ದಾವಣಗೆರೆ | ಜಗಳೂರಿನಲ್ಲಿ ಶಾಸಕ ದೇವೇಂದ್ರಪ್ಪ ಭಿಕ್ಷಾಟನೆ ಮೂಲಕ ನೊಂದವರಿಗೆ ನೆರವು ಕಾರ್ಯಕ್ರಮ

Date:

ದಾವಣಗೆರೆ ಜಿಲ್ಲೆ ಜಗಳೂರು ನಗರದ ಹೊಸ ವಾಲ್ಮೀಕಿ ಭವನದಲ್ಲಿ “ನೊಂದವರಿಗೆ ನೆರವು” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಪ್ರಾರಂಭಿಸಿದ್ದು, ವರ್ಷಾರಂಭದ ಮೊದಲ ದಿನವೇ ತಟ್ಟೆ ಹಿಡಿದು ಭಿಕ್ಷಾಟನೆ ಮೂಲಕ ಸಮಾಜದ ಅಶಕ್ತರು, ವಿಶೇಷ ಚೇತನರು, ರೋಗಿಗಳು , ಅಶಕ್ತ ವಿದ್ಯಾರ್ಥಿಗಳಿಗೆ ನೆರವು ನೀಡುವ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿದರು.

1003426706

ನೊಂದವರಿಗೆ ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ದೇವೇಂದ್ರಪ್ಪ “ಇದು ಸಮಾಜಕ್ಕೆ ಅಗತ್ಯ ಇರುವ ಉತ್ತಮ ಕಾರ್ಯಕ್ರಮ. ವೈಯಕ್ತಿಕವಾಗಿ ಇಂದು ಒಂದು ಲಕ್ಷ ನೀಡಿದ್ದೇನೆ. ಪ್ರತಿ ತಿಂಗಳು ವೇತನದಲ್ಲಿ ಒಂದು ಲಕ್ಷ ಇದಕ್ಕಾಗಿ ಮೀಸಲಿಟ್ಟು ನೆರವು ನೀಡುತ್ತೇನೆ. ಈ ಕಾರ್ಯಕ್ರಮಕ್ಕೆ ಬೇಕಾದ ಹಣಕಾಸಿನ ನೆರವಿಗೆ, ನೊಂದವರ ನೆರವಿಗೆ ಒಂದು ಕೋಟಿ ರೂಪಾಯಿ ಭಿಕ್ಷಾಟನೆ ಮಾಡಿ ಸಹಾಯ ಮಾಡುತ್ತೇನೆ” ಎಂದು ಭರವಸೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1003426703

ಕಾರ್ಯಕ್ರಮದಲ್ಲಿ ಬ್ರಾಹ್ಮಣ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಕೆಪಿಸಿಸಿ ಎಸ್ಟಿ ಘಟಕದ ಮಾಜಿ ರಾಜ್ಯಾಧ್ಯಕ್ಷರಾದ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಷಂಷೀರ್ ಅಹಮದ್, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ನೇರಲಗುಂಟೆ ತಿಪ್ಪೇಸ್ವಾಮಿ, ಜೈ ಭಾರತ್ ಟ್ರಸ್ಟಿನ ಬರ್ಕತ್ ಆಲಿ , ಕ್ಷೇತ್ರದ ಸಮಸ್ತ ಮುಖಂಡರು, ನಾಗರೀಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರವೀಂದ್ರನಾಥ ಬಡಾವಣೆ ನಿರಾಶ್ರಿತರನ್ನು ಗಂಜಿಕೇಂದ್ರದಿಂದ ಹೊರದೂಡಿದ ಕ್ರಮಕ್ಕೆ ಕರವೇ ಆಕ್ರೋಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...