ಧಾರವಾಡ | ಸ್ಮಶಾನ ಭೂಮಿ ಹದ್ದುಬಸ್ತು ಮಾಡಲು ಆಗ್ರಹ

Date:

ಹೊಸ ಎಲ್ಲಾಪುರ ಗ್ರಾಮದಲ್ಲಿ ರುದ್ರಭೂಮಿ ಸಂಪೂರ್ಣ ಹದಗೆಟ್ಟಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದಲ್ಲಿ ಮೃತಪಟ್ಟವರನ್ನು ಹೂಳಲು ಜಾಗವಿಲ್ಲದಂತಾಗಿದೆ. ರುದ್ರಭೂಮಿಯನ್ನು ಹದ್ದುಬಸ್ತು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಶಕುಂತಲಾ ವಾಲಿಕಾರ, “ಹೊಸ ಎಲ್ಲಾಪುರದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದಲ್ಲಿ ಮೃತಪಟ್ಟವರನ್ನು ಹೂಳಲು ಜಾಗವೇ ಇಲ್ಲದಂತಾಗಿದೆ. ಇರುವ ಸ್ಮಶಾನ ಸ್ಥಳವನ್ನು ಹದ್ದುಬಸ್ತು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಗೌರಮ್ಮ, ನಿಂಗಮ್ಮ ಬೆನ್ನಪ್ನವರ್, ಚೆನ್ನಮ್ಮ ಮಾದರ್, ಸಾವಕ್ಕ ಆಡಿನ್, ಭಾರತಿ ಗೋಸಾವಿ, ಜಾನಕಿ, ಫಾರಿದ ಖಾನ್, ಬಾಯಿ ಬಸಂತಿ ಗೋಸಾವಿ, ಲೀಲಾ ಬಾನು, ಗಂಗವಾ ರತ್ನವ್ವ, ಮಲೆದಿ ಶಾಂತವ, ಮಲ್ಲೇ ಡಿ ಬೇಗಂ, ಮಂಜುಳಾ ಶೇಖವ್ವ, ತಳವಾರ್ ಗಿರಿಜವ್ವ, ಹುಬ್ಬಳ್ಳಿ ನೀಲವ್ವ, ತಳವಾರ್ ಮೈನಾ, ಜಮುನಾ ಗೋಸಾವಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...