ಸಾಹಿತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: 100ಕ್ಕೂ ಹೆಚ್ಚು ಪತ್ರ ಬರೆದಿದ್ದ ಆರೋಪಿ

Date:

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ್ ಇದೂವರೆಗೂ ಸುಮಾರು 100ಕ್ಕೂ ಹೆಚ್ಚು ಪತ್ರಗಳನ್ನು ಬರೆದ್ದಾಗಿ ಸಿಸಿಬಿ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದಲ್ಲಿ ಆರೋಪಿ, ಹಿಂದು ಜಾಗರಣ ವೇದಿಕೆ ಸಹ ಸಂಚಾಲಕ ಜಾಧವ್‌ನನ್ನು ಸಿಸಿಬಿ ಪೊಲೀಸರು ದಾವಣಗೆರೆಯ ಜಾಲಿ‌ನಗರ ಇಡ್ಲೂಎಸ್​ ಕಾಲೋನಿಯಲ್ಲಿ ಬಂಧಿಸಿದ್ದರು.

ಆತನನ್ನು ಪೊಲೀಸರು ವಿಚಾರಣೆಗೆ ಒಳಪಿಡಿಸಿದ್ದು, ಆತ ಇದೂವರೆಗೂ 100 ಬೆದರಿಕೆ ಪತ್ರ ಬರೆದಿದ್ದು, ಅವುಗಳನ್ನು ವಿವಿಧ ಅಂಚೆ ಕಚೇರಿಗಳ ಮೂಲಕ ಪೋಸ್ಟ್‌ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಶಿವಾಜಿರಾವ್ ಜಾಧವ್ 8ನೇ ತರಗತಿವರೆಗೆ ಓದಿದ್ದಾನೆ. ಆತನಿಗೆ ಪತ್ರ ಬರೆಯಲು ಹಲವರು ಸಾಥ್ ನೀಡಿದರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆರೋಪಿಯು ತಾನು ಬರೆದ ಪತ್ರಗಳನ್ನು ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಸೇರಿದಂತೆ ವಿವಿಧ ಪಟ್ಟಣಗಳಿಗೆ ತೆರಳಿ, ಅಲ್ಲಿಂದ ಪೋಸ್ಟ್‌ ಮಾಡುತ್ತಿದ್ದ ಎಂದು ಹೇಳಲಾಗಿದೆ. ಆತನ ವಿರುದ್ಧ ಬೆಂಗಳೂರಿನ ಸಂಜಯನಗರ, ಬಸವೇಶ್ವರನಗರ, ಹಾರೋಹಳ್ಳಿ, ಚಿತ್ರದುರ್ಗ ಹಾಗೂ ಕೊಟ್ಟೂರಿನಲ್ಲಿ ದೂರುಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...