ದಾವಣಗೆರೆ | ಕ್ರೀಡಾ ಮನೋಭಾವ ಮುಖ್ಯ, ಸೋಲು ಗೆಲುವಲ್ಲ; ನಿರ್ದೇಶಕ ರವಿಕುಮಾರ್

Date:

ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ, ಸ್ಪರ್ಧೆ ಮುಖ್ಯವೇ ಹೊರತು, ಸೋಲು, ಗೆಲುವು ಮುಖ್ಯವಲ್ಲ. ನಮ್ಮ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಮನೋಭಾವ ಎಲ್ಲರಿಗೂ ಆದರ್ಶವಾಗಿದೆ. ಪೋಷಕರಿಗೂ ಕೂಡ ಇಂದು ಕ್ರೀಡಾಕೂಟ ಆಯೋಜಿಸಲಾಗಿದೆ. ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿಯಿಂದ ಭಾಗವಹಿಸಿರುವುದು ನಮ್ಮ ಶಾಲೆಯ ಬಗ್ಗೆ ಅವರಿಗೆ ಇರುವ ಅಭಿಮಾನಕ್ಕೆ ಸಾಕ್ಷಿಯಾಗಿದೆ ದಾವಣಗೆರೆಯಲ್ಲಿ ನಿಂಚನ ಶಾಲೆಯ ವ್ಯವಸ್ಥಾಪಕ ನಿರ್ದೇಶಕ ಬಿ.ರವಿಕುಮಾರ್ ಅಭಿಪ್ರಾಯಪಟ್ಟರು.

ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜರುಗಿದ ನಿಂಚನ ಪಬ್ಲಿಕ್ ಶಾಲೆಯ 2025-26 ನೇ ಸಾಲಿನ ಕ್ರೀಡಾಕೂಟ ಅದ್ದೂರಿಯಾಗಿ ಜರುಗಿತು. ಈ ವೇಳೆ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ರವಿಕುಮಾರ್ ಮಾತನಾಡಿ, “ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆ ಮುಖ್ಯವೇ ಹೊರತು, ಸೋಲು, ಗೆಲುವುಗಳಲ್ಲ. ಎರಡನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳದೇ ಸ್ಪರ್ಧಾ ಮನೋಭಾವದಿಂದ ನೋಡಬೇಕು” ಎಂದು ಮನವಿ ಮಾಡಿದರು‌.

1003240831

ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡಾ ಜ್ಯೋತಿ ಸ್ವೀಕರಿಸಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ನಿಂಗಪ್ಪ ಮಾತನಾಡಿ, “ಓದಿನಂತೆ ಕ್ರೀಡಾಕೂಟದಲ್ಲಿ ಗುರಿ ಮುಖ್ಯ, ಅದನ್ನು ತಲುಪುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು. ಹೊಸ ಆಡಳಿತ ಮಂಡಳಿ ಶಾಲೆಯನ್ನು ಅತ್ಯುತ್ತಮವಾಗಿ ನಡೆಸಿಕೊಂಡು ಹೋಗುತ್ತಿದೆ. ಬರುವ ಶೈಕ್ಷಣಿಕ ವರ್ಷದಿಂದ ಪೋಷಕರು ಉತ್ತಮ ಸಹಕಾರ ನೀಡಿದರೆ ಶಾಲೆ ಮತ್ತಷ್ಟು ಉತ್ತಮವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳು ಆಟ, ಪಾಠಗಳಲ್ಲಿ ಉತ್ತಮ ಅಭ್ಯಾಸ ಮಾಡಿದರೆ ಶಾಲೆಗೆ ಕೀರ್ತಿ ಬರಲಿದೆ. ಶಾಲಾ ಆಡಳಿತ ಮಂಡಳಿ ಇದಕ್ಕಾಗಿ ಎಲ್ಲ ಪ್ರೋತ್ಸಾಹ ನೀಡಲು ಸಿದ್ಧವಿದೆ” ಎಂದರು.

ಪ್ರಾಂಶುಪಾಲರಾದ ಡಾ.ಎಚ್.ಡಿ.ಅಶ್ವಿನಿ ಮಾತನಾಡಿ, “ಕ್ರೀಡೆ ಪಠ್ಯಪೂರಕ ಚಟುವಟಿಕೆಯಾಗಿದ್ದು, ಇದರಿಂದ ವಿದ್ಯಾರ್ಥಿಗಳ ದೈಹಿಕ‌ ಹಾಗೂ ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆಯಲ್ಲದೇ, ಸಾಮಾಜಿಕ ವರ್ತನೆಯಲ್ಲೂ ಉತ್ತಮ ಬದಲಾವಣೆ‌ ಕಾಣಬಹುದಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರೈತಸಂಘದ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಸುವರ್ಣಸೌಧ ಚಲೋ

ಶಾಲಾ ಮಕ್ಕಳು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಂತೋಷ್, ಎಚ್‌ಒಡಿ ರೂಪಾ, ಶ್ರೀಮತಿ ರಾಜೇಶ್ವರಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...