ದಾವಣಗೆರೆ | ಹಾಲಿನ ದರ ಇಳಿಕೆ; ಜ.9ರಂದು ಶಿಮುಲ್ ವಿರುದ್ಧ ಪ್ರತಿಭಟನೆ

Date:

ಪದೇ ಪದೆ ಹಾಲಿನ ದರ ಕಡಿಮೆ ಮಾಡುತ್ತಿರುವ ಶಿಮುಲ್ ವಿರುದ್ಧ ಜನವರಿ 9ರಂದು ಶಿವಮೊಗ್ಗ ಸಮೀಪದ ಮಾಚೇನಹಳ್ಳಿಯಲ್ಲಿ ಇರುವ ಶಿಮುಲ್ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತದ ಅಧ್ಯಕ್ಷ ಪ್ರವೀಣ್ ಪಟೇಲ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜನವರಿ 9ರ ಬೆಳಿಗ್ಗೆ 10.30 ರಿಂದ ಪ್ರತಿಭಟನೆ ನಡೆಸಲಾಗುವುದು. ಸ್ಥಳದಲ್ಲೇ ಹಾಲು ಉತ್ಪಾದಕರ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

“ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಳೆದ ನಾಲ್ಕು ತಿಂಗಳಲ್ಲಿ ಪಶು ಆಹಾರ, ಔಷಧಗಳ ಬೆಲೆ ಹೆಚ್ಚಿಸಿದೆ. ಗ್ರಾಹಕರಿಗೆ ಪ್ರತಿ ಲೀಟರ್‌ಗೆ ₹42ರಿಂದ ₹43ರಷ್ಟು ನಿಗದಿಪಡಿಸಲಾಗಿದೆ. ಆದರೆ, ಹಾಲು ಉತ್ಪಾದಕರಿಗೆ ₹29.50 ಕೊಡಲಾಗುತ್ತಿರುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಉತ್ಪಾದನೆ ವೆಚ್ಚದ ಆಧಾರದಲ್ಲಿ ಪ್ರತಿ ಲೀಟರ್‌ಗೆ ಕನಿಷ್ಠ ₹60 ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

“ಶಿವಮೊಗ್ಗ ಹಾಲು ಒಕ್ಕೂಟ ರೈತರಿಂದ ಹಾಲು ಖರೀದಿಸಿ ಖಾಸಗಿಯವರಿಗೆ ಮಾರುವ ಮೂಲಕ ಲಾಭ ಮಾಡಿಕೊಳ್ಳುತ್ತಿದೆ. ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯ ಹಾಲು ಒಕ್ಕೂಟ ರೈತರು ಕಟ್ಟಿರುವ ಒಕ್ಕೂಟ. ಹಾಗಾಗಿ ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುತ್ತದೆ. ಬೇಡಿಕೆ ಈಡೇರಿಸದಿದ್ದಲ್ಲಿ ಪರ್ಯಾಯ ವ್ಯವಸ್ಥೆಯತ್ತ ಗಮನ ಹರಿಸಲಾಗುವುದು” ಎಂದರು.

ಜಿಲ್ಲಾ ಸಂಘದ ಅಧ್ಯಕ್ಷ ಚಿದಾನಂದ್, ವಸಂತಮ್ಮ, ಪ್ರಕಾಶ್ ನೇರ್ಲಿಗೆ, ಬಸವರಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...