ದಾವಣಗೆರೆ | ಹಿಟ್ ಆ್ಯಂಡ್ ರನ್ ಪ್ರಕರಣದ ಸೆಕ್ಷನ್‌ಗಳನ್ನು ರದ್ದು ಮಾಡಿ, ಇಲ್ಲವೇ ತಿದ್ದುಪಡಿ ಮಾಡಿ; ಲಾರಿ ಮಾಲೀಕರ ಒತ್ತಾಯ

Date:

ಕೇಂದ್ರ ಸರ್ಕಾರ ಹೊಸದಾಗಿ ಆದೇಶಿಸಿರುವ ಭಾರತೀಯ ನ್ಯಾಯ ಸಂಹಿತೆ ಹಿಟ್ ಆ್ಯಂಡ್ ರನ್ ಪ್ರಕರಣಗಳ ಸೆಕ್ಷನ್‌ಗಳನ್ನು ರದ್ದು ಮಾಡಿ, ಇಲ್ಲವೇ ತಿದ್ದುಪಡಿ ಮಾಡಿ ಹೊಸದಾಗಿ ಕಾಯಿದೆ ಜಾರಿಗೆ ತರುವಂತೆ ದಾವಣಗೆರೆ ಲಾರಿ ಮಾಲೀಕರ ಸಂಘ, ಮಾಲೀಕರು, ಚಾಲಕರು, ಚಾಲಕರ ಸಂಘ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಸ್ ಮಾಲೀಕರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ಮತ್ತು ಲಾರಿ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಪವನ್ ಕುಮಾರ್, ಇದೇ ತಿಂಗಳ 17ರೊಳಗೆ ಸೆಕ್ಷನ್ 106/1, 106/2 ಸೆಕ್ಷನ್ ಕಾಯಿದೆಯನ್ನು ವಾಪಾಸು ಪಡೆಯಬೇಕು. ಇಲ್ಲವಾದರೆ ಜ.17ರಿಂದ ಲಾರಿ, ಬಸ್ಸುಗಳ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಭಾರತೀಯ ನ್ಯಾಯ ಸಂಹಿತೆ 106/1, 106/2ರ ಪ್ರಕಾರ ಅಪಘಾತವಾದಲ್ಲಿ, ಮೃತ ಪಟ್ಟರೆ ಚಾಲಕನಿಗೆ 5ರಿಂದ 10ವರ್ಷದ ವರೆಗೆ ಸೆರೆವಾಸ ಮತ್ತು 7ಲಕ್ಷ ದಂಡ ಕಟ್ಟಬೇಕಾಗುತ್ತದೆ. ಹಳೆಯ ಐಪಿಸಿ ಸೆಕ್ಷನ್ 304ಎ ಪ್ರಕಾರ ಚಾಲಕರಿಗೆ ಇದೇ ರೀತಿ ಅಪಘಾತ ಸಂಭವಿಸಿದಲ್ಲಿ ಮೃತ ಪಟ್ಟರೆ 2 ವರ್ಷದ ವರೆಗೆ ಮಾತ್ರ ಸೆರೆವಾಸ ಇದೆ. ಕಾರಣ ಹೊಸದಾಗಿ ಜಾರಿಗೆ ತರಲಾದ ಸೆಕ್ಷನ್‌ಗಳನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಶೇ.70ರಷ್ಟು ಜೀವನ ನಡೆಯುತ್ತಿರುವುದು ಲಾರಿ ಚಾಲಕರು ಮತ್ತು ಮಾಲೀಕರಿಂದ, ಪ್ರಸ್ತುತ ಶೇ.27ರಷ್ಟು ಚಾಲಕರ ಕೊರತೆಯನ್ನು ಭಾರತ ದೇಶ ಎದುರಿಸುತ್ತಿದೆ. ಇಂತಹ ವೇಳೆ ಕೇಂದ್ರ ಸರ್ಕಾರ ದಿಢೀರನೆ ಹೊಸ ಕಾನೂನನ್ನು ಜಾರಿಗೆ ತಂದು ಲಾರಿ ಮಾಲಿಕರು ಮತ್ತು ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ವೇಳೆ ಹಿಂಪಡೆಯದಿದ್ದಲ್ಲಿ ಇದೇ 17ರಿಂದ ಕರ್ನಾಟಕ ಲಾರಿ ಮಾಲೀಕರ ಸಂಘದವರು ಕರೆದಿರುವ ಮುಷ್ಕರಕ್ಕೆ ದಾವಣಗೆರೆ ಲಾರಿ ಮಾಲೀಕರ ಸಂಘ, ದಾವಣಗೆರೆ ಜಿಲ್ಲಾ ಮಿನಿ ಲಾರಿ ಮಾಲೀಕರು ಮತ್ತು ಚಾಲಕರ ಸಂಘ, ದಾವಣಗೆರೆ ಮಂಡಕ್ಕಿ, ಬಟ್ಟೆ ಲಾರಿ ಮಾಲೀಕರ ಸಂಘ, ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ, ಬಾತಿ ಗೂಡ್ ಶೆಡ್ ಲಾರಿ ಮಾಲೀಕರ ಸಂಘ, ದಾವಣಗೆರೆ ಡ್ರೈವರ್ಸ್ ಸಂಘ, ಬಾತಿ ಡ್ರೈವರ್ಸ್ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲ ಸೂಚಿಸಿವೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಎಸ್.ವಿ.ಮಹಾನಂದಸ್ವಾಮಿ, ಖಾಸಿಂಸಾಬ್, ವಿ.ಬಸವರಾಜ್, ಸಿದ್ದನಗೌಡ, ದಿನೇಶ್, ಇಸ್ಮಾಯಿಲ್ ಸಾಬ್, ಮೃತ್ಯುಂಜಯ, ಪ್ರದೀಪ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...