ದಾವಣಗೆರೆ | ಜಿಲ್ಲಾಡಳಿತ ಹಾಗೂ ನಗರದ ವಿದ್ಯಾಸಂಸ್ಥೆಗಳಿಂದ 77ನೇ ಗಣರಾಜ್ಯೋತ್ಸವ ಸಂಭ್ರಮ

Date:

ದಾವಣಗೆರೆಯ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ತರಳಬಾಳು ವಿದ್ಯಾಸಂಸ್ಥೆ ಸೋಮೇಶ್ವರ ವಿದ್ಯಾಸಂಸ್ಥೆ ಸಿದ್ದಗಂಗಾ ಸಂಸ್ಥೆ ಮಾಗನೂರು ಬಸಪ್ಪ ಡಿ ಆರ್ ಎಂ ಪದವಿ ಕಾಲೇಜು ಎ ವಿ ಕೆ ಕಾಲೇಜು ಸೇರಿದಂತೆ ಹಲವು ವಿದ್ಯಾ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಗಣಿ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು “ಭಾರತ ಸಂವಿಧಾನ ನೀಡಿರುವ ಹಕ್ಕುಗಳನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

1003561784

“ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗಿದೆ. ನೀರಾವರಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ 2025-26ರಲ್ಲಿ 325ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003561740

“ರೈತರ ಸಹಾಯಕ್ಕಾಗಿ ಬೆಂಬಲ ಬೆಲೆ ನೀಡಲು ಭತ್ತ ಖರೀದಿ ಕೇಂದ್ರ, ರಾಗಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಮೆಕ್ಕೆಜೋಳ ಖರೀದಿಸಿದ ನಂತರ ರೈತರ ನಷ್ಟ ಪರಿಹಾರ ನೀಡಲು ವ್ಯತ್ಯಾಸದ ಹಣವನ್ನು ನೇರವಾಗಿ ರೈತರಿಗೆ ಪಾವತಿಸಲಾಗುತ್ತಿದೆ. 11 ಸಾವಿರ ರೈತರಿಗೆ 42.27 ಕೋಟಿ ಬೆಳೆ ವಿಮೆ ಪರಿಹಾರ ಪಾವತಿಸಲಾಗಿದೆ” ಎಂದು ತಿಳಿಸಿದರು.

“ಕುಡಿಯುವ ನೀರಿನ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದ್ದು, ಜಿಲ್ಲೆಯ 62 ಗ್ರಾಮಗಳು ದಿನಪೂರ್ತಿ ನೀರಿನ ಸರಬರಾಜು ವ್ಯವಸ್ಥೆಯನ್ನು ಪಡೆದುಕೊಂಡಿವೆ.‌ ಈ ಮೂಲಕ ದಾವಣಗೆರೆ ಜಿಲ್ಲೆ ರಾಜ್ಯದಲ್ಲಿಯೇ ಮಾದರಿಯ ಮುಂಚೂಣಿ ಜಿಲ್ಲೆಯಾಗಿದೆ. ಮರಳು ನೀತಿ ಪರಿಣಾಮವಾಗಿ ಅನುಷ್ಠಾನಕ್ಕೆ ತರಲಾಗಿದೆ” ಎಂದು ತಿಳಿಸಿದರು.

1003561815

ಕಾರ್ಯಕ್ರಮದಲ್ಲಿ ಎನ್ ಸಿ ಸಿ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ವಿದ್ಯಾರ್ಥಿಗಳ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಪೂರ್ವವಲಯ ಐಜಿಪಿ ಡಾ ರವಿಕಾಂತೇಗೌಡ ಜಿಲ್ಲಾಧಿಕಾರಿ ಡಾ ಗಂಗಾಧರ ಸ್ವಾಮಿ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸೇರಿದಂತೆ ಹಲವು ಗಣ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದ್ದರು.

1003561816

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸ್ಕೂಟಿಯಲ್ಲಿ ಬಂದ ಕಳ್ಳ; ಮಹಿಳೆಯ ಬಂಗಾರದ ಮಾಂಗಲ್ಯ ಸರ ಕಳ್ಳತನ ಯತ್ನ

ನಗರದ ಸಿದ್ದಗಂಗಾ ಸಂಸ್ಥೆ, ತರಳಬಾಳು ವಿದ್ಯಾಸಂಸ್ಥೆ ಸೋಮೇಶ್ವರ ವಿದ್ಯಾಸಂಸ್ಥೆ, ಗುರುಕುಲ ವಿದ್ಯಾ ಸಂಸ್ಥೆ, ಡಿ ಆರ್ ಎಂ ಪದವಿ ಕಾಲೇಜು ಎ ವಿ ಕೆ ಕಾಲೇಜು ಸೇರಿದಂತೆ ಹಲವು ಪ್ರತಿಷ್ಠಿತ ಶಾಲೆ ಕಾಲೇಜುಗಳಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿತ್ತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ನೃತ್ಯ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ರೂಪಕಗಳನ್ನು ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...