ದಾವಣಗೆರೆ | ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಲು ಫೆಡರೇಷನ್ ರಾಜ್ಯಾಧ್ಯಕ್ಷರ ಒತ್ತಾಯ

Date:

“ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಊಟ ತಯಾರಿಸುವ ಬಿಸಿಯೂಟ ತಯಾರಕರಿಗೆ ಮುಂದಿನ 2026-27ಬಜೆಟ್ ನಲ್ಲಿ ವೇತನ ಹೆಚ್ಚಿಸಬೇಕು” ಬಿಸಿಯೂಟ ತಯಾರಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ, ದಾವಣಗೆರೆ ಸಿಪಿಐ ಮುಖಂಡ ಆವರಗೆರೆ ಚಂದ್ರು ಒತ್ತಾಯಿಸಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ನಗರದ ಸ್ಟೇಡಿಯಂನಲ್ಲಿ ನಡೆದ ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು “ಮುಂದಿನ ಬಜೆಟ್ನಲ್ಲಿ ವೇತನ ಹೆಚ್ಚಿಸುವುದು ಸೇರಿದಂತೆ ನಿವೃತ್ತ ಬಿಸಿಯೂಟ ತಯಾರಕರಿಗೆ 2 ಲಕ್ಷ ರೂಪಾಯಿ ಇಡುಗಂಟು ಹಣ ಜಾರಿಗೆ ತರಬೇಕು. ಮರಣ ಪರಿಹಾರವಾಗಿ 10 ಲಕ್ಷ ರೂಪಾಯಿ ಜಾರಿಗೆ ತರಬೇಕು, ನೂರು ಜನ ವಿದ್ಯಾರ್ಥಿಗಳಿಗೆ ಮೂರು ಜನ ಅಡುಗೆಯವರನ್ನು ನೇಮಿಸಿಕೊಳ್ಳಬೇಕು, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಒಬ್ಬ ಅಡುಗೆಯವರನ್ನು ಕೆಲಸದಿಂದ ಬಿಡಿಸಿದಲ್ಲಿ ಅಂತಹ ಬಿಸಿಊಟ ತಯಾರಕರಿಗೆ ಇಡುಗಂಟು ಹಣ ಕೊಡಬೇಕು” ಎಂದು ಒತ್ತಾಯಿಸಿದರು.

“ಮೊಟ್ಟೆ ಸುಲಿಯುವ ಭತ್ಯೆಯನ್ನು ಪ್ರತಿ ಮೊಟ್ಟೆಗೆ ಒಂದು ರೂಪಾಯಿಗೆ ಏರಿಸಬೇಕು ಮತ್ತು ಬಿಸಿಯೂಟ ತಯಾರಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿಯೊಂದನ್ನು ರಚನೆ ಮಾಡಿ ಆ ಮೂಲಕ ಸರ್ಕಾರ ಅವರಿಗೆ ಸವಲತ್ತುಗಳನ್ನು ಕೊಡಬೇಕು” ಎಂದು ಸಭೆ ಮೂಲಕ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆ ಸಾವು: ಮಾಲೀಕನ ಬಂಧನ

ಚನ್ನಗಿರಿ ತಾಲೂಕು ಕಾರ್ಯದರ್ಶಿ ಕಂಚುಗಾರನಹಳ್ಳಿ ರೇಣುಕಾ, ಖಜಾಂಚಿ ಆಸ್ಮಾ ಬಾನು, ಉಪಾಧ್ಯಕ್ಷೆ ಕಣಿವೆಬಿಳಚಿ ಝಾನ್ಸಿ, ಸಹಕಾರ್ಯದರ್ಶಿ ಕರೆಕಟ್ಟೆ ಲಲಿತಬಾಯಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸರೋಜಾ, ರುದ್ರಮ್ಮ ಮಂಜುಳಾ ಎಐಟಿಯುಸಿ ಮುಖಂಡರುಗಳಾದ ಜೈನುಲ್ಲಾ ಖಾನ್, ಪುರಸಭೆ ಸದಸ್ಯ ಗೌಸ್ ಪೀರ್, ಕಲಿಗಾರ ರಫಿಉಲ್ಲಾ, ಏ ತಿಪ್ಪೇಶ್ ಮತ್ತಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...