ದೇವದುರ್ಗ | ಅಕ್ರಮ ಮರಳು ಮಾಫಿಯಾದಿಂದ ಜೀವ ಬೆದರಿಕೆ; ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಆರೋಪ

Date:

ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಕಲ್ಪಿಸಬೇಕು, ಇಲ್ಲದಿದ್ದರೆ ಪರಿಣಾಮಗಳು ಸರಿಯಾಗಿರುವುದಿಲ್ಲ ಎಂದು ನೂರಾರು ಮರಳು ಸಾಗಿಸುವವರು ತಮ್ಮ ನಿವಾಸಕ್ಕೆ ಬಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಆರೋಪಿಸಿದ್ದಾರೆ.

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಕ್ರಮ ಮರಳು ದಂಧೆಯವರು ಕಳೆದ ರಾತ್ರಿ ಏಕಾಏಕಿ ನಮ್ಮ ನಿವಾಸಕ್ಕೆ ಬಂದು, ಮರಳು ಸಾಗಾಣಿಕೆಗೆ ಹಾಗೂ ರಾಯಲ್ಟಿ ಇಲ್ಲದೆ ಸಾಗಿಸುವ ಅವಕಾಶ ನೀಡಬೇಕು ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾರೆ ಎಂದರು.

ಅಕ್ರಮ‌ ಮರಳು, ಮಟ್ಕಾ, ಗಾಂಜಾ, ಅಕ್ರಮ ಮದ್ಯ ಸಾಗಾಣಿಕೆಗೆ ನಾನು ಬೆಂಬಲಿಸಲ್ಲ ಹಾಗೂ ಅನುಮತಿ ಕೂಡ ನೀಡಲ್ಲವೆಂದು ಖಡಕ್ ಸೂಚಿಸಿದರು ಕೂಡ ನೂರಾರು ಜನ ಮನೆಯೇ ಮುಂದೆಯೇ ಇದ್ದರು. ದೇವದುರ್ಗ ತಾಲೂಕಿನಲ್ಲಿ ಮರಳು ಮಾಫಿಯಾದವರ ಅಟ್ಟಹಾಸ ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಮರಳು ಸಾಗಾಣಿಕೆ ಅನುಮತಿಗೆ ಹಾಗೂ ನನ್ನ ಮನೆಗೆ ಬಂದು ನನಗೆ ಜೀವ ಬೆದರಿಕೆ ಹಾಕುವ ಗೂಂಡಗಳ ರೀತಿಯಲ್ಲಿ ವರ್ತಿಸುವ ಉದ್ದೇಶದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಅಕ್ರಮ‌ ಮರಳು ಸಾಗಣಿಕೆಯನ್ನು ತಡೆ ಗಟ್ಟುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಇಲಾಖೆಯೇ ಅಕ್ರಮ ಸಹಕಾರ‌ ನೀಡುತ್ತಿರುವುದರಿಂದ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ನೂರಾರು ಕೋಟಿ ಕಾಮಗಾರಿಗಳು ತಾಲೂಕಿನಲ್ಲಿ ನಡೆಯುತ್ತಿವೆ. ನಮಗೂ ಮರಳಿನ ಅವಶ್ಯಕತೆ ಇದೆ. ಕಾಮಗಾರಿಗಳಿಗೆ ಟ್ರ್ಯಾಕ್ಟರ್ ಮೂಲಕ ಮರಳನ್ನು ಪಡೆಯುತ್ತಿದ್ದೇವೆ. ಟ್ರ್ಯಾಕ್ಟರ್ ಮೂಲಕ ಮರಳು ಸಾಗಿಸಿದರೆ ಯಾರಿಗೂ ಆಭ್ಯಂತರವಿಲ್ಲ ದೊಡ್ಡ ಟಿಪ್ಪರ್ ಗಳ ಮೂಲಕ ಮರಳನ್ನು ಬೇರೆ ರಾಜ್ಯಗಳಿಗೆ ಹಾಗೂ ಹೊರ ಜಿಲ್ಲೆಗಳಿಗೆ ರಾಯಲ್ಟಿ ಇಲ್ಲದೆ ಮರಳು ಸಾಗಿಸುವುದು ಕಾನೂನು ಬಾಹಿರ. ರಾಯಲ್ಟಿ ಇಲ್ಲದೆ ಮರಳು ಸಾಗಣಿಕೆಗೆ ಕಡಿವಾಣ ಹಾಕಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಅಕ್ರಮ ಮರಳು,ಮಟ್ಕಾ,ಗಾಂಜಾ,ಅಕ್ರಮ ಮದ್ಯ ಮಾರಾಟ ಮಾಡುವವರ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಲಾರಿ ಹರಿದು 08 ಕ್ಕೂ ಹೆಚ್ಚು ಕುರಿಗಳು ಸಾವು

ಇದೇ ಸಂದರ್ಭದಲ್ಲಿ ಶರಣಪ್ಪ ಬಳೆ, ಅಮರೇಶ ಪಾಟೀಲ್, ಬಸನಗೌಡ ದೇಸಾಯಿ, ಇಸಾಕ್ ಮೇಸ್ತ್ರಿ, ಗೋವಿಂದ ರಾಜ್ ನಾಯಕ್,ಶಾಲಂ ಉದ್ದಾರ್ ಮತ್ತಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...