ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಅಥವಾ ಅಹಿಂದ ವರ್ಗದವರಿಗೆ ಆದ್ಯತೆ ನೀಡುವಂತೆ ಜಗಳೂರಿನಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಆಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಶಾಸಕ ದೇವೇಂದ್ರಪ್ಪನವರ ಸ್ವಗ್ರಾಮದಲ್ಲಿ ನಡೆಯುತ್ತಿರುವ ಊರಹಬ್ಬದ (ಜಾತ್ರೆ) ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಭೇಟಿ ಮಾಡಿದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಸ್ಲಿಂ, ಹಿಂದುಳಿದ ವರ್ಗಗಳ ಮುಖಂಡರು ಭೇಟಿ ಮಾಡಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂರು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡಲು ಒತ್ತಾಯ
ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಬಿ.ವೀರಣ್ಣ, ವಖ್ಪ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಘನಿ ತಾಹೀರ್, ಕೆಎಂಡಿಸಿ ಸಿರಾಜ್, ಸಂತೇಬೆನ್ನೂರು ಏಜಾಜ್, ಖಾಸೀಂ ಸಾಬ್, ಹಿರಿಯ ವಕೀಲ ಅಂಜನೇಯ ಗುರುಜೀ , ಜಬ್ಬಾರ್, ನೂರು ಆಹಮದ್, ಜಗಳೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಶುದ್ದೀನ್ ಹಾಗೂ ಇತರರು ಹಾಜರಿದ್ದರು.





