ದಾವಣಗೆರೆ | ಜಗಳೂರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಶಕ್ತಿ ಗ್ಯಾರಂಟಿ ಯೋಜನೆ ಸಂಭ್ರಮಾಚರಣೆ

Date:

ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆಯು 500 ಕೋಟಿ ಮಹಿಳೆಯರನ್ನು ತಲುಪಿದ ಅಂಗವಾಗಿ ದಾವಣಗೆರೆ ನಗರ, ಜಗಳೂರು, ಹೊನ್ನಾಳಿ ಸೇರಿದಂತೆ ತಾಲೂಕಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ತಲುಪಿದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರಾದ ಕೆ ಎಸ್ ಬಸವಂತಪ್ಪನವರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

1002318432
ದಾವಣಗೆರೆ ಕೆಎಸ್ಸಾರ್ಟಿಸಿ ನಿಲ್ದಾಣದ ಆವರಣದಲ್ಲಿ ಶಕ್ತಿ ಯೋಜನೆ ಸಂಭ್ರಮ ಆಚರಣೆ

ಈ ವೇಳೆ ಮಾತನಾಡಿದ ಶಾಸಕ ಬಸವಂತಪ್ಪ “ಶಕ್ತಿ ಯೋಜನೆಯಿಂದ ಸುಮಾರು 40 ರಷ್ಟು ಪ್ರಯಾಣಿಕರ ಪ್ರಮಾಣ ಹೆಚ್ಚಿದ್ದು, ಇದು ಪ್ರಯಾಣ ಅಷ್ಟೇ ಅಲ್ಲ ಉದ್ಯೋಗಕ್ಕೆ ದಾರಿ ಮಾಡಿ ಕೊಟ್ಟಿದೆ. ಮಹಿಳೆಯರು ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಶಕ್ತಿ ಯೋಜನೆಯ ಸಹಾಯದಿಂದ ಮಹಿಳೆಯರು ಯಾರನ್ನೂ ಅವಲಂಬಿಸದೆ ಮುಕ್ತವಾಗಿ ಪ್ರಯಾಣಿಸಿ, ಈ ಯೋಜನೆಯು ಕರ್ನಾಟಕ ರಾಜ್ಯದ ಎಲ್ಲಾ ಆರ್ಥಿಕವಾಗಿ ಹಿಂದುಳಿದ ಮಹಿಳಾ ನಾಗರಿಕರ ಸಾಮಾಜಿಕ ಸ್ಥಾನಮಾನ ಮತ್ತು ಜೀವನ ಮಟ್ಟವನ್ನು ಸುಧಾರಿಸಿದೆ. ಕರ್ನಾಟಕ ರಾಜ್ಯದ ಎಲ್ಲಾ ಮಹಿಳಾ ನಾಗರಿಕರು ಯಾವುದೇ ವಯಸ್ಸು ಅಥವಾ ಆದಾಯದ ನಿರ್ಭಂಧವಿಲ್ಲದೆ ಶಕ್ತಿ ಯೋಜನೆಯಡಿಯಲ್ಲಿ  ಪ್ರಯಾಣಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002318292

ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ್ ಮಾತನಾಡಿ, “ಶಕ್ತಿಯೋಜನೆಯು ಅತ್ಯಂತ ಯಶಸ್ವಿಯಾಗಿದ್ದು, 2025 ರ ಜುಲೈ 11 ರವರೆಗೆ ವಯಸ್ಕರು, ಮಕ್ಕಳು ಸೇರಿದಂತೆ 9,55,31,863 ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆದಿದ್ದು ಇದರ ವೆಚ್ಚ  ರೂ. 2,77,21,78,538 ಕೋಟಿ ಮೊತ್ತವಾಗಿದೆ” ಎಂದು ಮಾಹಿತಿ ನೀಡಿದರು.

1002318291
ಜಗಳೂರಿನಲ್ಲಿ ಶಾಸಕ ದೇವೇಂದ್ರಪ್ಪ ಸಿಹಿ ಹಂಚುವ ಮೂಲಕ ಶಕ್ತಿ ಯೋಜನೆ ಸಂಭ್ರಮಾಚರಣೆ ಮಾಡಿದರು

ಕೆಎಸ್‍ಆರ್‍ಟಿಸಿ ಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಬೀರ್, ಇಂದಿರಾ, ಲಕ್ಷ್ಮೀಬಾಯಿ, ಮುನೀರ್ ಇನ್ನಿತರಿಗೆ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬುದ್ಧ ಬಸವ ಅಂಬೇಡ್ಕರರಂತೆ ಪ್ರಜ್ಞೆ, ಕರುಣೆ ಬೆಳೆಸಿಕೊಳ್ಳಬೇಕು; ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು

ಜಗಳೂರಿನಲ್ಲಿ ಕ್ಷೇತ್ರದ ಶಾಸಕರಾದ ಬಿ.ದೇವೇಂದ್ರಪ್ಪ ರವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುವ ಸಂಭ್ರಮವನ್ನು ಸಿಹಿಹಂಚುವ ಮುಖಾಂತರ ಸಂಭ್ರಮಿಸಿದ್ದು ಈ ವೇಳೆ ಮಾತನಾಡಿದ ಶಾಸಕರು “ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದ್ದು ವಿಶೇಷವಾಗಿ ಉದ್ಯೋಗಸ್ಥ, ವ್ಯಾಪಾರದ, ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಉತ್ತಮ ಸೇವೆ ಒದಗಿಸಿಕೊಡುವ ಯೋಜನೆಯಾಗಿದೆ. ಇಂದು 500 ಕೋಟಿ ಮಹಿಳೆಯರನ್ನು ಯೋಜನೆ ತಲುಪಿರುವುದು ದಾಖಲೆ. 31 ಲಕ್ಷಕ್ಕೂ ಅಧಿಕ ಮಂದಿ ತಾಲೂಕಿನ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ” ಎಂದು ತಿಳಿಸಿದರು.

1002318290

ಸಂಭ್ರಮಾಚರಣೆಯಲ್ಲಿ ಧೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಮುಖಂಡ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು,ಪಟ್ಟಣ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಮಹಿಳಾ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...