ದಾವಣಗೆರೆ | ಮನೆಬಿಟ್ಟು ತಿರುಗಾಡುತ್ತಿದ್ದ ಬಾಲಕನನ್ನು ಸುರಕ್ಷಿತವಾಗಿ ಪಾಲಕರ ಬಳಿ ಸೇರಿಸಿದ ಸಂಚಾರ ಪೊಲೀಸರು

Date:

ತಂದೆ ಬೈದಿದ್ದರಿಂದ ಬೇಜಾರಾಗಿ ಮನೆಬಿಟ್ಟು ಬಂದಿದ್ದ, ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಹರಿಹರ ನಗರದ ಬಾಲಕನನ್ನು ದಾವಣಗೆರೆ ಸಂಚಾರ ಪೊಲೀಸರು ಪತ್ತೆ ಹಚ್ಚಿ ವಿಚಾರಿಸಿ ಪೋಷಕರ ವಶಕ್ಕೆ ಸುರಕ್ಷಿತವಾಗಿ ಮರಳಿಸಿದ ಘಟನೆ ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆದಿದೆ.

ದಾವಣಗೆರೆ ಉತ್ತರ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಹೊನ್ನೂರು ಸಾಬ್ ಹಾಗೂ ಸಿಬ್ಬಂದಿ ಗಣೇಶ ನಾಯ್ಕ್ ನವೆಂಬರ್ 9 ರಂದು ಹಳೆ ಪಿಬಿ ರಸ್ತೆಯ ಜಿಎಂಐಟಿ ಕಾಲೇಜು ಬಳಿ ಕರ್ತವ್ಯದಲ್ಲಿದ್ದಾಗ 12 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಕಂಡುಬಂದಿದ್ದಾನೆ. ಬಾಲಕನನ್ನು ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ಕರೆದು ವಿಚಾರಿಸಿದಾಗ ತನ್ನ ಬಗ್ಗೆ ಮಾಹಿತಿ ತಿಳಿಸಿದ್ದು, ತಾನು ಹರಿಹರ ನಗರದವನು ಮನೆಯಲ್ಲಿ ನಮ್ಮ ತಂದೆ ಬೈದಿದ್ದರಿಂದ ಬೇಜಾರಾಗಿ ಮನೆಬಿಟ್ಟು ಬಂದಿದ್ದು ಬೇರೆ ಬೇರೆ ಕಡೆ ಸುತ್ತಾಡಿ ದಾವಣಗೆರೆ ಗೆ ಯಾವುದೋ ವಾಹನದಲ್ಲಿ ಬಂದು ಇಲ್ಲಿ ಇಳಿದುಕೊಂಡಿದ್ದರ ಬಗ್ಗೆ ತಿಳಿಸಿದ್ದಾನೆ.

ನಂತರ ಪೊಲೀಸರು ಬಾಲಕನು ನೀಡಿದ ಮಾಹಿತಿ ಮೇರೆಗೆ ಹರಿಹರದ ಬಾಲಕನ ಪೋಷಕರ ಬಗ್ಗೆ ವಿವರ ಕಲೆ ಹಾಕಿದ್ದು, ಘಟನೆ ಬಗ್ಗೆ ತಿಳಿಸಿರುತ್ತಾರೆ ಹಾಗೂ ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾರೆ. ನಂತರ ಸದರಿ ಬಾಲಕನು ದಾವಣಗೆರೆಯ ವಿನೋಬಾ ನಗರದಲ್ಲಿ ತನ್ನ ದೊಡ್ಡಮ್ಮನ ಮನೆ ಇರುವುದಾಗಿ ತಿಳಿಸಿದ್ದು, ಅವರ ಮನೆ ಪತ್ತೆ ಹಚ್ಚಿ ಕರೆದುಕೊಂಡು ಹೋಗಿ ಬಾಲಕನ ದೊಡ್ಡಮ್ಮನಿಗೆ ಘಟನೆ ಬಗ್ಗೆ ಮಾಹಿತಿ ನೀಡಿ ಅವರ ವಶಕ್ಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ನಂತರ ಅವರಿಗೆ ಬಾಲಕನ ಪೋಷಕರನ್ನು ದಾವಣಗೆರೆಗೆ ಕರೆಯಿಸಿ ಸೂಕ್ತ ಬುದ್ಧಿವಾದ ಹೇಳಿ ಮಕ್ಕಳಿಗೆ ಉತ್ತಮ ರೀತಿಯಲ್ಲಿ ತಿಳಿಹೇಳಬೇಕು ಎಂದು ಎಚ್ಚರಿಕೆ ನೀಡಿ ಪೋಷಕರ ವಶಕ್ಕೆ ಸದರಿ ಬಾಲಕನನ್ನು ಒಪ್ಪಿಸುತ್ತಾರೆ. ಸದರಿ ಬಾಲಕನ ಪೋಷಕರು ತಮ್ಮ ಮಗನಿಗಾಗಿ ಎಲ್ಲಾ ಕಡೆ ಹುಡುಕಾಡಿರುವುದು ತಿಳಿದು ಬಂದಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...