ದಾವಣಗೆರೆ | ವೇತನ ಕಡಿತ ವಿರೋಧಿಸಿ ಸೌಲಭ್ಯ ಒದಗಿಸಲು ಎಐಯುಟಿಯುಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

Date:

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

1003853645

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಅಣಬೇರು ತಿಪ್ಪೇಸ್ವಾಮಿ “ಕಳೆದ ಎರಡು ಮೂರು ತಿಂಗಳಿನಿಂದ ಹೊಸ ಏಜೆನ್ಸಿ ಹೊರಗುತ್ತಿಗೆ ನೌಕರರಿಗೆ ವೇತನ ನೀಡುತ್ತಿದ್ದು, ಡಿಸೆಂಬರ್ ಜನವರಿ ತಿಂಗಳಲ್ಲಿ ವೇತನ ಕಡಿತಗೊಳಿಸಿ ಪಾವತಿಸಿದೆ. ಹಾಗೂ ಯೂನಿಫಾರಂ, ಉದ್ಯೋಗ ಪ್ರಮಾಣ ಪತ್ರ ನೀಡಲು 5,000 ಹಣ ಕೇಳುತ್ತಿದೆ. ಅದು ಕಾರ್ಮಿಕರನ್ನು ಬೇಕಾಬಿಟ್ಟಿಯಾಗಿ ನಡೆಸಿಕೊಳ್ಳುತ್ತಿದ್ದು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ಹೆದರಿಕೆ ಹುಟ್ಟಿಸುತ್ತಿದೆ. ಸುಮಾರು ವರ್ಷಗಳಿಂದ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದು ಅವರ ಮೇಲಿನ ದೌರ್ಜನ್ಯವನ್ನು ಮತ್ತು ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ಏಜೆನ್ಸಿ, ಅಧಿಕಾರಿಗಳು ಮತ್ತು ಹೊರಗುತ್ತಿಗೆ ಕಾರ್ಮಿಕರ ಸಂಘಟನೆಯ ಸಭೆ ಕರೆಯಬೇಕು. ಸಭೆಯಲ್ಲಿ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು” ಎಂದು ಒತ್ತಾಯಿಸಿದರು.

1003853640

ಹೊರಗುತ್ತಿಗೆಯ ಹಾಸ್ಟೆಲ್ ನೌಕರೆ ರತ್ನಮ್ಮ ಮಾತನಾಡಿ “15 -20 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ವೇತನ ಚೀಟಿ, ಸಂಬಳ ಕಡಿಮೆ ಬಂದ ಬಗ್ಗೆ ಕೇಳಿದರೆ ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಬಹಳಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಹೊಸ ಏಜೆನ್ಸಿಯವರು ಎರಡು ತಿಂಗಳಿನಿಂದ ವೇತನ ಕಡಿಮೆ ನೀಡುತ್ತಿದ್ದಾರೆ. ಇದನ್ನು ಅಧಿಕಾರಿಗಳು ಗಮನಿಸಿ ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003853647

ಸಂಘಟನೆಯ ಮುಖಂಡ ಹಾಸ್ಟೆಲ್ ನೌಕರ ರವಿನಾಯ್ಕ ಮಾತನಾಡಿ “ಇಎಸ್ಐ ಪಿಎಫ್ ಸರಿಯಾಗಿ ಪಾವತಿಯಾಗುತ್ತಿಲ್ಲ. ಕಡಿಮೆ ಸಂಬಳ ನೌಕರರಿಗೆ ಪಾವತಿಯಾಗುತ್ತದೆ. ಉತ್ತಮ ಸೌಲಭ್ಯ ಸಿಗುತ್ತಿಲ್ಲ, ಏಜೆನ್ಸಿಯವರು ಹೊರಗುತ್ತಿಗೆ ನೌಕರರನ್ನು ದೌರ್ಜನ್ಯದಿಂದ ನಡೆಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಸಭೆ ನಡೆಸಿ ಏಜೆನ್ಸಿ ಅವರೊಂದಿಗೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

1003853646

ಪ್ರತಿಭಟ ನಿರತ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೇ ಮಾಧವ ವಿಠಲರಾವ್ ಕೂಡಲೇ ಏಜೆನ್ಸಿಯವರೊಂದಿಗೆ ಮಾತನಾಡಿ ಸದ್ಯದಲ್ಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸಿದ್ಗಮನಹಳ್ಳಿ ನಿಂಗರಾಜ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ, ಮನೋಹರ್, ಜಿಲ್ಲಾ ಮುಖಂಡರಾದ ಸ್ವಾಮಿ ನಿಂಗಪ್ಪ, ಮುಖಂಡರಾದ ರಂಗನಾಥ್, ಹಾಲೇಶ್, ರಂಗಮ್ಮ, ಸುಮಾ, ಹನುಮಂತಪ್ಪ, ಶಾಂತಕುಮಾರ್, ರತ್ನಮ್ಮ ನವೀನ್ ಜ್ಯೋತಿ ಗಿರಿಜಮ್ಮ ಮಂಜುನಾಥ್ ಹರೀಶ್, ಯೋಗೇಶ್, ಗಿರಿಜಮ್ಮ, ದೇವಿ ರೂಪ, ಗಂಗಮ್ಮ, ಜ್ಯೋತಿ, ಪರಮೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...