ದಾವಣಗೆರೆ | ಭದ್ರಾ ಜಲಾಶಯ ಸಮೀಪ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬಂದ್

Date:

ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ.‌ ದಾವಣಗೆರೆ ನಗರದ ಕೇಂದ್ರ ಭಾಗದಲ್ಲಿ ಅಲ್ಲಲ್ಲಿ ಮಾತ್ರ ಬಂದ್ ಆಗಿತ್ತು. ಜನಜೀವನ ಎಂದಿನಂತೆ ಇತ್ತು. ಆಟೋ, ವಾಹನಗಳು, ಬಸ್ ಸಂಚಾರ, ಹೊಟೇಲ್ ಸೇರಿದಂತೆ ಎಲ್ಲವೂ ಎಂದಿನಂತೆ ಸಹಜ ಸ್ಥಿತಿಯಲ್ಲಿ ಮುಂದುವರಿಯಿತು.

1002227694

ಬಿಜೆಪಿ ಮುಖಂಡರು ಬೆಳಿಗ್ಗೆಯಿಂದಲೇ ಬಂದ್ ಗೆ ಸಹಕರಿಸುವಂತೆ ಮನವಿ ಮಾಡಿದರು. ಜನರು, ವರ್ತಕರು ಬೆಳಿಗ್ಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಹನ್ನೆರಡು ಗಂಟೆಯ ನಂತರ ಸಹಜವಾಗಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದರು.

ರೈತರಿಗಾಗಿ ಬಂದ್ ಗೆ ಬೆಂಬಲ ನೀಡುವಂತೆ ವರ್ತಕರು, ಬಸ್, ಲಾರಿ ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಹೋಟೆಲ್ ಮತ್ತು ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್, ಕೊಳೇನಹಳ್ಳಿ ಸತೀಶ್ ಸೇರಿದಂತೆ ಹಲವರು ಮನವಿ ಮಾಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002227692

ವ್ಯಾಪಾರ ವಹಿವಾಟುಗಳು ನಗರದ ಕೇಂದ್ರ ಭಾಗದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಸ್ಥಗಿತಗೊಂಡಿದ್ದವು. ಆದರೆ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ಮುಂದುವರೆದವು. ಇದರಿಂದಾಗಿ ಜಿಲ್ಲಾ ರೈತ ಒಕ್ಕೂಟ ಕರೆ ನೀಡಿದ ದಾವಣಗೆರೆ ನಗರ ಸಂಪೂರ್ಣ ಯಶಸ್ವಿಯಾಗಲಿಲ್ಲ. ಸ್ವಲ್ಪ ಮಟ್ಟಿಗೆ ಪ್ರತಿಕ್ರಿಯೆ ಮಾತ್ರ ಇತ್ತು. ಲೋಕಿಕೆರೆ ನಾಗರಾಜ್, ಬಿ. ಜಿ. ಅಜಯ್ ಕುಮಾರ್, ರೇಣುಕಾಚಾರ್ಯ ಮತ್ತು ಕಾರ್ಯಕರ್ತರು ಬೆಳ್ಳಂಬೆಳಿಗ್ಗೆಯೇ ಪ್ರಮುಖ ವೃತ್ತಗಳಲ್ಲಿ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಖಾಸಗಿ ಬಸ್ ಗಳ ಚಾಲಕರು, ಆಟೋಚಾಲಕರಿಗೆ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

1002227687

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಖಾಂತರ ನೀರು ಬಿಡಲು ಭದ್ರಾ ಬಲದಂಡೆ ನಾಲೆಗೆ ಪೈಪ್ ಲೈನ್ ಕಾಮಗಾರಿ ಮಾಡಲಾಗುತ್ತಿದೆ. ಬಿಜೆಪಿ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಯೋಚನೆ ಅವೈಜ್ಞಾನಿಕವಾಗಿದ್ದು ಇದರಿಂದ ದಾವಣಗೆರೆ ಭಾಗದ ರೈತರಿಗೆ ಅನ್ಯಾಯವಾಗಲಿದೆ. ಕೂಡಲೇ ಕಾಮಗಾರಿ ನಿಲ್ಲಿಸಿ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಿದ್ದರಿಂದ ಜಿಲ್ಲಾ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

ಯೋಜನೆ ವಿರೋಧಿಸಿ ದಾವಣಗೆರೆ ನಗರ ಬಂದ್ ಮಾಡಲಾಗಿತ್ತು.‌ ಮುಂಬರುವ ದಿನಗಳಲ್ಲಿ ಭದ್ರಾ ಅಚ್ಚುಕಟ್ಟು ತಾಲೂಕುಗಳಲ್ಲಿ ಬಂದ್ ನಡೆಸುವ ಕುರಿತಂತೆ ಚರ್ಚೆ ನಡೆಸಲಾಗಿದೆ.‌ ಬಂದ್ ವೇಳೆ ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ತೊಂದರೆಯಾಗಲಿಲ್ಲ. ಸಂಪೂರ್ಣವಾಗಿ ಶಾಂತಿಯುತವಾಗಿ ನಡೆದಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...