ದಾವಣಗೆರೆ | ಭ್ರೂಣ ಹತ್ಯೆ ಪ್ರಕರಣ; ಘಾತುಕರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Date:

ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಸದಸ್ಯರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಳೆದ ಎರಡು ವರ್ಷಗಳಿಂದ 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿರುವಂತಹ ಸಮಾಜಘಾತುಕ ಘಟನೆ ನಡೆದಿದೆ. ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆಯಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, ಆರೋಗ್ಯ ಅಧಿಕಾರಿಗಳನ್ನು ಅಮಾನತು ಪಡಿಸಿದೆ. ಅಲ್ಲದೇ ಸಿಐಡಿ ತನಿಖೆಗೆ ಒಳಪಡಿಸಿದೆ. ಶೀಘ್ರವೇ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಇಂತಹ ಸಮಾಜಘಾತುಕ ಘಟನೆಯಲ್ಲಿ ಭಾಗಿ ಯಾದವರಿಗೆ  ಶಿಕ್ಷೆ ವಿಧಿಸಿ, ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಖಾತ್ರಿಪಡಿಸಿ, ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಇನಷ್ಟು ಬಲಗೊಳಿಸಿ ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯದರ್ಶಿ ಭಾರತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...