ದಾವಣಗೆರೆ | ರೈತೋದಯ ಹಸಿರುಸೇನೆಯಿಂದ 1008 ಜೋಡಿ ಸಾಮೂಹಿಕ ಮದುವೆ ಕಾರ್ಯಕ್ರಮ; ಪೂರ್ವಭಾವಿ ಸಭೆ

Date:

ದಾವಣಗೆರೆಯ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷರ, ಜಿಲ್ಲೆಗಳ ಜಿಲ್ಲಾಧ್ಯಕ್ಷರ ಮತ್ತು ಮಹಿಳಾ ಜಿಲ್ಲಾಧ್ಯಕ್ಷರ, ರೈತ ಮುಖಂಡರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಂಡಿರುವ 1008 ಜೋಡಿಗಳ‌ ಸಾಮೂಹಿಕ ಮದುವೆಯ ಪೂರ್ವಬಾವಿ ಸಭೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ‌ಲ್ಲಿ ನೇತೃತ್ವವಹಿಸಿ ಮಾತನಾಡಿದ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಬಿಟಿ “ದಾವಣಗೆರೆಯಲ್ಲಿ ನಡೆಯಲಿರುವ 18 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭಕ್ಕೆ ರಾಜ್ಯದ 224 ಕ್ಷೇತ್ರಗಳ ವಧುವರರು ಮತ್ತು ರೈತರು, ಜನತೆ ಆಗಮಿಸಲಿದ್ದು, ಎಲ್ಲರಿಗೂ ಅವರ ಸಂಸ್ಕೃತಿ ಸಂಪ್ರದಾಯದ ಅನುಸರಣೆಯಂತೆ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಈ ಸಾಮೂಹಿಕ ವಿವಾಹ ಸಮಾರಂಭಕ್ಕೆ ಕರ್ನಾಟಕದ ಮೂಲೆಮೂಲೆಗಳಿಂದ ಎಲ್ಲ ಜಾತಿ, ವರ್ಗದ, ಧರ್ಮದ ವಧು ವರರು ಆಗಮಿಸಲಿದ್ದಾರೆ. ಅವರಿಗೆ ರಿಜಿಸ್ಟರ್ ಮಾಡಿಸುವಂತದ್ದು, ಅಲ್ಲದೇ ಅವರವರ ಧಾರ್ಮಿಕ ವಿಧಿ ಪದ್ದತಿಯಂತೆ ವಿವಾಹ ಕಾರ್ಯಕ್ರಮ ನೆರವೇರಿಸಲು ಯೋಜಿಸಲಾಗಿದೆ. ಸರ್ಕಾರದ, ಉದ್ಯಮದಾರರ, ರಾಜಕಾರಣಿಗಳ, ಸಾಮಾಜಿಕ ಚಿಂತಕರ ಎಲ್ಲರ ಸಹಾಯದಿಂದ 1008 ಸಾಮೂಹಿಕ ವಿವಾಹ ನೆರವೇರಿಸಿ ದೇಶದ ಸಾಮಾಜಿಕ ಸಮಾನತೆಯನ್ನು ಸಾರುವ ಕೆಲಸ ರೈತೋದಯ ಹಸಿರು ಸೇನೆ ಮಾಡಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002127547

“ರಾಜ್ಯದಲ್ಲಿ ಸಾಮಾಜಿಕ ಸಮಾನತೆ ಸಾರುವ ಸಾಮಾಜಿಕ ಕಳಕಳಿಯ ಬೃಹತ್ ಕಾರ್ಯಕ್ರಮ ಆಗುತ್ತಿರುವುದು ಇದೇ ಮೊದಲು.‌ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು ಪಕ್ಷಬೇಧ, ಜಾತಿಭೇದವಿಲ್ಲದೆ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ದಿಕ್ಸೂಚಿಗಳಾಗಿ ಕೆಲಸ ಮಾಡಲು ವಿನಂತಿಸುತ್ತೇವೆ. ಅಲ್ಲದೇ ಕಾರ್ಯಕ್ರಮದ ಮೂಲಕ ರಾಜ್ಯ ಸರ್ಕಾರಕ್ಕೆ ರೈತರ ಮೇಲೆ ವಿಶೇಷ ಕಾಳಜಿ, ರೈತರಿಗೆ ಸಹಾಯ ನೀಡುವಂತೆ ಮನವಿ ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ| ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ಸಹಿ ಸಂಗ್ರಹ ಅಭಿಯಾನ

ಪೂರ್ವಭಾವಿ ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ನಾಗವೇಣಿ, ಜಿಲ್ಲಾಧ್ಯಕ್ಷ ಕೆ ಜಿ ರೇವಣಸಿದ್ದಪ್ಪ, ದಾವಣಗೆರೆ ಜಿಲ್ಲಾ ಸಂಚಾಲಕ ಸಿ ನಾಗರಾಜ್, ಬೆಂಗಳೂರು ನಗರ ಉಪಾಧ್ಯಕ್ಷೆ ಮಮತಾ, ಮಹಿಳಾ ರಾಜ್ಯ ಸಂಘಟನಾ ಕಾರ್ಯಾಧ್ಯಕ್ಷೆ ಸುವರ್ಣಮ್ಮ, ಚನ್ನಗಿರಿ ತಾಲೂಕು ಉಪಾಧ್ಯಕ್ಷ ಶಿವಮೂರ್ತಿ ನಾಯಕ್ ಜಿ, ಮಹಿಳಾ ಸಂಘಟನಾ ಕಾರ್ಯಾಧ್ಯಕ್ಷೆ ದಾವಣಗೆರೆ ಮಂಜಮ್ಮ, ದಾವಣಗೆರೆ ಜಿಲ್ಲಾ ಉಪಾಧ್ಯಕ್ಷೆ ಸುಜಾತಮ್ಮ, ವೀಣಾಮ್ಮ, ಸುಶೀಲಮ್ಮ, ರಾಜ್ಯ ವರಿಷ್ಠರಾದ ವೀರಭದ್ರಪ್ಪ, ಲಕ್ಷ್ಮಣ್, ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಪ್ರವೀಣ್, ನಾಗಭೂಷಣ್, ಜಗಳೂರು ತಾಲೂಕು ಅಧ್ಯಕ್ಷ ದಯಾನಂದ, ಉಪಾಧ್ಯಕ್ಷ ಗಣೇಶ್, ನಿವೃತ್ತ ಮಾಜಿ ಸೈನಿಕರು ವನ್ನಳ್ಳಿ ವಾಸಪ್ಪ, ದಾವಣಗೆರೆ ಜಿಲ್ಲಾ ಉಪಾಧ್ಯಕ್ಷ ಹನುಮ ಗೌಡ್ರು ಸೇರಿದಂತೆ ಇತರ ಮುಖಂಡರು, ಸದಸ್ಯರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...