ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು ಮಾಡಬೇಕೆಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಕಾಲೇಜು ಮಂಜೂರು ಮಾಡಿಸಲು ತಾಲೂಕಿನ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಹೆಚ್ಚಿನ ಮುತುವರ್ಜಿ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಆಂದೋಲಾ ಗ್ರಾಮ ಹೋಬಳಿ ಕೇಂದ್ರವಾಗಿದೆ. ಜಿಲ್ಲಾ ಪಂಚಾಯತಿ ಮತಕ್ಷೇತ್ರವಾಗಿದೆ. ಉಪ ತಹಶಿಲ್ದಾರರ ಕಚೇರಿ, ಕ್ರಷ್ಣ ಗ್ರಾಮೀಣ ಬ್ಯಾಂಕ್, ಸರ್ಕಾರಿ ಆಸ್ಪತ್ರೆ, ಪಶು ವೈದ್ಯಕೀಯ ಆಸ್ಪತ್ರೆ, ಯುನಾನಿ ಆಸ್ಪತ್ರೆ, ಸರ್ಕಾರಿ ಪ್ರೌಢಶಾಲೆ – ಹೀಗೆ ಹಲವಾರು ಸಾರ್ವಜನಿಕರಿಗೆ ಅನುಕೂಲವಾಗುವಂತ ಎಲ್ಲ ಸೌಕರ್ಯಗಳೂ ಇಲ್ಲಿವೆ. ಪಿಸಿಯು ಕಾಲೇಜು ಮಂಜೂರು ಮಾಡಿದರೆ, ಸುತ್ತಲಿನ ಸುಮಾರು 15 ಹಳ್ಳಿಗಳ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ” ಎಂದು ಅವರು ತಿಳಿಸಿದ್ದಾರೆ.




