ದಾವಣಗೆರೆ | ಹಕ್ಕುಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಒಗ್ಗಟ್ಟಾಗಿ ಹೋರಾಟ ಮಾಡಿ: ಸಂಘಟನಾ ಸಭೆ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗಟ್ಟಾಗಿ ಹೋರಾಟ ಮಾಡಿದರೆ ಮಾತ್ರ ನಮ್ಮ ಹಕ್ಕು ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಸಂಘಟನಾ ಸಭೆಯಲ್ಲಿ ಸಹಾಯಕಿಯರ ಫೆಡರೇಷನ್ ನ(ಎಐಟಿಯುಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಜಯಮ್ಮ ಕರೆ ನೀಡಿದರು.

ಹೊನ್ನಾಳಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ನಡೆದ ನ್ಯಾಮತಿ ಮತ್ತು ಹೊನ್ನಾಳಿ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನಾ ಸಭೆಯನ್ನುದ್ದೇಶಿಸಿ ಮಾತನಾಡಿ “ಎಐಟಿಯುಸಿ ಒಂದು ಆಲದ ಮರ ಇದ್ದಂತೆ ಇದರ ಅಡಿಯಲ್ಲಿ ಅನೇಕ ದುಡಿಯುವ ವರ್ಗದ ಜನರು ಸಂಘಟಿತರಾಗಿ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ” ಎಂದು ತಿಳಿಸಿದರು.

“106 ವರ್ಷಗಳ ಇತಿಹಾಸ ಇರುವ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೋರಾಟ ನಡೆಸಿ ನಾವು ಕೂಡ ಹಲವಾರು ಸವಲತ್ತುಗಳನ್ನು ಪಡೆದುಕೊಂಡಿದ್ದೇವೆ. ಇದುವರೆಗೂ ಅಂಗನವಾಡಿ ಕಾರ್ಯಕರ್ತೆಯರು ಏನೆಲ್ಲಾ ಪಡೆದುಕೊಂಡಿದ್ದೇವೆ ಅದನ್ನು ಹೋರಾಟ ಮಾತ್ರದಿಂದಲೇ ಪಡೆದಿರುವುದು ಎಂಬುದನ್ನು ಮರೆಯಬಾರದು” ಎಂದು ಎಚ್ಚರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002976187

“ಆಳುವ ಸರ್ಕಾರಗಳು ನಮ್ಮನ್ನು ಕಡೆಗಣಿಸುತ್ತಿದ್ದು ಐಸಿಡಿಎಸ್ ಯೋಜನೆ, ದೇಶದಲ್ಲಿ 50 ವರ್ಷ ಪೂರೈಸಿದ್ದು ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಖಾಯಂ ಗೊಳಿಸದೆ ವಂಚನೆ ಮಾಡಿದೆ, ಗ್ರಾಚುಯಿಟಿ ಜಾರಿ ಬಂದಿದ್ದು ಕೂಡ ನಮ್ಮ ಹೋರಾಟದಿಂದ ಎಫ್ ಆರ್ ಎಸ್ ನಲ್ಲಿ ಓಟಿಪಿ ಬರದಿದ್ದರೆ ಫಲಾನುಭವಿಗಳಿಗೆ ಆಹಾರ ಕೊಡಲಾಗುತ್ತಿಲ್ಲ ಇದರಿಂದ ಫಲಾನುಭವಿಗಳಿಗೂ ಅನ್ಯಾಯವಾಗುತ್ತಿದೆ ಆದ್ದರಿಂದ ಸರ್ಕಾರ ಎಫ್ ಆರ್ ಎಸ್ ಅನ್ನು ಹಿಂಪಡೆಯಬೇಕು ಮತ್ತು ಫಲಾನುಭವಿಗಳಿಗೆ ಉತ್ತಮವಾದ ಪೌಷ್ಟಿಕಾಂಶವುಳ್ಳ ಆಹಾರವನ್ನು ಕೊಡಲು ಒತ್ತಾಯಿಸಬೇಕು” ಎಂದು ಒತ್ತಾಯಿಸಿದರು.‌

“ಐಸಿಡಿಎಸ್ ಯೋಜನೆಗೆ ದೇಶದಲ್ಲಿ 50 ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸರ್ಕಾರವು ಖಾಯಂ ಗೊಳಿಸುವುದರ ಜೊತೆಗೆ ಪೆನ್ಷನ್ ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಿ ದಿಟ್ಟವಾದ ಹೋರಾಟ ಮಾಡಬೇಕು. ಸಂಘಟನೆ ಹೋರಾಟಕ್ಕೆ ಕರೆ ಕೊಟ್ಟಾಗ ಸಾಗರದಂತೆ ನುಗ್ಗಿ ಎಲ್ಲಾ ಕಾರ್ಯಕರ್ತರು ಭಾಗವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ, ಭಾಷೆ, ಧರ್ಮದ ಸಂಕೋಲೆಯಿಂದ ಹೊರಬಂದು ನಾಗರೀಕರಾಗಿದ್ದೇವೆಯೇ: ಚಿಂತಕ ಹರಿರಾಮ್

ಸಭೆಯಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹೊನ್ನಾಳಿ ತಾಲೂಕು ಸಮಿತಿ ಅಧ್ಯಕ್ಷರಾದ ಚನ್ನಮ್ಮ, ರಾಜ್ಯ ಸಂಚಾಲಕ ಆವರಗೆರೆ ಚಂದ್ರು, ಎಐಟಿಯುಸಿಯ ಸುರೇಶ್ , ಶೇಖರಪ್ಪ, ಪಂಪಾಪತಿ, ರೈತ ಕಾರ್ಮಿಕರ ಕಲ್ಯಾಣ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಹೆಚ್ ಜಿ ಉಮೇಶ್ ಮತ್ತು ಅಂಗನವಾಡಿ ಸಂಘಟನೆಯ ಜಿಲ್ಲಾಧ್ಯಕ್ಷೆ ಎಸ್ ಎಸ್ ಮಲ್ಲಮ್ಮ, ಪ್ರಧಾನ ಕಾರ್ಯದರ್ಶಿ ಹೊಸಳ್ಳಿ ಮಂಜುಳಾ, ಜಿಲ್ಲಾ ಮುಖಂಡರುಗಳಾದ ಮಮತ, ಸುಶೀಲ, ವಸಂತ, ಕೆ ಜಿ ಗೀತ, ರೇಣುಕಾ ಸೇರಿದಂತೆ ಇತರೆ ಕಾರ್ಯಕರ್ತೆಯರು ಸಹಾಯಕಿಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...