ಗಾಂಧಿ ಪ್ರತಿಮೆ ಧ್ವಂಸ | ಕೃತ್ಯ ಎಸಗಿದವರ ಮೇಲೆ ಕಠಿಣ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದು, ಕಿಡಿಗೇಡಿಗಳ ಈ ಕೃತ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌) ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.

“ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...