ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ವಿರೋಧಿಸಿ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಗಣತಿದಾರರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈಗಾಗಲೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಕಾರ್ಯ ಅಂತಿಮಗೊಂಡಿದೆ. ಈ ಸಮಯದಲ್ಲಿ ಹಲವಾರು ತೊಂದರೆಗಳನ್ನು ಎದುರಿಸಿಯೂ ಸಮೀಕ್ಷೆ ಮುಗಿಸಿದ್ದೇವೆ. ಈಗ ಮತ್ತೆ ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದೆ. ಆದರೆ, ಪ್ರಸ್ತುತ ಶೂನ್ಯದಿಂದ 6 ವರ್ಷದ ಮಕ್ಕಳ ಸಮೀಕ್ಷೆ ಮಾಡಬೇಕೆಂದು ಗಣತಿ ಮೇಲ್ವಿಚಾರಕರು ಹೇಳುತ್ತಿರುವುದು ಸರಿಯಲ್ಲ. ಈಗಾಗಲೇ ಸಮೀಕ್ಷೆ ನಡೆಸುವ ಸಮಯದಲ್ಲಿ ಸಾರ್ವಜನಿಕರಿಂದ ನಿಂದನೆ, ಅವಮಾನ ಮತ್ತು ಹಲವಾರು ತೊಂದರೆಗಳನ್ನು ಅನುಭವಿಸಿದ್ದೇವೆ. ಸಮೀಕ್ಷೆ ಮೇಲ್ವಿಚಾರಕರು ನಿಯಮ ಮೀರಿ ಒತ್ತಡ ಹಾಕುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ
“ಒತ್ತಡ ಹೆಚ್ಚಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ. ಇಂದಿನಿಂದಲೇ ಅಕ್ಟೋಬರ್ 13 ರಿಂದ ಸಮೀಕ್ಷೆ ಮರುಕಾರ್ಯವನ್ನು ನಿರ್ವಹಿಸುವುದಿಲ್ಲ ಎಂಬ ವಿಚಾರವನ್ನು ಗಮನಕ್ಕೆ ತರುತ್ತಿದ್ದೇವೆ. ನಮ್ಮ ಮನವಿಗೆ ಸ್ಪಂದಿಸುವಂತೆ ಮನವಿ ಮಾಡುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಮಾಡಿದರು.





