ದಾವಣಗೆರೆ | ಮದ್ಯ ಮಾದಕ ವಸ್ತುಗಳಿಂದ ಸಮಾಜದ ಆರೋಗ್ಯ ಸದೃಢತೆ ಕುಂಠಿತ: ನ್ಯಾ.ಮ ಕರೆಣ್ಣನವರ್

Date:

“ಇಂದಿನ ಸಮಾಜದಲ್ಲಿ ಜನರ ಆರೋಗ್ಯ ಮತ್ತು ಆರ್ಥಿಕ ಸದೃಢತೆಯನ್ನು ಮದ್ಯ ಹಾಗೂ ಮಾದಕ ವಸ್ತುಗಳು ಕುಂಠಿತಗೊಳಿಸುತ್ತಿವೆ. ಇದರ ವಿರುದ್ಧ ಸರಿಯಾದ ಜಾಗೃತಿ ಮತ್ತು ಸ್ಪಷ್ಟ ಮಾಹಿತಿ ಎಲ್ಲರಿಗೂ ತಲುಪಿಸಬೇಕು” ಎಂದು ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಕರೆ ನೀಡಿದರು.

ಅ.15 ರಂದು ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ “ಮಾದಕ ವ್ಯಸನಮುಕ್ತ ಕರ್ನಾಟಕದ ನಿರ್ಮಾಣ ಮಾಡೋಣ ಹಾಗೂ ದೇಶವನ್ನು ಸದೃಢಗೊಳಿಸಲು ಸಹಕರಿಸೋಣ” ಎನ್ನುವ ಘೋಷವಾಕ್ಯ, ಧ್ಯೇಯಗಳೊಂದಿಗೆ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಸೂಕ್ತ ಜಾಗೃತಿ, ಸಲಹೆ ಸೂಚನೆ, ಪುನರ್ವಸತಿ ಹಾಗೂ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಸೂಕ್ತ ಕ್ರಮ ಜರುಗಿಸಬೇಕು” ಎಂದು ಸೂಚಿಸಿದರು.

“ವಿದ್ಯಾಭ್ಯಾಸಕ್ಕೆ ಮಾರಕವಾಗುವ ಮಾದಕ ವ್ಯಸನಕ್ಕೆ ಬಲಿಯಾಗದಂತೆ ವಿದ್ಯಾರ್ಥಿಗಳನ್ನು ಮನವೊಲಿಸೋಣ, ಜನರಿಗೆ ಅನಾರೋಗ್ಯ ಉಂಟುಮಾಡುವ ಮಾದಕ ವಸ್ತುಗಳಿಂದ ದೂರ ಇರೋಣ, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮಾದಕ ವ್ಯಸನದಿಂದ ದೂರ ಸರಿಸೋಣ, ಮತ್ತು ವೈಯಕ್ತಿಕ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ತಡೆಯಾಗಿರುವ ಮಾದಕ ವ್ಯಸನದಿಂದ ಮುಕ್ತರಾಗೋಣ” ಎಂದು ಎಲ್ಲಾ ಯುವಜನತೆಗೆ ಸಂದೇಶವನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಅಧಿಕಾರಿ ಡಾ.ಕೆ. ಕೆ.ಪ್ರಕಾಶ್ ಮಾತನಾಡಿ “ಮಾದಕ ವಸ್ತು ಸೇವಿಸುವವರು ಕಂಡುಬಂದಲ್ಲಿ ಸಮೀಪದ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರಗಳನ್ನು ಸಂಪರ್ಕಿಸಲು ಸೂಚಿಸಿದರು. ಅದೇ ರೀತಿ ಪೊಲೀಸ್ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡುವಂತೆ ಮತ್ತು ಡ್ರಗ್ ಫ್ರೀ ಕರ್ನಾಟಕ ಆಪ್ ಮೂಲಕ ಮಾಹಿತಿ ಪಡೆಯಲು ಅವಕಾಶವಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

ಈ ವೇಳೆ ಹಲವು ಇಲಾಖೆಗಳ ಸಹಯೋಗದೊಂದಿಗೆ ತಯಾರಿಸಲಾದ ಬಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷೆ ಮಂಜುಳಾ ಮತ್ತು ಸದಸ್ಯರಾದ ದುರ್ಗಪ್ಪ, ನಾಗರಾಜು ನಾಯಕ ಮತ್ತು ಇತರೆ ವಕೀಲರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...