ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 2025, ಡಿ.22 ರಂದು ಬೆಳಿಗ್ಗೆ 10ಕ್ಕೆ ದಾವಣಗೆರೆ ಜಿಲ್ಲೆ ಹರಿಹರ ನಗರದ ಬಸ್ ನಿಲ್ದಾಣ ಸಮೀಪದ ಗುರುಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ “ಸದ್ಭಾವನ ಪ್ರಶಸ್ತಿ” ಪ್ರಧಾನ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಲಿದ್ದಾರೆ. ಉಚಿತ ಆರೋಗ್ಯ ಶಿಬಿರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಉದ್ಘಾಟಿಸುವರು. ಇನ್ ಸೈಟ್ಸ್ ಸಂಸ್ಥೆ ಸ್ಥಾಪಕ ಜಿ.ಬಿ.ವಿನಯ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡುವರು. ಮಾಜಿ ಶಾಸಕ ಎಸ್.ರಾಮಪ್ಪ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ನಾಗರಾಜ್ ವಿ.ಟಿ., ಬೊಂಗಾಳೆ ಆಸ್ಪತ್ರೆ ಮುಖ್ಯಸ್ಥ ಡಾ.ಸಚಿನ್ ಬೊಂಗಾಳೆ, ಕದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, ಮಾದರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಅಧ್ಯಕ್ಷ ಹೂಡಿ ಮಂಜುನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಅಧ್ಯಕ್ಷತೆ ವಹಿಸುವರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆ ಸಾವು: ಮಾಲೀಕನ ಬಂಧನ
ಶಿಬಿರದಲ್ಲಿ ಬೆಂಗಳೂರಿನ ತಜ್ಞ ವೈದ್ಯರ ತಂಡ ಭಾಗವಹಿಸಲಿದ್ದು, ಆರೋಗ್ಯ ಶಿಬಿರದಲ್ಲಿ ಇಸಿಜಿ, ಆರ್.ಬಿ.ಎಸ್., ಕಣ್ಣಿನ ಪರೀಕ್ಷೆ ಮತ್ತು ಹೃದಯ ಸ್ಥಂಭನಕ್ಕೆ ಪ್ರಥಮ ಚಿಕಿತ್ಸೆ ನೀಡುವ ಪದ್ಧತಿಯ ಪ್ರಾತ್ಯಕ್ಷಿಕೆ ನೀಡಲಾಗುವುದು. ಹೆಚ್ಚಿನ ಮಾಹಿತಿ ಪಡೆಯಲು ಮೊ.ನಂ:9900194567, 7019858689 ಸಂಪರ್ಕಿಸಲು ಕೋರಿದೆ.





