ದಾವಣಗೆರೆ | ಸಂವಿಧಾನ ಪ್ರಸ್ತಾವನೆ ಓದು; 12 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆ: ಜಿಲ್ಲಾಧಿಕಾರಿ

Date:

ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ದಾವಣಗೆರೆಯಲ್ಲಿ ಸಂವಿಧಾನ ಪ್ರಸ್ತಾವನೆ ಓದು ಮತ್ಉತ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ 12 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ ವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲು ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸರ್ಕಾರದ ನಿರ್ದೇಶನದಂತೆ ಅಂದು ನಮ್ಮ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಎಲ್ಲ ತಾಲೂಕುಗಳಲ್ಲಿ, ಗ್ರಾಮ ಪಂಚಾಯಿತಿ, ಶಾಲೆ-ಕಾಲೇಜುಗಳು, ಆಸ್ಪತ್ರೆ, ಹಾಸ್ಟೆಲ್‌ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲ ಕಚೇರಿಗಳು, ಖಾಸಗಿ ಸಂಘ, ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರ್ಥಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಬೇಕು” ಎಂದು ಸೂಚನೆ ನೀಡಿದರು.

“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15 ರಂದು ಕಾರ್ಯಕ್ರಮದಲ್ಲಿ ಭಾಗವಹಿಸಲು
https://thepreamble-swdkar.in/register/ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲಿ ಹಲವು ಆಯ್ಕೆಗಳು ಇರಲಿದ್ದು, ಸೆಪ್ಟೆಂಬರ್ 12 ರೊಳಗಾಗಿ ನೋಂದಣಿ ಮಾಡಿಕೊಂಡು ಸೆ.15 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆನ್‌ಲೈನ್‌ನಲ್ಲಿ ನೋಂದಣಿ ಮಾಡುವಾಗ ಸಮಾಜ ಕಲ್ಯಾಣ ಇಲಾಖೆಯಡಿ ನಡೆಸುತ್ತಿರುವ ಹಾಸ್ಟೆಲ್, ಸರ್ಕಾರಿ, ಖಾಸಗಿ ಶಾಲಾ, ಕಾಲೇಜು, ಸಹಕಾರ ಸಂಸ್ಥೆ, ಸಾರ್ವಜನಿಕ ಉದ್ದಿಮೆ, ಸಂಸ್ಥೆಗಳು, ಇತರೆ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳು, ಮಿಲಿಟರಿ, ಪ್ಯಾರಾಮಿಲಿಟರಿ, ಭದ್ರತಾ ಸಮವಸ್ತ್ರವುಳ್ಳ ಪಡೆ, ಆರಕ್ಷಕ, ಆರಕ್ಷಕ ಸೇವೆ ನೀಡುತ್ತಿರುವ ಸಂಸ್ಥೆಗಳು, ಇಲಾಖೆ, ನ್ಯಾಯಾಲಯಗಳು, ಶಾಸಕಾಂಗ ಮತ್ತು ಇತರೆ ವೈಯಕ್ತಿಕ ಗುಂಪುಗಳು ಇಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಬಿಐನಲ್ಲಿ ಪ್ರತ್ಯೇಕ ನಗದು ಕೌಂಟರ್‌ ತೆರೆಯುವಂತೆ ಆಗ್ರಹ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ ನಾಗರಾಜ, ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಾಸಂತಿ ಡಿಡಿಪಿಐ ಕೊಟ್ರೇಶ್ ಉಪ್ಪಾರ್, ಡಿಡಿಪಿಐ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...