ದಾವಣಗೆರೆ | ರೈತ ಕಾರ್ಮಿಕ ಜನವಿರೋಧಿ ನೀತಿ ಬದಲಾಯಿಸಲು ಫ್ರೀಡಂ ಪಾರ್ಕಿನಲ್ಲಿ ಹೋರಾಟ

Date:

ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಸಾಮಾನ್ಯ ಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಬಂಡವಾಳಶಾಹಿ ಕಂಪನಿಗಳ ಪರವಾಗಿದೆ. ಕೇಂದ್ರ ಸರ್ಕಾರದ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಬದಲು ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ ಎಂದು ಚುನಾವಣೆಗೆ ಮುಂಚೆ ಭರವಸೆ ನೀಡಿದ ಕಾಂಗ್ರೆಸ್ ಸರ್ಕಾರ ಮೊದಲಿನ ರೀತಿಯಲ್ಲಿ ಉಳಿಸಿಕೊಂಡು ಜನರನ್ನು ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ಸರ್ಕಾರವನ್ನು ಎಚ್ಚರಿಸಲು ನವಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಕರ್ನಾಟಕ ಹೋರಾಟದ ಅಡಿಯಲ್ಲಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರ ಜನಪರ ಸಂಘಟನೆಗಳು ಸೇರಿ ಹೋರಾಟಕ್ಕೆ ತೀರ್ಮಾನಿಸಿದ್ದು ಸರ್ಕಾರ ಈ ಕೂಡಲೇ ಜನರ ಸಂಕಷ್ಟ ನಿವಾರಣೆ ಕ್ರಮಗಳಿಗೆ ಮುಂದಾಗಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಇಂದು ದಾವಣಗೆರೆಯಲ್ಲಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.‌

ಈ ವೇಳೆ ಮಾತನಾಡಿದ ಮುಖಂಡರು “ಸರ್ಕಾರದ ಮುಂದೆ ರಾಜ್ಯದ ದುಡಿಯುವ ಮತ್ತು ದಮನಿತರ 15 ಪ್ರಮುಖ ಒತ್ತಾಯಗಳನ್ನು ಮಂಡಿಸುತ್ತಿದ್ದೇವೆ. ಭೂಮಿಗೆ ಸಂಬಂಧಪಟ್ಟಂತೆ ಬಲವಂತದ ಭೂ ಸ್ವಾಧೀನಗಳನ್ನು ಕೈಬಿಡಬೇಕು, ಉಳುಮೆ ಮಾಡುತ್ತಿರುವ ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರು ಮಾಡುವ ತೀರ್ಮಾನ, ಅರಣ್ಯವಾಸಿಗಳನ್ನು ಅತಂತ್ರ ಸ್ಥಿತಿಯಿಂದ ಪಾರು ಮಾಡಲು ಕ್ರಮ, ಪ್ರತಿಯೊಬ್ಬರಿಗೂ ವಸತಿ ನೀಡುವಲ್ಲಿ ಸರ್ಕಾರ ಕ್ರಮ ರೂಪಿಸಬೇಕು” ಎಂದು ಒತ್ತಾಯಿಸಿದರು.

