ದಾವಣಗೆರೆ | ಮೈಸೂರಿನಲ್ಲಿ ಕ್ರಾಂತಿಕಾರಿ ರಥಯಾತ್ರೆ ಹೋರಾಟಗಾರರ ಬಂಧನ. ದಲಿತ ಸಂಘಟನೆಗಳ ಒಕ್ಕೂಟ ಖಂಡನೆ.

Date:

“ಕ್ರಾಂತಿಕಾರಿ ರಥಯಾತ್ರೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಚಾಮುಂಡಿ ಬೆಟ್ಟದಿಂದ ಮೈಸೂರಿಗೆ ಬರುವ ರಥಯಾತ್ರೆ ಚಾಮುಂಡಿ ಬೆಟ್ಟದಲ್ಲಿ ದಿನಾಂಕ: 24-05-2025 ರಂದು ಶಾಂತಿಯುತವಾಗಿ ಅರೆಬೆತ್ತಲೆ,  ಧರಣಿ ಮಾಡುವ ಸಂದರ್ಭದಲ್ಲಿ ಕಲ್ಲು ತೂರಲು ಪ್ರಯತ್ನಿಸಿದ 4 ಜನ  ರಾಜಕೀಯದ ಬೆಂಬಲಿಗರನ್ನು ಬಂಧಿಸಿ ಜೈಲಿಗಟ್ಟುವ ಬದಲು ಶಾಂತಿಯುತವಾಗಿ ರಥಯಾತ್ರೆ ಮಾಡುವವರನ್ನು ಬಂಧಿಸಿರುವ ಪೊಲೀಸರ ಕ್ರಮ ಸಂದೇಹಾಸ್ಪದ ಮತ್ತು ಮಾದಿಗ ಮೀಸಲಾತಿ ಹೋರಾಟ ಹತ್ತಿಕ್ಕುವ ಕೆಲಸ” ಎಂದು ದಾವಣಗೆರೆ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಕಿಡಿಕಾರಿದರು.

1002058752 1

ದಾವಣಗೆರೆಯಲ್ಲಿ ಮಾದಿಗ ಮೀಸಲಾತಿಗಾಗಿ ಕ್ರಾಂತಿಕಾರಿ ರಥಯಾತ್ರೆ ಮಾಡುತ್ತಿರುವವರನ್ನು ಬಂಧಿಸಿದ ಕ್ರಮ ವಿರೋಧಿಸಿ, ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಒಕ್ಕೂಟದ ಮುಖಂಡ ಬಸವರಾಜು, “ಕಲ್ಲು ತೂರಾಟಕ್ಕೆ ಪ್ರಯತ್ನಿಸಿದ ರಾಜಕೀಯ ಬೆಂಬಲಿಗರನ್ನು ಕಾನೂನು ಕ್ರಮವಾಗಿ ಬಂಧಿಸಬೇಕಿತ್ತು. ಆದರೆ ಕ್ರಾಂತಿಕಾರಿ ರಥಯಾತ್ರೆಯನ್ನು  ಶಾಂತಿಯುತವಾಗಿ ಅರಬೆತ್ತಲೆ, ಧರಣಿ ಮಾಡುವವರನ್ನು ಬಂಧಿಸಿರುತ್ತಾರೆ” ಎಂದು ಕಿಡಿಕಾರಿದರು.

