಾರದ NDRF ಮಾನದಂಡ ಹೆಚ್ಚುವರಿಯಾಗಿ ಘೋಷಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಂಪೂರ್ಣ ಸಾಲ ಮನ್ನಾ ಮಾಡಬೇಕು” ಎಂದು ಆಗ್ರಹಿಸುತ್ತಿದ್ದಾರೆ.

ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲಘಾಣಗಾಪುರ ದತ್ತಾತ್ರೇಯ ದೇವಸ್ಥಾನದ ಜಾತ್ರೆಗೆ ಪ್ರತಿ ವರ್ಷದಂತೆ ಈ ವರ್ಷವೂ ಗೌರಿ ಹುಣ್ಣಿಮೆ ನಿಮಿತ್ಯ ತೆಲಂಗಾಣ, ಆಂದ್ರಪ್ರದೇಶ, ಮಹಾರಾಷ್ಟ್ರ, ಗುಜುರಾತ್‌ ರಾಜ್ಯಗಳಿಂದ ಭಾರೀ ಪ್ರಮಾಣದಲ್ಲಿ ಹೊರರಾಜ್ಯಗಳಿಂದ ಜನಸಾಗರ ಹರಿದುಬರುತ್ತಿದೆ.

ಈ ಸುದ್ದಿ ಓದಿದ್ದೀರಾ? ಜಮಖಂಡಿ | ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿಗೆ ರೈತರ ಆಗ್ರಹ: ಬೃಹತ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಇಡೀ ಪೋಲಿಸರು ಕಾನೂನು ಕಾಪಾಡುವ ನಿಮಿತ್ಯ ಹಾಗೂ ಭಕ್ತರ ಹಿತದೃಷ್ಠಿಯಿಂದ ಜಾತ್ರೆ ಕಾರ್ಯಕ್ರಮದ ಕರ್ತವ್ಯದಲ್ಲಿ ಇರುತ್ತಾರೆ. ಆದ್ದರಿಂದ ಕಬ್ಬು ಬೆಳೆಗಾರರು ತಮ್ಮ ಬೇಡಿಕೆ ಈಡೇರಿಕೆಗಾಗಿ ನವೆಂಬರ್ 5ರಂದು ನಡೆಸಬೇಕಿದ್ದ ಅಫಜಲಪುರ ಬಂದ್‌ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಟ್ಟು 8ಕ್ಕೆ ಮುಂದೂಡಲಾಗಿದೆ.

ಶರಣಬಸಪ್ಪಾ ಮಮಶೆಟ್ಟಿ, ರಮೇಶ ಹೂಗಾರ ಸಿದ್ದರಾಮ ದಣ್ಣೂರು ಅಶೋಕ ಹೂಗಾರ, KSFF ಜಿಲ್ಲಾ ಸಂಚಾಲಕರು, RKBS ಜಿಲ್ಲಾ ಅಧ್ಯಕ್ಷರು, KSFF ರಾಜ್ಯ ಉಪಾಧ್ಯಕ್ಷರು, ಅಧ್ಯಕ್ಷರ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...