ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ ಬಲಿ; ಝೀಕಾ ವೈರಸ್​ನಿಂದ ವೃದ್ಧ ಸಾವು

Date:

ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ ಬಲಿಯಾಗಿದ್ದಾನೆ. ಮತ್ತೊಂದೆಡೆ ಶಿವಮೊಗ್ಗದಲ್ಲಿ ಝೀಕಾ ವೈರಸ್‌ನಿಂದಾಗಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಡೆಂಘೀ ಜ್ವರದಿಂದಾಗಿ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಾಲಕ ಗಗನ್ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನು ಶಿವಮೊಗ್ಗದಲ್ಲಿ ಝೀಕಾ ವೈರಸ್‌ಗೆ 74 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಲ್ಲಿ ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗುರುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಶುಕ್ರವಾರ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

ಕೆಲವು ದಿನಗಳ ಹಿಂದೆ ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ತಿಳಿಸಿದೆ.

ಇನ್ನು ಹಾಸನ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ನಾಲ್ಕು ಮಕ್ಕಳು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಇನ್ನು ಮೈಸೂರಿನ್ಲಲಿ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಅವರು ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...