ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

Date:

ಕರ್ತವ್ಯ ಲೋಪ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ದಾಖಲೆಗಳಿಂದ ಸಾಬೀತು ಆಗಿರುವುದರಿಂದ ಚಿಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿ ಸಮುದಾಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ್ ಜಾದವ್‌ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆ ಹಿರೇಸಿಂದೋಗಿಯ ಸಮುದಾಯ ಕೇಂದ್ರದ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಅವರನ್ನು ಸ್ಥಳಾಂತರಿಸಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ʼಡಾ.ಲಕ್ಷ್ಮಣ್ ಜಾದವ್ ಅವರು ಸಿಬ್ಬಂದಿ ಸಂಬಳ ತಡೆಹಿಡಿದು ಅವರಿಗೆ ಹೆದರಿಸಿ ಕಡತಗಳಿಗೆ ಸಹಿ ಪಡೆದಿದ್ದಾರೆ. ಅವರಿಗೆ ಅಗೌರವದಿಂದ ನಡೆದುಕೊಂಡಿದ್ದಾರೆ. ರೋಗಿಗಳಿಗೆ ಸೂಕ್ತ ಸೇವೆ ನೀಡುವಲ್ಲಿ ವಿಫಲರಾಗಿದ್ದಾರೆ. ಆಡಳಿತ ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ್ದಾರೆ. ದರಪಟ್ಟಿ ಆಹ್ವಾನಿಸದೆ ಹೆಚ್ಚಿನ ಬೆಲೆಗೆ ಔಷಧಿಗಳನ್ನು ಖರೀದಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿ ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿರುವುದರಿಂದ ಅಮಾನತು ಮಾಡಲಾಗಿದೆʼ ಎಂದು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...