ದಾವಣಗೆರೆ | ಮಹಿಳೆಯ ವಿವಸ್ತ್ರ ಪ್ರಕರಣ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Date:

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ ಪ್ರಾರಂಭವಾದ ಮೆರವಣಿಗೆ ಅಶೋಕ ರಸ್ತೆ ಮೂಲಕವಾಗಿ ಸಾಗಿದ್ದು, ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು, ಶಾಸಕ ಬಿ.ಪಿ ಹರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರು.

ಶಾಸಕ ಬಿ ಪಿ ಹರೀಶ್ ಮಾತನಾಡಿ, “ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಇದನ್ನು ಮರೆಮಾಚಲು ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತೋರಿಸಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಶಿವಕುಮಾರ್ ಪ್ರಕರಣಗಳನ್ನು ಹಿಂಪಡೆದು ಭ್ರಷ್ಟಾಚಾರ ಸಮರ್ಥಿಸುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲೆ ಸಹಿತ ಮೂವರು ಅಮಾನತು

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್, ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾ‌ರ್, ಮೇಯರ್ ವಿರೇಶ್, ಮಹಿಳಾ ಮಾಜಿ ಜಿಲ್ಲಾಧ್ಯಕ್ಷೆ ಮಂಜುಳಾ, ಹೆಚ್ ಪಿ ವಿಶ್ವಾಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು, ಪಾಲಿಕೆ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...