ದಾವಣಗೆರೆ | ಗೌರವದನ ಹೆಚ್ಚಳ ಹಾಗೂ ಕೈಬಿಡುವ ಪ್ರಕ್ರಿಯೆ ನಿಲ್ಲಿಸಲು ಆಶಾ ಕಾರ್ಯಕರ್ತೆಯರ ಹೋರಾಟ

Date:

ಕಳೆದ ಬಾರಿ ಆಶಾ ಕಾರ್ಯಕರ್ತೆಯರ ಹೋರಾಟದ ಸಂದರ್ಭದಲ್ಲಿ ಮಾಸಿಕ 10 ಸಾವಿರ ರೂಪಾಯಿಗಳನ್ನು ಭರವಸೆ ನೀಡಿದ್ದು ಇಲ್ಲಿಯವರೆಗೆ ಆದೇಶ ಆಗಿಲ್ಲ, ಹಾಗೂ ಕಳೆದ ಬಜೆಟ್ಟಿಯಲ್ಲಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ 1000 ರೂ. ಹೆಚ್ಚಿಸುವ ಭರವಸೆ ನೀಡಲಾಗಿತ್ತು.‌ ಆಶಾ ಕಾರ್ಯಕರ್ತೆಯರಿಗೆ ಇಲ್ಲಿವರೆಗೂ ವೇತನ ಹೆಚ್ಚಳ ಮಾಡಿಲ್ಲ. ಈ ಕೂಡಲೇ ಕೊಟ್ಟ ಭರವಸೆಯಂತೆ, ರಾಜ್ಯ ಸರ್ಕಾರ, ಆರೋಗ್ಯ ಸಚಿವರು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು, ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಕೆಲಸದಿಂದ ಕೈ ಬಿಡುವ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಎಐಯುಟಿಯುಸಿ -ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆಯರ ಸಂಘದ ಗೌರವಾಧ್ಯಕ್ಷ ಮಂಜುನಾಥ್ ಕುಕ್ಕುವಾಡ, “ಕಳೆದ ಬಾರಿಯ ಪ್ರತಿಭಟನೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಯಾವುದೇ ವೇತನ ಹೆಚ್ಚಳ ಆಗಿಲ್ಲ. ಅಲ್ಲದೆ ಹೊರಗುತ್ತಿಗೆ ಡಿ ಗ್ರೂಪ್ ಆಸೆ ತೋರಿಸಿ ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಆದೇಶ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1003777983

“ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಆಶಾ ಕಾರ್ಯಕರ್ತೆಯರು ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಹೋರಾಟಕ್ಕಿಳಿದಿದ್ದು ಮಾರ್ಚ್ 2026ರ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೌರವಧನ ಒಟ್ಟಿಗೆ ಮಾಸಿಕ 15,000, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 8,000 ರೂ. ಬಜೆಟ್ ನಲ್ಲಿ ಘೋಷಣೆ, ಪಶ್ಚಿಮ ಬಂಗಾಳ ಮಾದರಿಯಲ್ಲಿ ನಿವೃತ್ತರಿಗೆ ಇಡುಗಂಟು ನೀಡಬೇಕು, ತೀವ್ರ ರೋಗಗಳ ಚಿಕಿತ್ಸಾ ವೆಚ್ಚಕ್ಕೆ ಕಾರ್ಪಸ್ ಫಂಡ್ ಸ್ಥಾಪನೆ, ಆರೋಗ್ಯ ಸಮಸ್ಯೆಯ ಸಮಯದಲ್ಲಿ ನಿಶ್ಚಿತ ಗೌರವದನ ಪಾವತಿಸಬೇಕು” ಎಂದು ಒತ್ತಾಯಿಸಿದರು.

1003777982

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶ್ರೀಮತಿ ಲಲಿತಮ್ಮ ಮಾತನಾಡಿ, “ಕೇಂದ್ರದ ಮಾರ್ಗಸೂಚಿ ಉಲ್ಲಂಘಿಸಿ ಆಶಾ ಕಾರ್ಯಕರ್ತೆಯನ್ನು ಕೈ ಬಿಡುವ ಪ್ರಕ್ರಿಯೆ ನಿಲ್ಲಿಸಬೇಕು, ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ಒಂದು ವರ್ಷದ ಹಿಂಬಾಕಿ ನೀಡಬೇಕು. ಕೆಲವು ವರ್ಷಗಳಿಂದ ಬಾಕಿ ಇರುವ ಕಂಪೋನೆಂಟ್ ಗಳ ಹಣ ಬಿಡುಗಡೆ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಸರ್ವೇ ಮಾಡಿದ 1000 ರೂ. ಹಣ ಬಿಡುಗಡೆ ಮಾಡಬೇಕು. ಬೇಡಿಕೆಗಳನ್ನು ಕೂಡಲೇ ಬಜೆಟ್ ನಲ್ಲಿ ಘೋಷಿಸಿ ಅನುದಾನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟ ಅವಧಿಯ ತೀವ್ರ ಹೋರಾಟವನ್ನು ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ಮುಖಂಡರಾದ ಇಂದಿರಾ ಎಸ್ಆರ್ ಮಲ್ಲಾಪುರ, ಲೀಲಾವತಿ ಬಿದರಕೆರೆ, ರೂಪ ಕೊಂಡದಳ್ಳಿ, ಅಂಜಲಿ ಸೇವಾನಗರ, ಕವಿತಾ ಸಂತೆಬೆನ್ನೂರು, ಚೀಲೂರು ಮಂಜಮ್ಮ, ಕೊಕ್ಕನೂರು ರಾಧಾ, ಗುತ್ತೂರು ಗೀತಾ, ವೇದ ಹರಿಹರ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...