ದಾವಣಗೆರೆ | ಮಹಿಳಾ ಆಯೋಗದ ಅಧ್ಯಕ್ಷರ ಜಗಳೂರು ಭೇಟಿ, ಸೌಲಭ್ಯಕ್ಕಾಗಿ ಗ್ರಾಕೂಸ್ ಕಾರ್ಯಕರ್ತರ ಅಹವಾಲು.

Date:

ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿಗೆ ಭೇಟಿ ನೀಡಿದ್ದು ತಾಲೂಕು ಆಸ್ಪತ್ರೆ, ತಾಲೂಕು ಕಚೇರಿ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಿದರು. ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ಗ್ರಾಕೂಸ್- ಗ್ರಾಮೀಣ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಭೂಮಿ, ವಸತಿರಹಿತರಿಗೆ ನಿವೇಶನ ಸೇರಿದಂತೆ ಹಲವು ಸೌಲಭ್ಯಕ್ಕಾಗಿ ಒತ್ತಾಯಿಸಿ ಮನವಿ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

“ಬಿಳಿಚೋಡು ಗ್ರಾಮದಲ್ಲಿ ಸರ್ವೇ ನಂಬರ್ 14ರಲ್ಲಿ ಸೇಂದಿವನ ಇದ್ದು , ಅದನ್ನು ಗ್ರಾಮದ ವಸತಿರಹಿತರಿಗೆ ನಿವೇಶನ‌ ಹಂಚಿಕೆಗೆ ಮೀಸಲಿಡಬೇಕು ಹಾಗೂ ಆಂಜನೇಯ ಬಡಾವಣೆಯ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸಬೇಕು. ಕೆಚ್ಚೇನಹಳ್ಳಿ ಮತ್ತು ಪಲ್ಲಾಗಟ್ಟೆ ಗ್ರಾಮದಲ್ಲಿ ವಸತಿ ರಹಿತರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು. ಅಲ್ಲದೇ ಕೆಚ್ಚೇನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಒದಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001846823
Oplus_0

“ಪಲ್ಲಾಗಟ್ಟೆಯಿಂದ ಜಗಳೂರು, ದಾವಣಗೆರೆ, ಕೊಟ್ಟೂರು ಮಾರ್ಗಗಳಿಗೆ ವಿದ್ಯಾಭ್ಯಾಸಕ್ಕಾಗಿ ನೂರಾರು ವಿದ್ಯಾರ್ಥಿಗಳು ದಿನ ನಿತ್ಯ ತೆರಳುತ್ತಿದ್ದು, ಬಸ್ಗಳಿಲ್ಲದೇ ಪರದಾಟವಾಗಿದೆ.‌ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಬಸ್ ಸೌಲಭ್ಯ ಒದಗಿಸಬೇಕು. ಉದ್ಯೋಗ ಖಾತ್ರಿಯಲ್ಲಿ ಅಂಗವಿಕಲರಿಗೂ ಕೂಡ ವಿಶೇಷ ಕೆಲಸ ಮತ್ತು ಸೌಲಭ್ಯ ಕಲ್ಪಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಗಳು ಸರಿಯಾಗಿ ನಡೆಯುತ್ತಿಲ್ಲ. ಕೂಸಿನ ಮನೆಗಳಲ್ಲಿ ಮಕ್ಕಳಿಲ್ಲದಿದ್ದರೂ ಆನ್ಲೈನ್ ಹಾಜರಾತಿಯಲ್ಲಿ 30-20 ಮಕ್ಕಳನ್ನು ತೋರಿಸುತ್ತಾರೆ. ಈ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ವಿದವೆಯರಿಗೆ, ವೃದ್ಧರಿಗೆ ಸರಿಯಾದ ಸಮಯಕ್ಕೆ ಮಾಶಾಸನ ದೊರಕುವಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಾಹೇತರ ಸಂಬಂಧದ ಶಂಕೆ; ಮಸೀದಿ ಎದುರು ಮಹಿಳೆಯ ಮೇಲೆ ಹಲ್ಲೆ

“ಜಗಳೂರು ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಈಗಾಗಲೇ ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಒಂದು ಕುಟುಂಬಕ್ಕೆ 100 ಮಾನವ ದಿನಗಳು ಪೂರೈಸಿದ್ದು , ನರೇಗಾ ಯೋಜನೆ ಅವಲಂಬಿತವಾಗಿರುವ ಕಾರ್ಮಿಕರಾದ ನಮಗೆ ಹೆಚ್ಚುವರಿ 190 ಮಾನವ ದಿನಗಳ ಜಾರಿಗೊಳಿಸಬೇಕು. ಇದು ಬೇಸಿಗೆಯ ಅತಿ ಹೆಚ್ಚಿನ ಬಿಸಿಲು ಇರುವ ಕಾಲವಾದ್ದರಿಂದ ಬೆಳಿಗ್ಗೆ, ಸಂಜೆಯ ಹಾಜರಾತಿಯ ಬದಲು ಬೆಳಗ್ಗೆ ಹಾಜರಾತಿಯನ್ನು ಮಾತ್ರ ಕಡ್ಡಾಯಿಗೊಳಿಸಬೇಕು. ನರೇಗಾ ಕಾರ್ಮಿಕರಿಗೆ ಪ್ರಾಣ ಹಾನಿಯಾದರೆ ಪರಿಹಾರ ಧನ ಎರಡು ಲಕ್ಷ ರೂ. ಬದಲಾಗಿ ಐದು ಲಕ್ಷಕ್ಕೆ ಏರಿಸಬೇಕು” ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ಗ್ರಾಕೂಸ್ ಸಂಘಟನೆಯ ತಾಲೂಕು ಸಂಚಾಲಕಿ ಸುಧಾ ಪಲ್ಲಾಗಟ್ಟೆ, ನಾಗರತ್ನ, ಕೃಷ್ಣಾ ನಾಯ್ಕ ಸೇರಿದಂತೆ ಇತರ ಕಾರ್ಮಿಕರು ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...