ದಾವಣಗೆರೆ | ಬ್ಯಾಡ್ಜ್ ಧರಿಸಿ ಬ್ಯಾಂಕ್ ನೌಕರರ ಪ್ರತಿಭಟನೆ; ಫೆ.12ರ ಮುಷ್ಕರದಲ್ಲೂ ಭಾಗಿ

Date:

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕರೆಯ ಮೇರೆಗೆ ದಾವಣಗೆರೆಯ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಸೋಮವಾರ ತಮ್ಮ ಕೆಲಸದ ವೇಳೆಯಲ್ಲಿ ಪ್ರತಿಭಟನಾರ್ಥವಾಗಿ ಬ್ಯಾಡ್ಜ್ ಧರಿಸಿ ಕೆಲಸ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರದ ಗಮನ ಸೆಳೆದರು. ಫೆಬ್ರವರಿ 12 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಸಹ ಭಾಗಿಯಾಗಲಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತಿಳಿಸಿದರು.

ಈ ವೇಳೆ ಮಾತನಾಡಿದ ಮುಖಂಡರು “ನೌಕರರ ಹಕ್ಕುಗಳ ಮೇಲೆ, ನೌಕರರ ಉದ್ಯೋಗ ಮತ್ತು ಉದ್ಯೋಗ ಭದ್ರತೆಯ ಮೇಲೆ ಅವ್ಯಾಹತವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ, ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ವಿರೋಧಿಸಿ, ಖಾಯಂ ಉದ್ಯೋಗ ನೀಡದಿರುವುದನ್ನು ಖಂಡಿಸಿ ಬ್ಯಾಂಕ್ ನೌಕರರು ಫೆಬ್ರವರಿ 12 ರ ಮುಷ್ಕರದಲ್ಲಿ ಭಾಗವಹಿಸುವರು” ಎಂದು ಹೇಳಿದರು.

ಪ್ರತಿಭಟನೆಯ ಭಾಗವಾಗಿ ದಾವಣಗೆರೆಯ ವಿದ್ಯಾನಗರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಉದ್ಯೋಗಿಗಳು ಬ್ಯಾಡ್ಜ್ ಧರಿಸಿ ಕೆಲಸ ಮಾಡುವ ಮೂಲಕ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟ ಧರಣಿ; ವಿವಿಧ ಸಂಘಟನೆಗಳ ಮುಖಂಡರ ಬೆಂಬಲ

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...