ಯಾದಗಿರಿ | ಎಲ್ಲ ಕಛೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಅಳವಡಿಸುವಂತೆ ಒತ್ತಾಯ

Date:

  • ರಾಯಣ್ಣ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಆಗ್ರಹ
  • ಶಹಾಪೂರ ತಾಲೂಕು ತಹಸೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಕೆ

ಸರ್ಕಾರಿ, ಖಾಸಗಿ ಕಛೇರಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪೂರ ತಹಸೀಲ್ದಾರ್‌ಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಕಾರ್ಮಿಕರ ಸೇವಕರು ಸಂಘಟನೆ ಜಿಲ್ಲಾಧ್ಯಕ್ಷ ಮಾಳಪ್ಪ ಎಸ್. ಪೂಜಾರಿ ಮಾತನಾಡಿ, “ಅಪ್ರತಿಮ ವೀರರಾಗಿದ್ದ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರು ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿಯಾಗಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸುವುದು ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಾಗಿದೆ. ದೇಶಪ್ರೇಮಿ ರಾಯಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಛೇರಿ, ಖಾಸಗಿ ಶಾಲಾ – ಕಾಲೇಜುಗಳಲ್ಲಿ ಅಳವಡಿಸಿ ಪ್ರತಿವರ್ಷ ಅವರ ಜನ್ಮ ದಿನಾಚರಣೆ ಹಾಗೂ ಹುತಾತ್ಮ ದಿನಾಚರಣೆಯನ್ನು ಆಚರಿಸುವಂತೆ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶವನ್ನು ಪಾಲಿಸದೇ ಇರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಕೂಡಲೇ ಜಾರಿಗೊಳಿಸಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಛೇರಿಗಳಲ್ಲಿ ರಾಯಣ್ಣರವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಬೇಕು. ಅಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮದಿನವೂ ಆಚರಿಸಬೇಕು ಮತ್ತು ಜನವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದೊಂದಿಗೆ ರಾಯಣ್ಣನವರ ಹುತಾತ್ಮ ದಿನಾಚರಣೆ ಆಚರಿಸಬೇಕು. ರಾಯಣ್ಣನವರ ಜೀವನ ಮತ್ತು ಹೋರಾಟದ ಕುರಿತು ಉಪನ್ಯಾಸ ಸೇರಿದಂತೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರದಿಂದ ’ಈ ದಿನ’ ವರದಿ- 5 | ಎಳೆಯ ಕೈಗಳಲ್ಲಿ ಬಂದೂಕು! ಬಂಕರ್‌ಗಳಲ್ಲಿ ಕಂಡ ದುರಂತ ಕಥನ

ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಅಯ್ಯಪ್ಪ ಟನಿಕೆದಾರ, ಹಣಮಂತರಾಯ ಶರಣವರ, ಯಲ್ಲು ಶಹಾಪೂರ, ಖದಿರ್ ಬಾಷಾ ಇಬ್ರಾಹಿಂಪೂರ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...