5123

“ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಖರೀದಿ, ಪಡಿತರ ವ್ಯವಸ್ಥೆ ಬಲಪಡಿಸಬೇಕು, ಪಡಿತರಕ್ಕೆ ರೈತರಿಂದ ವಿವಿಧ ಬೆಳೆಗಳ ಖರೀದಿ ಮಾಡಬೇಕು. ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಗಟ್ಟಿ ನೀತಿ ರೂಪಿಸಲು ಕ್ರಮ ಕೈಗೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಿಸಿಕೊಡಲು ಕ್ರಮ, ಸಣ್ಣ ರೈತರು ಮಾಡಿರುವ ಸಾಲ ಮನ್ನಾಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಸಾಲ ಸೌಲಭ್ಯ ದೊರಕಿಸುವ ಕ್ರಮ ಹಾಗೂ ಎಲ್ಲಾ ರೈತರ ಸಾಲ ಮನ್ನಾಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್ ಖಾಸಗೀಕರಣವನ್ನು ಕೈ ಬಿಟ್ಟು, ಪ್ರಿಪೇಯ್ಡ್ ಮೀಟರ್ ನಿಲ್ಲಿಸಬೇಕು. ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರ ಮೇಲೆ ಹಾಕುವುದು ನಿಲ್ಲಿಸಿ, ಜನಸಾಮಾನ್ಯರ ವಿದ್ಯುತ್ ದರಗಳನ್ನು ತಗ್ಗಿಸಬೇಕು, ಕಾರ್ಮಿಕರ ಸಂಹಿತೆಗೆ ಸಂಬಂಧಪಟ್ಟಂತೆ ಅವರ ಹಕ್ಕುಗಳಿಗೆ ಸಂಬಂಧಿಸಿದ ಕೇಂದ್ರದ 26 ಕಾಯ್ದೆಗಳನ್ನು ರದ್ದುಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಸಂಘಟಿತ ಕಾರ್ಮಿಕರ ಸಮಸ್ಯೆ ನಿವಾರಣೆಗೆ ಸೌಲಭ್ಯ ಕೇಂದ್ರ, ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು. ಕಾರ್ಮಿಕರನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿ ನಿಲ್ಲಿಸಿ ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಿ ಅವರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

“ಕನಿಷ್ಠ ವೇತನ ಪರಿಷ್ಕರಣೆಗೆ ಮುಂದಾಗಿ ಎಲ್ಲಾ ಕಾರ್ಮಿಕ ಸಂಘಟನೆಗಳಿಗೂ ಮಾಲೀಕರಿಗೂ ಅದನ್ನು ಮುಟ್ಟಿಸಬೇಕು. 8 ಗಂಟೆ ಯ ದುಡಿಮೆ ಅವಧಿಯನ್ನು ಖಾಯಂ ಗೊಳಿಸಬೇಕು. ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿ, ಹಿಂದುಳಿದ ತಾಲೂಕುಗಳಲ್ಲಿ ನರೇಗಾ ದಿನಗಳನ್ನು 200 ದಿನಗಳಿಗೆ ವಿಸ್ತರಿಸಬೇಕು. ಎಸ್ ಸಿ ಪಿ ಎಸ್ ಟಿ ಯೋಜನೆಗಳ ಮೌಲ್ಯಮಾಪನ ಮಾಡಬೇಕು ಮತ್ತು ಪಾರದರ್ಶಕವಾಗಿ ಅನುಷ್ಟಾನ ಗೊಳಿಸಬೇಕು. ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ಹಾಸ್ಟೆಲ್ ಸೌಲಭ್ಯವನ್ನು ಒದಗಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ” ಎಂದು ತಿಳಿಸಿದರು.

“ಇವುಗಳು ರಾಜ್ಯದ ಸಾರ್ವಜನಿಕರ, ಕೃಷಿ ಮತ್ತು ಕಾರ್ಮಿಕರ ಹಿತದೃಷ್ಟಿ, ಸುರಕ್ಷತೆಗೆ ನೇರವಾಗಿ ಸಂಬಂಧ ಹೊಂದಿದ್ದು ಈ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಲಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು

ಈ ವೇಳೆ ರೈತ ಸಂಘದ ಮುಖಂಡರಾದ ಹೊನ್ನೂರು ಮುನಿಯಪ್ಪ, ಮರುಳಸಿದ್ದಯ್ಯ, ಕೆ ಪಿ ಆರ್ ಎಸ್ ನ ಶ್ರೀನಿವಾಸ, ಕಾರ್ಮಿಕ ಮುಖಂಡರಾದ ಮಂಜುನಾಥ್ ಕುಕ್ಕವಾಡ, ಮಧು ತೊಗಲೇರಿ, ಎಚ್ ಜಿ ಉಮೇಶ್ ಆವರ್ಗೆರೆ, ಶ್ರಮಿಕಶಕ್ತಿಯ ಸತೀಶ್ ಅರವಿಂದ್, ಪವಿತ್ರ ಅರವಿಂದ್ ಹಾಗೂ ಸುರೇಶ್, ಐರಣಿ ಚಂದ್ರು, ಚನ್ನಪ್ಪ , ಶೇಖರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...