ದಾವಣಗೆರೆ | ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಕಸಿಯುವ ಕೌಶಲ್ಯ ತರಬೇತಿ: ಎಐಡಿಎಸ್ಓ ಖಂಡನೆ

Date:

ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೌಶಲ್ಯ ಆಧಾರಿತ ತರಬೇತಿ ಜಾರಿಗೆ ತರುವ ಯೋಜನೆ ಮೂಲಕ ಶಿಕ್ಷಣವನ್ನು ಕೇವಲ ಕೌಶಲ್ಯ ತರಬೇತಿಯನ್ನಾಗಿ ಪರಿವರ್ತಿಸುತ್ತಿರುವ, ಉನ್ನತ ಶಿಕ್ಷಣದ ಸಾಧ್ಯತೆಯನ್ನು ಕಸಿಯುತ್ತಿರುವ ಸರ್ಕಾರದ ಕ್ರಮಕ್ಕೆ ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

“ರಾಜ್ಯ ಸರ್ಕಾರವು ಸರ್ಕಾರಿ ಪ್ರೌಢಶಾಲೆಗಳಲ್ಲಿ ಆಟೋಮೇಷನ್, ಎಲೆಕ್ಟ್ರಿಕಲ್ ರಿಪೇರಿ, ವಾಹನ ರಿಪೇರಿ, ಟೈಲರಿಂಗ್ ಮತ್ತು ಅಂತಹುದೇ ವೃತ್ತಿಗಳಿಗೆ ಸಂಬಂಧಿಸಿದ ‘ಕೌಶಲ್ಯ ಆಧಾರಿತ ತರಬೇತಿ’ಯನ್ನು ಪರಿಚಯಿಸುವ ಯೋಜನೆಯನ್ನು ಘೋಷಿಸಿದೆ. ಈ ನೀತಿಯನ್ನು ಒಂದು ನಾವೀನ್ಯತೆ ಎಂದು ಹೊಗಳಲಾಗುತ್ತಿದೆ, ಆದರೆ ವಾಸ್ತವದಲ್ಲಿ, ಇದು ಶಿಕ್ಷಣದ ಮೂಲ ಉದ್ದೇಶವನ್ನು ವಿರೂಪಗೊಳಿಸುವ ಅನಾಹುತಕಾರಿ ಪ್ರಯತ್ನವಾಗಿದೆ” ಎಂದು ಎಐಡಿಎಸ್ಓ ಮುಖಂಡರು ಆಕ್ಷೇಪಿಸಿದ್ದಾರೆ.

“ಶಿಕ್ಷಣವು ಬುದ್ಧಿಶಕ್ತಿಯನ್ನು ಪೋಷಿಸುತ್ತದೆ, ವ್ಯಕ್ತಿತ್ವವನ್ನು ನಿರ್ಮಿಸುತ್ತದೆ, ವೈಜ್ಞಾನಿಕ ಮತ್ತು ಮಾನವೀಯ ದೃಷ್ಟಿಕೋನವನ್ನು ಬೆಳೆಸಿ ಮನುಷ್ಯನನ್ನು ರೂಪಿಸುವ ಪ್ರಕ್ರಿಯೆಯಾಗಿದೆ ಮತ್ತು ಯುವ ಮನಸ್ಸುಗಳನ್ನು ಜ್ಞಾನ ಮತ್ತು ಜವಾಬ್ದಾರಿಯೊಂದಿಗೆ ಸಮಾಜಕ್ಕೆ ಸೇವೆ ಸಲ್ಲಿಸಲು ಸಿದ್ಧಪಡಿಸುತ್ತದೆ. ಆದರೆ ಸರ್ಕಾರವು ಪ್ರೌಢಶಾಲಾ ಶಿಕ್ಷಣವನ್ನು ಕೌಶಲ್ಯ-ಉತ್ಪಾದನಾ ಕಾರ್ಖಾನೆಯನ್ನಾಗಿ ಪರಿವರ್ತಿಸಲು ಸರ್ಕಾರವು ಹೊರಟಿದೆ, ಅಲ್ಲಿನ ಮಕ್ಕಳು, ವಿಶೇಷವಾಗಿ ಬಡ ಮತ್ತು ಶೋಷಿತ ಕುಟುಂಬಗಳ ಮಕ್ಕಳನ್ನು ಕೈಗಾರಿಕೆಗಳಿಗೆ ಅಗ್ಗದ ಕಾರ್ಮಿಕರಾಗಿ ಬದಲಾಯಿಸುವ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರೌಢಶಾಲೆಯ ನಂತರ ತಕ್ಷಣವೇ ‘ಸಿದ್ಧ ಉದ್ಯೋಗ’ಗಳಿಗೆ ಮಕ್ಕಳನ್ನು ತಳ್ಳುವ ಮೂಲಕ, ಸರ್ಕಾರವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಸಾಧ್ಯತೆಯನ್ನು ಕಸಿದುಕೊಳ್ಳುತ್ತಿದೆ. ಇದು ಸರ್ಕಾರದ ತೀವ್ರ ಜನವಿರೋಧಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ. ಶ್ರೀಮಂತರ ಮಕ್ಕಳಿಗೆ ವಿಜ್ಞಾನ, ಕಲೆ, ಸಾಹಿತ್ಯ ಮತ್ತು ಉನ್ನತ ಶಿಕ್ಷಣಕ್ಕೆ ಪ್ರವೇಶ ಸಿಗುತ್ತಿರುವಾಗ, ಬಡ ಕುಟುಂಬಗಳ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಕೇವಲ ಕೈಯಿಂದ ಮಾಡುವ ಮತ್ತು ವೃತ್ತಿಪರ ತರಬೇತಿಗೆ ಸೀಮಿತಗೊಳಿಸಲಾಗುತ್ತಿದೆ. ಇದರಿಂದ ಅವರು ಬೃಹತ್ ಬಂಡವಾಳದ ಅಗತ್ಯಗಳಿಗೆ ಅಧೀನರಾಗಿ ಉಳಿಯುತ್ತಾರೆ”ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

ಶಿಕ್ಷಣವನ್ನು ಕಾರ್ಮಿಕ-ಉತ್ಪಾದನಾ ಕೇಂದ್ರಗಳನ್ನಾಗಿ ಪರಿವರ್ತಿಸುವ ಸರ್ಕಾರದ ಈ ಪ್ರಯತ್ನವನ್ನು ಕೈಬಿಡುವಂತೆ ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿಯ ಮುಖಂಡರಾದ ಪೂಜಾ ನಂದಿಹಳ್ಳಿ, ಸುಮನ್, ಗಂಗಾಧರ್, ಬಿಎಚ್ ವೀರೇಶ್, ಮಂಜುನಾಥ್ ಸೇರಿದಂತೆ ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...