ದಾವಣಗೆರೆ | ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ

Date:

ಭದ್ರಾ ಡ್ಯಾಂನ ಬಲದಂಡೆ ನಾಲೆಯಲ್ಲಿ ನೀರು ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ರೈತ ಒಕ್ಕೂಟ ಸೋಮವಾರ ಬೆಳಿಗ್ಗೆ ದಾವಣಗೆರೆ ಬಂದ್‌ ಮಾಡಿದ್ದು, ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಜಯದೇವ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 7.30ಕ್ಕೆ ಜಮಾವಣೆಗೊಂಡ ಸಾವಿರಾರು ಸಂಖ್ಯೆಯ ರೈತರು ಪ್ರತಿಭಟನಾ ಸಭೆ ನಡೆಸಿದ್ದು, ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಮೂಲಕ ತೆರಳಿ ಅಂಗಡಿ ಮುಂಗಟ್ಟುಗಳ ಬಂದ್ಗೆ ಮನವಿ ಮಾಡಿದ್ದಾರೆ. ಈ ನಡುವೆ ಬಂದ್‌ಗೆ ಬಿಜೆಪಿಯೂ ಬೆಂಬಲ ನೀಡಿದೆ.

“ಬಂದ್ ನಡೆಸಿ ಜನರಿಗೆ ತೊಂದರೆ ಉಂಟುಮಾಡುವ ಉದ್ದೇಶವಿಲ್ಲ. ಶಿವಮೊಗ್ಗದ ಕಾಡಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ನೀರಾವರಿ ಸಲಹಾ ಸಮಿತಿಯು ನೂರು ದಿನಗಳ ಕಾಲ ಭದ್ರಾ ಡ್ಯಾಂನ ಬಲದಂಡೆ ಹಾಗೂ ಎಡದಂಡೆ ನಾಲೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿತ್ತು. ಆಗಸ್ಟ್ 10ರಿಂದ ನೀರನ್ನೂ ಹರಿಸಲಾಗುತಿತ್ತು. ಆದರೆ, ಕಳೆದ ಕೆಲ ದಿನಗಳಿಂದ ನೀರು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಭತ್ತದ ಬೆಳೆ ಸಂಪೂರ್ಣ ನಾಶವಾಗುವ ಭೀತಿ ಎದುರಾಗಿದೆ” ಎಂದು ಭಾರತೀಯ ರೈತ ಒಕ್ಕೂಟದ ಪ್ರಮುಖರಾಗಿರುವ ಶಾಮನೂರು
ಲಿಂಗರಾಜ್ ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೈಕ್‌ ಮೆರವಣಿಗೆ 1

“ಭತ್ತಕ್ಕೆ ಈ ಸಮಯದಲ್ಲಿ ಹೆಚ್ಚಾಗಿ ನೀರು ಬೇಕಿದೆ. ಆದ್ದರಿಂದ ಕೊಟ್ಟ ಮಾತಿನಂತೆ, ತೆಗೆದುಕೊಂಡ ನಿರ್ಧಾರದಂತೆ ನೂರು ದಿನಗಳ ಕಾಲ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಹರಿಸಲೇಬೇಕು. ಯಾವುದೇ ಸಬೂಬು ಬೇಡ. ಆನ್ ಅಂಡ್ ಆಫ್ ಪದ್ಧತಿ ಕೈಬಿಡಬೇಕು. ಭದ್ರಾ ಜಲಾಶಯದಲ್ಲಿ ಸದ್ಯಕ್ಕೆ 161 ಅಡಿ ನೀರು ಇದೆ. ಕುಡಿಯುವ ನೀರಿಗೆ 7 ಟಿಎಂಸಿ ತೆಗೆದಿಟ್ಟರೂ ಕೂಡ ಉಳಿದ ನೀರು ಬೆಳೆಗೆ ಹರಿಸಬಹುದು. ಬೇಸಿಗೆ ಬೆಳೆಗೂ ನೀರು ನೀಡಬಹುದು” ಎಂದರು.

“ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತನ್ನ ಜಿಲ್ಲೆಯ ರೈತರ ಹಿತ ಕಾಪಾಡಲು ಈ ರೀತಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಈ ದಿಟ್ಟ ಕ್ರಮ ತೆಗೆದುಕೊಳ್ಳಲೇಬೇಕು. ನಮಗೆ ಬಾಯಿ ಮಾತಿನ ಭರವಸೆ ಬೇಡವೇ ಬೇಡ. ಲಿಖಿತವಾಗಿ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ರೈತ ಹೋರಾಟ ದಾವಣಗೆರೆ

“ಬೆಳಿಗ್ಗೆಯಿಂದಲೇ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳು ಮುಚ್ಚಿದ್ದವು. ರೈತರ ಹಿತಕ್ಕಾಗಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ. ದಾವಣಗೆರೆ ಭದ್ರಾ ಅಚ್ಚುಕಟ್ಟುದಾರರ ಪರವಾಗಿ ನಾವು ನಡೆಸುತ್ತಿರುವ ಹೋರಾಟ ಬೆಂಬಲಿಸಿ. ಈ ಮೂಲಕ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ಮಾಡೋಣ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ದಾವಣಗೆರೆ ಚೇಂಬರ್ ಆಫ್ ಕಾಮರ್ಸ್, ದಲ್ಲಾಳಿ ಮಾಲೀಕರ ಸಂಘ, ಕೂಲಿ ಕಾರ್ಮಿಕರ ಸಂಘ, ಖಾಸಗಿ ಬಸ್‌ಗಳ ಮಾಲೀಕರ ಸಂಘ, ಖಾಸಗಿ ಶಿಕ್ಷಣ ಸಂಸ್ಥೆಗಳು, ಆಟೋ ಮಾಲೀಕರ ಸಂಘ, ಕ್ರಿಮಿನಾಶಕ, ರಸಗೊಬ್ಬರ ಜಿಲ್ಲಾ ಸಂಘ, ಆಮ್ ಆದ್ಮಿ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಎಪಿಎಂಸಿ ಮಾಜಿ ಅಧ್ಯಕ್ಷ ಕೊಳೇನಹಳ್ಳಿ ಬಿ ಎಂ ಸತೀಶ್, ಕುಂದುವಾಡದ ಅಣ್ಣಪ್ಪ, ಭಾರತೀಯ ರೈತ ಒಕ್ಕೂಟದ ಜಿಲ್ಲಾಧ್ಯಕ್ಷ ಶಾಮನೂರು ಲಿಂಗರಾಜ್, ಕಲ್ಲಿಂಗಪ್ಪ, ಬಸವರಾಜ್, ಮೋಹನ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡು ಪ್ರತಿಭಟನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...