ದಾವಣಗೆರೆ | ಸೇವಾಲಾಲ್ ಜಯಂತಿಯಲ್ಲಿ ಡಿಕೆ ಶಿವಕುಮಾರ್ ಗೆ ಕಪ್ಪುಬಟ್ಟೆ ಗೋಬ್ಯಾಕ್ ಘೋಷಣೆ

Date:

ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಗೋಬ್ಯಾಕ್ ಎಂದು ಪ್ರತಿಭಟಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಸಮೀಪದ ಸೂರಗೊಂಡನಕೊಪ್ಪದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಯಲ್ಲಿ ನಡೆದಿದೆ. ಇದರಿಂದ ಸ್ವಲ್ಪ ಮುಜುಗರಕ್ಕೆ ಒಳಗಾದಂತೆ ಕಂಡುಬಂದ ಡಿಸಿಎಂ ಡಿಕೆ ಶಿವಕುಮಾರ್ ಭಾಷಣದ ವೇಳೆ “ಗೋಬ್ಯಾಕ್ ಎಂದರೆ ಜಗ್ಗುವ ಮಗ ಡಿಕೆ ಶಿವಕುಮಾರ್ ಅಲ್ಲ” ಎನ್ನುವ ಮೂಲಕ ಎದಿರೇಟು ನೀಡಿದರು.‌

ಸೂರಗೊಂಡನಕೊಪ್ಪದ ಭಾಯಾಗಡದಲ್ಲಿ ಸಂತ ಸೇವಾಲಾಲ್ ಅವರ 287ನೇ ಜಯಂತಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಸಭಾಂಗಣದಲ್ಲಿದ್ದ ಬಹುತೇಕ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಒಳಮೀಸಲಾತಿ ನೀತಿಯಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಡಿ.ಕೆ.ಶಿವಕುಮಾರ ಮುಜುಗರಕ್ಕೆ ಒಳಗಾದರು.

1003690601

ಒಳಮೀಸಲಾತಿ ವಿರೋಧಿಸುವ ಭಿತ್ತಿಪತ್ರ, ಫಲಕ ಪ್ರದರ್ಶನ ಮಾಡಿದರು. ಅಲ್ಲದೇ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಮಾಜಿ ಶಾಸಕ ರಾಜೀವ ಮಾತನಾಡಿ, “ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಅವರಿಗೆ ಗೌರವ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ “ಇದು ನಮ್ಮ ಸಮುದಾಯದ ಧಾರ್ಮಿಕ ಕಾರ್ಯಕ್ರಮ, ಎಲ್ಲರೂ ಇಲ್ಲಿ ಗೌರವ ನೀಡಬೇಕು. ಸಮುದಾಯದ ಜನರು ಇದಕ್ಕೆ ಸಹಕಾರ ನೀಡಬೇಕು. ಎಲ್ಲರೂ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳೋಣ’’ ಎಂದರು.

ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
“ಧಾರ್ಮಿಕ ಕಾರ್ಯಕ್ರಮದಲ್ಲಿ ಹೋರಾಟ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಯಾರೇ ಗೋಬ್ಯಾಕ್ ಎಂದರೂ ಈ ಡಿ.ಕೆ. ಶಿವಕುಮಾರ್ ಜಗ್ಗುವ ಮಗ ಅಲ್ಲ. ಈ ವಿಚಾರ ರಾಜೀವ್ ಅವರಿಗೂ ಗೊತ್ತಿದೆ. ನಾನು, ವೈದ್ಯ ಅವರು, ಬೋಸರಾಜು ಅವರು, ರುದ್ರಪ್ಪ ಲಮಾಣಿ ಅವರು, ಸಂಸದರು, ಗಣ್ಯರು ನಿಮ್ಮ ಜತೆಯಲ್ಲಿದ್ದೇವೆ. ನಿಮ್ಮ ಬದುಕಿನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಚುನಾವಣೆ ಇದ್ದಾಗ ರಾಜಕಾರಣ ಮಾಡೋಣ. ಗೋಬ್ಯಾಕ್ ಎನ್ನುವವರಿಗಿಂತ ಕಮ್ ಬ್ಯಾಕ್ ಎನ್ನುವ ಜನ ಹೆಚ್ಚಾಗಿದ್ದಾರೆ” ಎಂದು ತಿಳಿಸಿದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳು ಬಿಜೆಪಿಯವರ ಪ್ರತಿಭಟನೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡಿಸಿದೆ. ಒಳಮೀಸಲಾತಿ ವಿಚಾರದಲ್ಲಿ 6-6-5 ಸೂತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಒಂದು ನೂರು ಜನರ ಕೈಯಲ್ಲಿ ಈ ರೀತಿಯ ಕೆಲಸ ಮಾಡಿಸುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು‌.

“ಬಂಜಾರ ಸಮುದಾಯಕ್ಕೆ ಎಸ್.ಸಿ ಸ್ಥಾನಮಾನ, ಅಭಿವೃದ್ಧಿ ನಿಗಮ ಮಾಡಿದ್ದು ಕಾಂಗ್ರೆಸ್ ಪಕ್ಷ. ತಾಂಡಾಗಳಿಗೆ ಹಕ್ಕು ಪತ್ರ ನೀಡಿದ್ದು ನಾವು. ಒಳ್ಳೆಯ ಜನರ ಪರವಾಗಿ ನಾವು ಎಂದಿಗೂ ಇರುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಸಭೆ

ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಬಿವೈ, ಸಚಿವ ಬೋಸರಾಜು, ಸಭಾಪತಿ ರುದ್ರಪ್ಪ ಲಮಾಣಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಶಾಸಕ ಬಿಪಿ ಹರೀಶ್, ಶಾಸಕ ಶಾಂತನಗೌಡ, ರೇಣುಕಾಚಾರ್ಯ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು, ಸಮುದಾಯದ ಜನ ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...