ದಾವಣಗೆರೆ | ತ್ಯಾಗ ಬಲಿದಾನದ ಸಂಕೇತ ಬಕ್ರೀದ್; ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ.

Date:

ಹಿರಿಯರಿಗೆ ಪೂಜೆ, ಗೌರವ ಸೂಚಿಸುವ ಹಾಗೂ ತ್ಯಾಗ ಬಲಿದಾನದ ಸಂಕೇತವಾಗಿರುವ ಈದ್ ಅಲ್-ಅಧಾ ಅಥವಾ ಬಕ್ರೀದ್ ಹಬ್ಬವನ್ನು ದಾವಣಗೆರೆಯಲ್ಲಿ ಮುಸಲ್ಮಾನ ಬಾಂಧವರು ಈದ್ಗಾ ಮೈದಾನ ಸೇರಿದಂತೆ ಹಲವು ಭಾಗಗಳಲ್ಲಿ ಪ್ರಾರ್ಥನೆ ನಡೆಸಿ, ಪ್ರವಾದಿ ಹಜರತ್‌ ಇಬ್ರಾಹಿಂ ಅವರ ತ್ಯಾಗವನ್ನು ಸ್ಮರಿಸುವ ಮೂಲಕ ಬಕ್ರೀದ್ ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದರು.

ದಾವಣಗೆರೆಯ ಹರಿಹರ ರಸ್ತೆಯಲ್ಲಿರುವ ಖಬರ್ಸ್ಥಾನ್ ಬಳಿಯ ಈದ್ಗಾಮೈದಾನದಲ್ಲಿ ಸಾವಿರಾರು ಮುಸಲ್ಮಾನರು ಸೇರಿ ಸಾಮೂಹಿಕ ಪ್ರಾರ್ಥನೆ ನಡೆಸುವ ಮೂಲಕ ಬಲಿದಾನದ ಸಂಕೇತವಾಗಿ ಆಚರಿಸುವ ಬಕ್ರಿದ್ ಹಬ್ಬವನ್ನು ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

1002116784

ಅಲ್ಲದೆ ನಗರದ ಬೇರೆ ಬೇರೆ ಭಾಗಗಳ ಖಬರ್ಸ್ಥಾನ್ ಗಳ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ರಂಜಾನ್ ನಂತರದ ಬರುವ ಎರಡನೆಯ ಹಬ್ಬವಾಗಿ ಬಕ್ರೀದ್ ವಿಶೇಷ ಹಬ್ಬವಾಗಿದೆ. ಈ ಹಬ್ಬದಲ್ಲಿ ತಮ್ಮ ಹಿರಿಯರಿಗೆ ವಿಶೇಷ ಪ್ರಾರ್ಥನೆಯನ್ನು ಕೂಡ ಸಲ್ಲಿಸಲಾಗುತ್ತದೆ. ಈದ್ ಅಲ್-ಅಧಾ ಎಂದು ಕರೆಯಲಾಗುವ ಬಕ್ರೀದ್ ಹಬ್ಬವನ್ನು ತ್ಯಾಗದ ಹಬ್ಬ ಎಂದು ಕೂಡ ಕರೆಯಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002116783

ಬಕ್ರೀದ್ ಆಚರಣೆಯ ಹಿಂದೆ ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ ಬಲಿದಾನದ ಕಥೆಯಿದೆ. ಹಜರತ್ ಇಬ್ರಾಹಿಂ ಎನ್ನುವವರು ದೇವರ ಮೇಲೆ ಅಪಾರ ನಂಬಿಕೆಯನ್ನು ಹೊಂದಿದ್ದರು. ಒಮ್ಮೆ ಪ್ರವಾದಿ ಹಜರತ್ ಇಬ್ರಾಹಿಂ ತನ್ನ ಮಗನನ್ನು ತ್ಯಾಗ ಮಾಡುತ್ತಿದ್ದಂತೆ ಎಂದು ಕನಸು ಕಾಣುತ್ತಾರೆ. ತಾನು ಕಂಡ ಕನಸನ್ನು ದೇವರ ಸಂದೇಶವೆಂದೇ ಭಾವಿಸಿ, ತನ್ನ ಮಗ ಇಸ್ಮಾಯಿಲ್ ನನ್ನು ಬಲಿ ಕೊಡಲು ಮುಂದಾಗುತ್ತಾರೆ. ಆದರೆ ನಂತರ ದೇವರು ಮಗನ ಬದಲು ಪ್ರಾಣಿಯನ್ನು ಬಲಿ ಕೊಡುವ ಸಂದೇಶವನ್ನು ನೀಡುತ್ತಾನಂತೆ. ಆದ್ದರಿಂದ ಮಗನ ಬದಲಿಗೆ ತನ್ನ ಪ್ರೀತಿಯ ಕುರಿ ಮರಿಯನ್ನು ಬಲಿ ನೀಡುತ್ತಾರೆ. ಇದನ್ನು ಬಕ್ರಾ-ಈದ್’ ಅಂದರೆ ಬಕ್ರೀದ್ ಎಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಈದ್-ಉಲ್-ಅಧಾ ದಿನದಂದು ಮೇಕೆಯನ್ನು ಬಲಿಕೊಡುವ ಸಂಪ್ರದಾಯವು ಪ್ರಾರಂಭವಾಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಾವಗಡ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ರೈತ ಸಂಘ ಇತರೆ ಸಂಘಟನೆಗಳ ಅನಿರ್ದಿಷ್ಟ ಮುಷ್ಕರ

ಹೀಗೆ ಬಲಿ ಕೊಟ್ಟ ಮೇಕೆ, ಟಗರು ಅಥವಾ ಕುರಿಯ ಮಾಂಸವನ್ನು ಮೂರು ಭಾಗಗಳಾಗಿ ವಿಂಗಡಿಸಿ ಒಂದು ಭಾಗವನ್ನು ತಮ್ಮ ನೆರೆಹೊರೆಯವರಿಗೆ, ಸ್ನೇಹಿತರಿಗೆ ಬಾಂಧವರಿಗೆ ನೀಡಿ, ಮತ್ತೊಂದು ಭಾಗವನ್ನು ಬಡವರಿಗೆ, ದೀನರಿಗೆ, ನಿರ್ಗತಿಕರಿಗೆ, ಅಸಹಾಯಕರಿಗೆ ನೀಡಿ, ಮೂರನೇ ಭಾಗವನ್ನು ತಾವು ಇಟ್ಟುಕೊಂಡು ದೇವರ ಪ್ರಸಾದ ಎಂದು ಸೇವಿಸುವ ಸಂಪ್ರದಾಯವು ಬಕ್ರೀದ್ ಹಬ್ಬದ ಆಚರಣೆಯಲ್ಲಿ ಮುಂದುವರೆದುಕೊಂಡು ಬಂದಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...