ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ

Date:

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲಾ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಇಂದು (ಜು. 28) ಆರೋಪಿ ಶಕುಂತಲಾ ನಟರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಕುಂತಲಾ

ತುಮಕೂರು ಮೂಲದ ಶಕುಂತಲಾ ನಟರಾಜ್​ ಈ ಥರ ವಿವಾದಾತ್ಮಕ ಟ್ವೀಟ್‌ ಮಾಡುತ್ತಿರುವುದು ಇದೇ ಮೊದಲೇನಲ್ಲ.
ಒಡಿಸ್ಸಾದಲ್ಲಾದ ತ್ರಿವಳಿ ರೈಲು ದರಂತದಲ್ಲಿ 250ಕ್ಕೂ ಹೆಚ್ಚು ಜನರು ಮೃತಪಟ್ಟಾಗ, ಆ ಘಟನೆಗೂ ಧರ್ಮದ ಬಣ್ಣ ಬಳಿದಿದ್ದರು.

ಘಟನಾ ಸ್ಥಳದಲ್ಲಿ ಮಸೀದಿ ಇದ್ದಿದ್ದರಿಂದಲೇ ತ್ರಿವಳಿ ರೈಲು ಅಪಘಾತವಾಗಿದೆ ಎಂಬರ್ಥದ ಪೋಸ್ಟ್‌ಗಳನ್ನು ಮಾಡಲಾಗಿತ್ತು. ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ಹಂಚಿಕೊಂಡ ಫೋಟೋ ಮಸೀದಿಯದ್ದಾಗಿರಲಿಲ್ಲ, ಇಸ್ಕಾನ್‌ ದೇವಾಲಯವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...