ದಾವಣಗೆರೆ | ಬಾಲ್ಯವಿವಾಹ ಮಕ್ಕಳ ಮತ್ತು ಮಾನವೀಯ ಮೌಲ್ಯಗಳ ಮೇಲಿನ ದೌರ್ಜನ್ಯ; ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ

Date:

“ಸಮಾಜದಲ್ಲಿ ಬಾಲ್ಯವಿವಾಹ ಮಕ್ಕಳ ಮೇಲಿನ ದೌರ್ಜನ್ಯ. ಇದು ಕೇವಲ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವಷ್ಟೇ ಅಲ್ಲದೇ ಮಕ್ಕಳ ಮಾನವೀಯ ಮೌಲ್ಯಗಳ ಮೇಲೆ ಆಗುತ್ತಿರುವ ದೌರ್ಜನ್ಯ. ಹಾಗಾಗಿ ಇವುಗಳನ್ನು ತಪ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಜೊತೆಗೂಡಿ ಕಾರ್ಯನಿರ್ವಹಿಸಬೇಕು” ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.

ದಾವಣಗೆರೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ “ಬಾಲ್ಯವಿವಾಹ ನಿಷೇದಾಧಿಕಾರ ಮತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ” ಕುರಿತು ಆಯೋಜಿಸಲಾಗಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

1002301546

“ಇತ್ತೀಚೆಗೆ ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಗ್ರಾಮೀಣ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಅವರ ಅರಿವಿಗೆ ಬಾರದೇ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುವುದು”ಎಂದು ಎಚ್ಚರಿಕೆ ನೀಡಿದರು.

1002301545 1

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ್ ಮಾತನಾಡಿ, “ಬಾಲ್ಯವಿವಾಹವು ಸಾಮಾಜಿಕ ಪಿಡುಗು ಇಂತಹ ಪದ್ದತಿಯನ್ನು ಸಂಪೂರ್ಣವಾಗಿ ತೊಲಗಿಸಲು ಅಧಿಕಾರಿಗಳು ಪಣತೊಡಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಿದೆ. ಹಾಗೆಯೇ ಮಹಿಳೆ ಮತ್ತು ಮಕ್ಕಳಿಗೆ ವಿಶೇಷ ಸ್ಥಾನಮಾನ ನೀಡಿದೆ. ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಹಲವಾರು ಕಾಯ್ದೆ ಕಾನೂನುಗಳನ್ನು ರೂಪಿಸಿದೆ. ಆದರೂ ಇಂದಿಗೂ ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಪ್ರಕರಣಗಳು ಹೀಗೆ ಮುಂದುವರೆದಲ್ಲಿ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗೆಯೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಉಂಟಾಗುವುದಲ್ಲದೇ, ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಉಂಟಾಗಲಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ತಾವೆಲ್ಲರೂ ಭವಿಷ್ಯದ ಬಗ್ಗೆ ಚಿಂತಿಸಿದಾಗ ಮಾತ್ರ ದೇಶದ ಚಿಂತಕರಾಗಲು ಸಾಧ್ಯ. ಹಾಗಾಗಿ ಸರ್ಕಾರವು ತಮೆಗೆಲ್ಲಾ ಒಂದು ಜವಾಬ್ದಾರಿಯುತ ಸ್ಥಾನಮಾನ ನೀಡಿದೆ. ಅದಕ್ಕೆ ತಕ್ಕಂತೆ ಪ್ರತಿಯೊಬ್ಬರೂ ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರೀಕರ ಆಗ್ರಹ

“ದೇಶದ ಉಜ್ವಲ ಭವಿಷ್ಯಕ್ಕಾಗಿ ಕಾಯ್ದೆ ಕಾನೂನುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಪಣತೊಡೋಣ” ಎಂದು ಆಶಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...