ಬೀದರ್‌ | ಹುಮನಾಬಾದ್‌ ಪಟ್ಟಣದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

Date:

ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ ಪ್ಯಾಂಥರ್‌ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಪುರಸಭೆ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ  ಸಲ್ಲಿಸಿದರು.

“ಸುಮಾರು 15-20 ದಿವಸಗಳಿಂದ ಪಟ್ಟಣ ವಿವಿಧ ಬಡಾವಣೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಪಟ್ಟಣದ ಉಪಾರ ಗಲ್ಲಿಯಲ್ಲಿರುವ ಕೊಳವೆ ಬಾಔಇಯಿದ್ದರೂ ನೀರಿನ ಟ್ಯಾಂಕ್‌ ಇಲ್ಲದ ಕಾರಣ ನೀರು ಪೋಲಾಗುತ್ತಿದ್ದು, ಹೊಸ ನೀರಿನ ಟ್ಯಾಂಕ್ ಅಳವಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಿಗೆಮ್ಮಾ ದೇವಸ್ಥಾನದ ಹತ್ತಿರ ಒಂದು ಹೊಸ ಬೋರವೆಲ್‌ ಹಾಗೂ ನೀರಿನ ಟ್ಯಾಂಕ್ ಅಳವಡಿಸಬೇಕು. ಉಪಾರ ಗಲ್ಲಿಯಲ್ಲಿ ಅಲ್ಲಲ್ಲಿ ನೀರಿನ ಪೈಪ್‌ ಒಡೆದು ಹಾಳಾಗಿದ್ದು ದುರಸ್ತಿ ಮಾಡಿಸಬೇಕು. ಒಂದು ವೇಳೆ ಬಡವಣೆಗಳಲ್ಲಿನ ನೀರಿನ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಕಚೇರಿ ಮುಂದೆ ಧರಣಿ ಸತ್ಯಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆ ಮೂಲಕ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್‌ ತಾಲೂಕಾ ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಪೀರಪ್ಪ ಪಡತಲ್‌ ಸೇರಿದಂತೆ ಧನರಾಜ ಬರ್ಲಾ, ಶ್ರೀಕಾಂತ್‌ ಜಂಬಗಿ, ಕಿಶೋರ್‌ ಸೂರ್ಯವಂಶಿ, ಅಮೀನಾ ಬೇಗಂ, ಭೀಮಾಬಾಯಿ, ಸುಶಿಲಮ್ಮ, ಶಿಲ್ಪಾ, ಪೆಂಟಮ್ಮ ಹಾಗೂ ಇತರರಿದ್ದರು.

ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...