ದಾವಣಗೆರೆ | ಜ.28ಕ್ಕೆ ಶೋಷಿತ ಸಮುದಾಯಗಳ ಬೃಹತ್‌ ಸಮಾವೇಶ

Date:

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಾವಣಗೆರೆ ಜಿಲ್ಲಾ ಶಾಖೆ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದ ಪೂರ್ವಭಾವಿ ಸಭೆಯನ್ನು ದಾವಣಗೆರೆ ನಗರದ ಸರ್ಕಾರಿ ನೌಕರ ಭವನದಲ್ಲಿ ಹಮ್ಮಿಕೊಂಡಿತ್ತು.

ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎ.ಬಿ. ರಾಮಚಂದ್ರಪ್ಪ, ನಮ್ಮ ಪುರಾತನ ಕಾಲದಿಂದಲೂ ವೈದಿಕ ಧರ್ಮವನ್ನೇ ಹಿಂದೂ ಧರ್ಮವೆಂದು ಪ್ರತಿಪಾದಿಸುತ್ತಾ, ಅವರ ಆಲೋಚನೆಗಳನ್ನೇ ನಮ್ಮಲ್ಲಿ ತುಂಬುವ ಕೆಲಸ ನಡೆಯುತ್ತಿದೆ. ಅಲ್ಲದೆ, ಶೋಷಿತ ವರ್ಗದ ನಮ್ಮ ನಮ್ಮಗಳ ಮಧ್ಯೆ ಒಡಕನ್ನು ತುಂಬುವ ಮೂಲಕ ನಮ್ಮನ್ನು ಸಮಾಜದ ಮುಖ್ಯ ವಾಹಿನಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

ನಮ್ಮ ನಮ್ಮಗಳ ಮಧ್ಯೆ ಒಡಕನ್ನು ಸೃಷ್ಟಿ ಮಾಡುವ ಮೂಲಕ ಕ್ಷುಲ್ಲಕ ಕಾರಣಗಳನ್ನೇ ಮುಂದು ಮಾಡಿಕೊಂಡು ನಮ್ಮ ನಮ್ಮ ವರ್ಗಗಳ ನಡುವೆ ಹೊಡೆದಾಡಲು ಬಿಡುತ್ತಾರೆ. ಇಂತಹ ಮೂಢನಂಬಿಕೆಗಳು ಅಥವಾ ಕಿವಿ ಚುಚ್ಚುವ ಮಾತುಗಳಿಂದ ನಾವು ಎಚ್ಚರಗೊಳ್ಳುವುದು ಯಾವಾಗ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲ ಬದಲಾದಂತೆ ಅಗ್ರಹಾರಗಳು ಬದಲಾಗುತ್ತಿವೆ. ಆದರೆ, ನಮ್ಮ  ವಾಡಿಗಳು ನಮ್ಮ ಹಟ್ಟಿಗಳು, ನಮ್ಮ ಕಾಲೋನಿಗಳು ಬದಲಾಗುತ್ತಿಲ್ಲ. ನಮ್ಮಗಳ ಬಗ್ಗೆ ನಮ್ಮ ಸಂಸ್ಕೃತಿ, ನಮ್ಮ ದೇವರು, ನಮ್ಮ ಆಚಾರ ವಿಚಾರವೇ ಮೇಲು ಎನ್ನುವ ಕಿತ್ತಾಟದಲ್ಲಿ ನಾವು ತೊಡಗಿದ್ದೇವೆ. ನಮ್ಮನ್ನು ಒಂದಾಗದಂತೆ ಮೇಲ್ವರ್ಗಗಳು ನೋಡಿ ಕೊಳ್ಳುತ್ತಿವೆ ಎಂದು ಕಿಡಿಕಾರಿದರು.

ಸಮಾರಂಭದಲ್ಲಿ ಮುಖಂಡರಾದ ಹೊದಿಗೆರೆ ರಮೇಶ್, ಹೆಗ್ಗರೆ ರಂಗಪ್ಪ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...