ದಾವಣಗೆರೆ | ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ‘ಎನ್‌ಆರ್‌ಐ ಕೋಟಾ’ ರದ್ದುಪಡಿಸಿ: ಎಐಡಿಎಸ್ಓ

Date:

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್‌ಆರ್‌ಐ ಕೋಟಾವನ್ನು ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅನಿವಾಸಿ ಭಾರತೀಯ (NRI) ಕೋಟಾ ರದ್ದು ಮಾಡಲು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿ “2025-26ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15 ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವು ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿ ಶೇ. 15 ಸೀಟುಗಳನ್ನು ನೀಡಲಾಗುತ್ತಿದೆ. ಇನ್ನೂ ಶೇ.15 ಸೀಟುಗಳು ಎನ್‌ಆರ್‌ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002669570

“ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರ್ಥಿಕ ಹಿನ್ನೆಲೆ ಲೆಕ್ಕಿಸದೆ ಬಡ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಗಿದೆ. ಶ್ರೀಮಂತ ಅನಿವಾಸಿ ಭಾರತೀಯ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶವನ್ನು ನಿರಾಕರಿಸಿದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಮಯದಲ್ಲಿ, ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಸುಧಾರಿಸಲು ಆದ್ಯತೆ ನೀಡಬೇಕು. ಬೋಧಕವರ್ಗ ಮತ್ತು ಸೌಲಭ್ಯಗಳನ್ನು ಬಲಪಡಿಸುವುದು ನಿಜವಾದ ಅಗತ್ಯವಾಗಿದೆ. ಈ ಅಗತ್ಯಗಳನ್ನು ಪೂರೈಸಲು ಸರ್ಕಾರವು ಮುಂದಾಗಬೇಕು ಮತ್ತು ಶೇ.15 ಎನ್‌ಆರ್‌ಐ ಕೋಟಾ ರದ್ದುಗೊಳಿಸುವ ಮೂಲಕ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

1002669572

“ರಾಜ್ಯ ಸರ್ಕಾರದ ಈ ನಿರ್ಧಾರವು ಸರ್ಕಾರಿ ಕಾಲೇಜುಗಳನ್ನು ಖಾಸಗಿ ಕಾಲೇಜು, ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾಗಿದೆ” ಎಂದು ಎಚ್ಚರಿಸಿದರು.

ಡಿ ಆರ್ ಎಂ ಕಾಲೇಜು ವಿದ್ಯಾರ್ಥಿನಿ ಕಾವ್ಯ ಮಾತನಾಡಿ “ರಾಜ್ಯ ಸರ್ಕಾರ ಎನ್‌ಆರ್‌ಐ ಕೋಟಾ ತರುತ್ತಿರುವುದು ಬಡ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ ಸೀಟುಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಮೆರಿಟ್ ಇದ್ದು ಪ್ರತಿಭಾವಂತರಾಗಿದ್ದರೂ ಕೂಡ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಎನ್‌ಆರ್‌ಐ ಕೋಟಾ ತರುವುದರಿಂದ ವೈದ್ಯಕೀಯ ಸೀಟುಗಳಿಂದ ವಂಚಿತರಾಗುತ್ತಾರೆ. ಸಾರ್ವಜನಿಕರ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸರ್ಕಾರ ಪರಿಗಣಿಸಿ ಎನ್‌ಆರ್‌ಐ ಕೋಟಾ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್ ಸಂಘಟನಾ ಕಾರ್ಯದರ್ಶಿ ಗಂಗಾಧರ, ಮಂಜುನಾಥ ಬಿ ಹೆಚ್, ವೀರೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...