ಫೇಸ್‌ಬುಕ್‌ನಲ್ಲಿ ಫೋಟೋ ಹಾಕಿ ಮಹಿಳೆಯರ ತೇಜೋವಧೆ: ಪುನೀತ್ ಕೆರೆಹಳ್ಳಿ ಹಿಂಬಾಲಕ ಪದ್ದು ಮಹಾರಾಜ್‌ಗೆ ಧರ್ಮದೇಟು!

Date:

ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕನ್ನಡಪರ ಹೋರಾಟಗಾರನೋರ್ವ ಹಾಗೂ ಮತ್ತವರ ಕುಟುಂಬದ ಮಹಿಳೆಯರ ಫೋಟೋ ಹಾಕಿ, ತೇಜೋವಧೆ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯ ಹಿಂಬಾಲಕ ಹಾಗೂ ಸಂಘಪರಿವಾರದ ಕಾರ್ಯಕರ್ತನಿಗೆ ಧರ್ಮದೇಟು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಜೆ ನಡೆದಿದೆ.

ಸಾರ್ವಜನಿಕರಿಂದ ಪೆಟ್ಟು ತಿಂದ ವ್ಯಕ್ತಿಯನ್ನು ಪದ್ದು ಮಹಾರಾಜ್ ಎಂದು ಗುರುತಿಸಲಾಗಿದೆ.

ಫೇಸ್‌ಬುಕ್‌ನಲ್ಲಿ ‘ತಪ್ಪು ಮಾಡುವವರ ಅಪ್ಪ ನಾನೆ’ ಎಂಬ ಐಡಿಯಲ್ಲಿ ಲೈವ್‌ ಮಾಡುತ್ತಾ, ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದುದ್ದಲ್ಲದೇ, ಅವಾಚ್ಯ ಶಬ್ದಗಳನ್ನು ಬಳಸುತ್ತಿದ್ದನು. ಇತ್ತೀಚೆಗೆ ಕನ್ನಡಪರ ಹೋರಾಟಗಾರ ನಟರಾಜ್ ಬೊಮ್ಮಸಂದ್ರ ಎಂಬುವವರ ಮನೆಯವರ ಫೋಟೋ ಹಾಕಿ, ಈ ಪೋಸ್ಟ್‌ ಡಿಲೀಟ್ ಮಾಡಬೇಕೆಂದರೆ 50 ಸಾವಿರ ನೀಡುವಂತೆ ಬಹಿರಂಗವಾಗಿ ಬೆದರಿಸಿದ್ದ. ಅಲ್ಲದೇ, ಚಾಕು ತೋರಿಸಿ, ಪಕ್ಕದಲ್ಲೇ ಇಟ್ಟಿರುತ್ತೇನೆ. ತಾಕತ್ತಿದ್ದರೆ ಬನ್ನಿ ಎಂದು ಸವಾಲೆಸೆದು, ಮನೆಯ ವಿಳಾಸವನ್ನೂ ನೀಡಿದ್ದನು. ಫೇಸ್‌ಬುಕ್‌ ಲೈವ್‌ನಲ್ಲೇ ಜೀವ ಬೆದರಿಕೆ ಹಾಕಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಸಂಜೆ ಈತನನ್ನು ಪತ್ತೆ ಹಚ್ಚಿದ ಅವಮಾನಕ್ಕೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು, ಧರ್ಮದೇಟು ನೀಡಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ಪದ್ದು ಮಹಾರಾಜ್‌ನ ತಾಯಿ ಹಾಗೂ ಸಹೋದರಿಯನ್ನು ಕರೆಸಿಕೊಂಡಿದ್ದಾರೆ.

ಈತ ಸಂಘಪರಿವಾರದ ಕಾರ್ಯಕರ್ತನಂತೆ ಫೋಸು ಕೊಟ್ಟು, ಪುನೀತ್ ಕೆರೆಹಳ್ಳಿಯ ಸಹವಾಸ ಕೂಡ ಮಾಡಿದ್ದ. ಸದ್ಯ ಈತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದು, ದೂರು ದಾಖಲಿಸಿದ್ದಾರೆ.

ಈತ ಈ ಹಿಂದೆ, ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ‌ನವರಿಗೆ ಕರೆ ಮಾಡಿ ಬಾಯಿಗೆ ಬಂದಂತೆ ಬಯ್ದು ಹೆಣ್ಣುಮಗುವನ್ನು ರೇಪ್ ಮಾಡ್ತಿನಿ ಎಂದು ಬೆದರಿಕೆಯೂ ಹಾಕಿದ್ದ. ಕುಮಾರಸ್ವಾಮಿ ಲೇಔಟ್‌ನ ಪೊಲೀಸರು ಬಂಧಿಸಿ, ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...