ಒಕ್ಕೂಟದ ಮುಖಂಡ ದುಗ್ಗಪ್ಪ ಮಾತನಾಡಿ “ಬಂಧನಕ್ಕೊಳಪಡಿಸಿರುವುದು ಯಾವ ಕಾರಣಕ್ಕೆ ಎಂಬುವುದರ ಬಗ್ಗೆ ಸ್ಪಷ್ಟತೆ ಇಲ್ಲ. ನಿಖರ ಮಾಹಿತಿ ಜನಗಳಿಗೆ ತಿಳಿಸಬೇಕು. ಶಾಂತಿಯುತ ಅರೆಬೆತ್ತಲೆ ಮೈಸೂರಿಗೆ ಹೋಗುವ ಸಂದರ್ಭದಲ್ಲಿ ಅರೆಸ್ಟ್ ಮಾಡಿದ್ದಾರೆ. ಕೆಲವರು ವಿರೋಧ ಮಾಡುತ್ತಿದ್ದಾರೆಂದು ಪೊಲೀಸರು ಹೇಳುತ್ತಿದ್ದಾರೆ. ನಿಖರವಾದ ಮಾಹಿತಿ ಇಲ್ಲ ಒಳಮೀಸಲಾತಿ ಹೋರಾಟದ ಪಾದಯಾತ್ರೆ ಅಡ್ಡಿ ಮಾಡುವವರನ್ನು ಕಾನೂನು ಕ್ರಮ ಜಾರಿ ಮಾಡಿ ತಕ್ಷಣ ಬಂಧಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ಮಾಡುವ ಸಂದರ್ಭದಲ್ಲಿ ಗಲಾಟೆ, ಗಲಭೆ ಎಬ್ಬಿಸಲು ಕುತಂತ್ರ ನಡೆಸಲು ಬಂದಿರುವ 4 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಜಿಗಳಿ ಹಾಲೇಶ್ ಮಾತನಾಡಿ “ಮಾದಿಗ ಮೀಸಲಾತಿ ಹೋರಾಟ ಸಮಿತಿಯವರು ಬೀದಿಗಳಿದು ಹೋರಾಟ ಮಾಡಿದರೆ ಬಂಧಿಸುತ್ತೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ಮೈಸೂರಲ್ಲಿ ಆಗುತ್ತೆ ಅಂತ ನೆಪ ಹೇಳುತ್ತಿದ್ದಾರೆ. ಕ್ರಾಂತಿಕಾರಿ ರಥಯಾತ್ರೆ ಕಾರ್ಯಕರ್ತರನ್ನು ಕೈ, ಮೈ ಮುಟ್ಟಿ ಎಳೆದಾಡುತ್ತಿದ್ದಾರೆ. ಪೊಲೀಸರು ಕಾರಣ ಇಲ್ಲದೆ ಬಂಧನ, ಆಧಾರವಿಲ್ಲದೆ ರಥಯಾತ್ರೆ ತಡೆಯುತ್ತಿದ್ದಾರೆ. ಸರ್ಕಾರ ಬಡ್ತಿ ಮೀಸಲಾತಿ ನಿಲ್ಲಿಸಬೇಕು. ಸರ್ಕಾರ ತುಳಿತಕ್ಕೊಳಗಾಗಿರುವ ಮಾದಿಗ ಸಮಾಜಕ್ಕೆ ರಕ್ಷಣೆ ಕೊಡುವುದು ಬಿಟ್ಟು ಮಾದಿಗರ ಹೋರಾಟ ಹತ್ತಿಕ್ಕುವ ದುಸ್ಸಾಹಸ ಮಾಡುತ್ತಿದೆ. ನ್ಯಾಯ ಒದಗಿಸಲು ಮಾದಿಗ ಮೀಸಲಾತಿ ಹೋರಾಟದ ಕ್ರಾಂತಿಕಾರಿ ಪಾದಯಾತ್ರೆ ಜೂನ್-09, 2025 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪಾದಯಾತ್ರೆ ಬರುವ ತನಕ ಪೊಲೀಸ್ ಬಂದೋಬಸ್ತು ಮಾಡಲು ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ  ಹೆಗ್ಗೆರೆ ರಂಗಪ್ಪ, ಉದಯಪ್ರಕಾಶ್, ನಾಗರಾಜ್, ನಿರಂಜನ್ ಮೂರ್ತಿ, ಮಂಜುನಾಥ್, ಹನುಮಂತಪ್ಪ, ಅಂಜನಿ, ಸಂತೋಷ್, ಮಂಜುನಾಥ್ ಬಿ, ಸದಾನಂದ, ಕಿರಣ್, ಮಂಜುನಾಥ್ ಕೆ. ಸೇರಿದಂತೆ ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ...

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...