ಬೀದರ್‌ | ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿ ವರ್ಗಾಯಿಸಲು ಆಗ್ರಹ

Date:

ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿಗಳನ್ನು ಔರಾದ ತಾಲೂಕಿನಿಂದ ಕಮಲನಗರ ತಾಲೂಕಿಗೆ ವರ್ಗಾಯಿಸುವಂತೆ ಜನಪರ ಹೋರಾಟ ಒಕ್ಕೂಟ ಆಗ್ರಹಿಸಿದೆ.

ಈ ಕುರಿತುಒಕ್ಕೂಟದ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಾಲೂಕು ತಹಸೀಲ್ದಾರ್‌ ಅಮಿತ ಕುಲಕರ್ಣಿ ಅವರಿಗೆ ಸಲ್ಲಿಸಿದರು.

ಜನಪರ ಹೋರಾಟ ಒಕ್ಕೂಟದ ಅಧ್ಯಕ್ಷ ವೈಜಿನಾಥ ವಡ್ಡೆ ಮಾತನಾಡಿ, “ತಾಲೂಕು ರಚನೆಯಾಗಿ ಸುಮಾರು ಆರು ವರ್ಷವಾದರೂ ಕಮಲನಗರದಲ್ಲಿ ತಾಲೂಕು ಕಚೇರಿಗಳು ನಡೆಯುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಜಿಲ್ಲಾಡಳಿತ ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆ ಆಗುತ್ತಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕು ಕೇಂದ್ರದಲ್ಲಿರುವ ಇಲಾಖೆವಾರು ಅಧಿಕಾರಿಗಳಿಗೆ ವೃದಲ್ಲಿ 3 ದಿನ ಸೇವೆಗಾಗಿ ಕಮಲನಗರ ತಾಲೂಕಿಗೆ ಕಡ್ಡಾಯಗೊಳಿಸಬೇಕು. ಗ್ರಾಮ ಪಂಚಾಯಿತಿನಿಂದ ಉದ್ದೇಶಿತ ಖರೀದಿಸಿದ 2.20 ಎಕರೆ ಭೂಮಿ ಕಚೇರಿಗಳ ಕಟ್ಟಡಕ್ಕಾಗಿ ಬಳಸಬೇಕು” ಎಂದು ಆಗ್ರಹಿಸಿದರು.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪ್ರವೀಣ ಕುಲಕರ್ಣಿ ಮಾತನಾಡಿ, “54 ಗ್ರಾಮಗಳ ದಾಖಲೆಗಳನ್ನು ಜೂನ್ 7ರ ಒಳಗಾಗಿ ವರ್ಗಾಯಿಸದಿದ್ದರೆ ಒಕ್ಕೂಟದಿಂದ ತಹಶಿಲ್ದಾ‌ರ್ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ಸಚಿನ ಅಗಾಳೆ, ತಾನಾಜಿ ಮೇತ್ರೆ ತೋರಣಾ, ಸೈಯದ್ ಮುಸಾ ಖತಗಾಂವ್, ಪ್ರಶಾಂತ ಖಾನಾಪುರೆ, ಶ್ರೀರಂಗ ಪರಿಹಾರ, ಭೀಮರಾವ್ ಕಣಜೆ, ವಿಠಲ ಪಾಟೀಲ್ ಬಾಲೂರ, ವಿಷ್ಣುದಾಸ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...