ಕೋಲಾರ | ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಮುಖಂಡನ ಬಂಧನ

Date:

ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಅವಹೇಳನಕಾರಿ ಪೋಸ್ಟ್‌ ಮೂಲಕ ಮುಸ್ಲಿಂ ಸಮುದಾಯ ವಿರುದ್ಧ ದ್ವೇಷ ಬಿತ್ತಲು ಯತ್ನಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡ ಎಂದು ಹೇಳಲಾಗಿದೆ. ಬಂಧಿತರನ್ನು ನವೀನ್ ಜೈನ್, ಚೇತನ್​ ಎಂದು ಗುರುತಿಸಲಾಗಿದೆ.

ಹೆಚ್ಚು ಮಕ್ಕಳನ್ನು ಹೆರುವವರಿಗಾಗಿ ತೆರಿಗೆ ಕಟ್ಟಿರಿ ಎಂದು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್‌ಅನ್ನು ಬರೆದು ಹಂಚಿಕೊಳ್ಳಲಾಗಿತ್ತು. ತಮ್ಮ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಹಿನ್ನಲೆ ಮುಸ್ಲಿಂ ಮುಖಂಡರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ನಿರಂತರವಾಗಿ ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ಮೋದಿ ಅವರು ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಹೆಚ್ಚು ಮಕ್ಕಳನ್ನು ಹೆರುವವರಿಗೆ ನಿಮ್ಮ ಆಸ್ತಿಯನ್ನು ಕೊಡುತ್ತದೆ. ಅದಕ್ಕಾಗಿ, ಹಿಂದು ಹೆಣ್ಣುಮಕ್ಕಳ ಮಂಗಳಸೂತ್ರವನ್ನೂ ಬಿಡುವುದಿಲ್ಲ’ ಎಂದು ಹೇಳಿದ್ದರು. ಅವರ ಹೇಳಿಕೆಗಳ ನಂತರ ಇಂತಹ ಪೋಸ್ಟ್‌ಗಳು ವೈರಲ್‌ ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...