ದಾವಣಗೆರೆ | ಸರ್ಕಾರಿ ಶಾಲೆಗಳ ವಿಲೀನ ಮುಚ್ಚುವ ಪ್ರಕ್ರಿಯೆ ಸಂವಿಧಾನದ ಶಿಕ್ಷಣ ಹಕ್ಕು ಉಲ್ಲಂಘನೆ

Date:

ರಾಜ್ಯ ಸರ್ಕಾರ ಕೈಗೊಂಡಿರುವ ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಪ್ರಕ್ರಿಯೆಯನ್ನು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಜ್ಞರ ಜೊತೆ ಸಮಾಲೋಚಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಿದ್ದರೂ, ಅದನ್ನು ಬದಿಗಿಟ್ಟು ರಾಜ್ಯ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯಲ್ಲಿ ಯಾವುದೇ ಸಮಾಲೋಚನೆ ಮಾಡದೇ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಗೆ ಮಾರಕವಾಗುವ ನಿರ್ಧಾರಗಳನ್ನು ಸರ್ಕಾರ ಯಾವುದೇ ಸಮಾಲೋಚನೆ ಇಲ್ಲದೆ ನಿರ್ಣಯ ಕೈಗೊಳ್ಳುತ್ತಿರುವುದು ಸಂವಿಧಾನ ಹಾಗೂ ಶಿಕ್ಷಣ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸರ್ಕಾರಿ ಶಾಲೆ ಉಳಿಸಿ, ಬೆಳೆಸಿ ಮತ್ತು ಕರ್ನಾಟಕ ರಾಜ್ಯ ಎಸ್.ಡಿ.ಎಂ.ಸಿ. ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ದಾವಣಗೆರೆ ಜಿಲ್ಲೆ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮುಖಂಡರು “ಸಮಿತಿಯಿಂದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರಕ್ಕೆ ಕೆಲ ಪ್ರಮುಖ ಹಕ್ಕೊತ್ತಾಯಗಳನ್ನು ಸಲ್ಲಿಸುತ್ತಿದ್ದೇವೆ. 2016–17 ರ ಶಾಲಾ ಸಬಲೀಕರಣ ವರದಿ ಜಾರಿಗೆ ತರಬೇಕು, ಮ್ಯಾಗ್ನೆಟ್ ಶಾಲೆ ಅಡಿ ವಿಲೀನಗೊಳಿಸುವ, 25,683 ಶಾಲೆಗಳ ಮುಚ್ಚುವ ಯೋಜನೆ ತಕ್ಷಣ ನಿಲ್ಲಿಸಬೇಕು, ರಾಜ್ಯ ಶಿಕ್ಷಣ ನೀತಿಯನ್ನು ವಿಧಾನಸಭೆಯಲ್ಲಿ ಮಂಡಿಸಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

“ಶಿಕ್ಷಣ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಲು ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಹಣಕಾಸು ಒದಗಿಸಬೇಕು, ನುರಿತ ಆಂಗ್ಲ ಶಿಕ್ಷಕರನ್ನು ನೇಮಿಸಬೇಕು, ತ್ರಿಭಾಷಾ ಸೂತ್ರ ಬದಲು ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವಂತೆ ಸಮಿತಿ ಸೂಚಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಾಲಿ ಶಿಕ್ಷಕರ ಹುದ್ದೆಗಳು ತಕ್ಷಣ ತುಂಬಲು, ಎಸ್.ಡಿ.ಎಂ.ಸಿ. ಬಲವರ್ಧನೆ, ತರಬೇತಿಯನ್ನು ಪರಿಷ್ಕರಿಸಲು, ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯಗೊಳಿಸಲು ಕಾನೂನು ರೂಪಿಸಲು ಸಮಿತಿ ಆಗ್ರಹಿಸುತ್ತದೆ. ಸರ್ಕಾರಿ ಶಾಲಾ ಮ್ಯಾಪಿಂಗ್‌ ಪ್ರಕಾರ ಖಾಸಗಿ ಶಾಲೆಗಳಿಗೆ ಅನಧಿಕೃತ ಅನುಮತಿ ನಿಲ್ಲಿಸಬೇಕು ಮತ್ತು ಸರ್ಕಾರಿ ಶಾಲೆಗಳ ಮಾಹಿತಿಯನ್ನು ಪೋಷಕರಿಗೂ ಎಸ್.ಡಿ.ಎಂ.ಸಿ.ಗೂ ಸುಲಭವಾಗಿ ಲಭ್ಯವಾಗುವಂತೆ ಆಪ್ ರೂಪಿಸಬೇಕು ಎಂದು ಬೇಡಿಕೆಯಲ್ಲಿ ತಿಳಿಸಲಾಗಿದೆ” ಎಂದು ತಿಳಿಸಿದರು.

“ಸಮನ್ವಯ ವೇದಿಕೆ, ಸಾರ್ವಜನಿಕ ಶಿಕ್ಷಣ ಕುರಿತಂತೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವರನ್ನು ಬದಲಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಕ್ರಮ ಸಂವಿಧಾನ ಮತ್ತು ಶಿಕ್ಷಣ ಹಕ್ಕಿನ ಕಾಯ್ದೆಗೆ ವಿರುದ್ಧವಾಗಿದ್ದು, ಇದಕ್ಕೆ ಸಾಮಾಜಿಕ ನ್ಯಾಯಕ್ಕೆ ಹೆಸರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು” ಎಂದು ಸಮಿತಿಯ ಸದಸ್ಯರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

ಸುದ್ದಿಗೋಷ್ಠಿಯಲ್ಲಿ ದಸಂಸ ರಾಜ್ಯ ಸಂಚಾಲಕ ಹರಿಹರ ಮಲ್ಲೇಶ್, ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಎಚ್ ಸಿ ಗುಡ್ಡಪ್ಪ, ಜನಶಕ್ತಿಯ ಸತೀಶ್ ಅರವಿಂದ್, ಆದಿಲ್ ಖಾನ್, ಸರ್ಕಾರಿ ಶಾಲೆ ಉಳಿಸಿ ಸಮಿತಿಯ ಲಿಂಗರಾಜು ಗಾಂಧಿನಗರ, ರಾಕೇಶ್ ಕಕ್ಕರಗೊಳ್ಳ, ಪ್ರವೀಣ್ ಕಕ್ಕರಗೊಳ್ಳ ಸೇರಿದಂತೆ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...