ದಾವಣಗೆರೆ | ಕಾಂಗ್ರೆಸ್‌ ಸಂಸದರ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ಸಂಸತ್ತಿನಲ್ಲಿ ಉಪರಾಷ್ಟ್ರಪತಿಯವರ ನಡವಳಿಕೆಗಳನ್ನು ಅಣಕು ಮಾಡಿದ ಕಾಂಗ್ರೆಸ್ ಸಂಸದರ ನಡೆ ಖಂಡಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದೆ.

ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿನ ಬಿಜೆಪಿ ಕಚೇರಿಯಿಂದ ಹೋರಟ ಪ್ರತಿಭಟನಾ ಮೆರವಣಿಗೆ ಜಯದೇವ ವೃತ್ತಕ್ಕೆ ತಲುಪಿದ ಬಳಿಕ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರದ ವಿಪಕ್ಷಗಳ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ “ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರ ಹುದ್ದೆ ಸಂವಿಧಾನಿಕ ಹುದ್ದೆಯಾಗಿದ್ದು, ಕಲಾಪ ನಡೆಯುವ ವೇಳೆ ಅವರು ಮಾತನಾಡಿದ ಮಾತುಗಳನ್ನೇ ಅವಮಾನಿಸುವ ರೀತಿಯಲ್ಲಿ ವಿಪಕ್ಷಗಳ ಸಂಸದರು ಅಣಕು ಪ್ರದರ್ಶನ ಮಾಡಿದ್ದಾರೆ. ರಾಜ್ಯಸಭಾ ಸಭಾಪತಿಗೆ ಮಾಡಿದ ಅವಮಾನವಲ್ಲ, ನಮ್ಮ ದೇಶದ ಪವಿತ್ರ ಗ್ರಂಥ ಸಂವಿಧಾನ ಹಾಗೂ ದೇಶದ ಜನತೆಗೆ ಮಾಡಿದ ಅವಮಾನ. ಹಾಗಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಸಂಸದರು ದೇಶದ ಜನರ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನಿಕ ಹುದ್ದೆಗಳ ಬಗ್ಗೆ ಅರಿವಿಲ್ಲದ ರಾಹುಲ್ ಗಾಂಧಿಯವರನ್ನು ಮುಂಬರುವ ಚುನಾವಣೆ ನಂತರ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕಿತ್ತು. ಆದರೆ ಅವರಿಗೆ ಸಂವಿಧಾನದ ಅರಿವಿಲ್ಲ ಎನ್ನುವ ಕಾರಣಕ್ಕಾಗಿಯೇ ಕಾಂಗ್ರೆಸ್ ಮುಖಂಡರೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನೇ ಮುಂದಿನ ಪ್ರಧಾನ ಮಂತ್ರಿ ಅಭ್ಯರ್ಥಿಯೆಂದು ಘೋಷಿಸಿದ್ದಾರೆ. ಇದನ್ನು ಗಮನಿಸಿದರೆ ಮೇಲ್ನೋಟಕ್ಕೆ ಪ್ರಧಾನಿ ಹುದ್ದೆಗೆ ಅರ್ಹರಲ್ಲ ಎನ್ನುವುದು ಕಾಂಗ್ರೆಸ್ ಮುಖಂಡರಿಗೆ ಮನವರಿಕೆಯಾದಂತೆ ಅನಿಸುತ್ತದೆ. ಇಂತಹ ವ್ಯಕ್ತಿ ಉಪರಾಷ್ಟ್ರಪತಿಯವರನ್ನು ಅಣಕು ಮಾಡಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂತ್ರಸ್ತರಿಗೆ ಮಾನವೀಯ ನೆರವು ನೀಡಬೇಕು: ಡಾ. ಲೋಹಿತ್ ನಾಯ್ಕರ್

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸಚೇತಕ ಡಾ. ಎ ಎಚ್ ಶಿವಯೋಗಿಸ್ವಾಮಿ, ಯಶವಂತರಾವ್ ಜಾಧವ್, ಜಗದೀಶ್, ರಾಜನಹಳ್ಳಿ ಶಿವಕುಮಾರ್, ಡಿ ಎಸ್ ಶಿವಶಂಕರ್, ಪ್ರಕಾಶ್ ಪಾಟೀಲ್, ಎಸ್ ಮಂಜಾನಾಯ್ಡ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...